TATA: ಇನ್ನು 2 ವಾರದಲ್ಲಿ ಹೊಸ ಟಾಟಾ ಕಾರು ಬಿಡುಗಡೆ? ಬೆಲೆ & ವಿಶೇಷತೆಗಳ ಕುರಿತ ಪ್ರಮುಖಾಂಶಗಳಿವು!

ಟಾಟಾ ಮೋಟಾರ್ಸ್ (Tata Motors), ದಶಕಗಳ ಬಳಿಕ, ಹೊಸ ರೂಪದಲ್ಲಿ 'ಸಿಯೆರಾ' ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ ಕಾರು ನವೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಮಾರಾಟಕ್ಕೂ ಬರಲಿದೆ. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿರಲಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಲಿದೆ. ಕೈಗೆಟುಕುವ ದರದಲ್ಲೂ ಪರಿಚಯಿಸಬಹುದು. ಬನ್ನಿ, ನೂತನ 'ಸಿಯೆರಾ'ದ ಬೆಲೆ ಎಷ್ಟಿರಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ (Price):

ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿ, ಇಂಧನ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ಚಾಲಿತ ರೂಪದಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ಕನಿಷ್ಠ ರೂ.11 ಲಕ್ಷ ಮತ್ತು ಗರಿಷ್ಠ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

New Tata Sierra Suv Launch In November 2025 Here The Top Things

ವಿನ್ಯಾಸ (Design):

ಈ ಎಸ್‌ಯುವಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿರಲಿದ್ದು, ನೋಡುಗರ ಕಣ್ಣು ಕುಕ್ಕುವಂತೆಯೂ ಇರಲಿದೆ. ಇದೇ ವರ್ಷಾರಂಭದಲ್ಲಿ ಕೊನೆಗೊಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲೂ 'ಸಿಯೆರಾ' ಕಾರನ್ನು ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಒಳಗೊಂಡಿತ್ತು.

ಸುತ್ತಳತೆ (Dimensions):

ನೂತನ 'ಸಿಯೆರಾ' ದೊಡ್ಡ ಗಾತ್ರದ ಕಾರಾಗಿದೆ. 4,300 ಮಿ.ಮೀ ಉದ್ದ, 1,800 ಮಿ.ಮೀ ಅಗಲ ಮತ್ತು 1,600 ಮಿ.ಮೀ ಎತ್ತರವಿರುವ ನಿರೀಕ್ಷೆಯೂ ಇದೆ. ಹಾಗೆಯೇ 200 ಮಿ.ಮೀ ಗ್ರೌಂಡ್ ಕ್ಲಿಯರೆನ್ ಹಾಗೂ 2,650 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

New Tata Sierra Suv Launch In November 2025 Here The Top Things

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 450 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿಯಲಿದೆ ಎನ್ನಲಾಗಿದೆ.

ಕಾರ್ಯಕ್ಷಮತೆ (Perfomence):

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದರ ಇಂಧನ ಚಾಲಿತ ಮಾಡೆಲ್ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಹಾಗೂ 1.5-ಲೀಟರ್ ಟರ್ಬೊ ಡೀಸೆಲ್ ಎಂಜಿನ್‌ನ್ನು ಒಳಗೊಂಡಿರುವ ನಿರೀಕ್ಷೆಯಿದೆ. 20 ಕಿ.ಮೀವರೆಗೆ ಮೈಲೇಜ್ ನೀಡಬಹುದು ಎನ್ನಲಾಗಿದೆ. ಎಲೆಕ್ಟ್ರಿಕ್ ಚಾಲಿತ ಮಾಡೆಲ್ 65 ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುವ ಸಾಧ್ಯತೆಯಿದೆ.

ವೈಶಿಷ್ಟ್ಯಗಳು (Features):

ನೂತನ 'ಸಿಯೆರಾ' ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರಲಿದೆ. ಬಹುಮುಖ್ಯವಾಗಿ 14.5 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ಕೀಲೆಸ್ ಎಂಟ್ರಿ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದುಕೊಂಡಿರುವ ಸಾಧ್ಯತೆಯಿದೆ.

ಪ್ರತಿಸ್ಪರ್ಧಿ ಕಾರುಗಳು (Rival cars):

ಈ ಕಾರಿಗೆ ಸಾಲು ಸಾಲು ಎದುರಾಳಿಗಳಿವೆ. ವಿಶೇಷವಾಗಿ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ವಿಕ್ಟೋರಿಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರೈಡರ್, ಹೋಂಡಾ ಎಲಿವೇಟ್‌, ಫೋಕ್ಸ್‌ವ್ಯಾಗನ್ ಟೈಗುನ್, ಸ್ಕೋಡಾ ಕುಶಾಕ್, ಸಿಟ್ರನ್ ಏರ್‌ಕ್ರಾಸ್ ಹಾಗೂ ಎಂಜಿ ಆಸ್ಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

More from DriveSpark

Article Published On: Friday, October 24, 2025, 8:30 [IST]
English summary
New tata sierra suv launch in november 2025 here the top things
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+