Tata: ಮೊದಲ ಬಾರಿಗೆ ಕಾಣಿಸಿಕೊಳ್ತು ಟಾಟಾದ 'ಹಳೆ ಹುಲಿ'.. ಶೀಘ್ರ ಬಿಡುಗಡೆ, ಯಾವುದು?

ಟಾಟಾ ಸಿಯೆರಾ (Tata Sierra) ಪ್ರಖ್ಯಾತ ಎಸ್‌ಯುವಿಯಾಗಿ ಮನೆ ಮಾತಾಗಿತ್ತು. ಭಾರತದ ರಸ್ತೆಯಲ್ಲಿ ಈ ಕಾರು ದಶಕಗಳ ಕಾಲ ಅಧಿಪತ್ಯ ಸಾಧಿಸಿತ್ತು. ಆದರೆ, ಕಾರಣಾಂತರಗಳಿಂದ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿತು. ಸದ್ಯ ಕಂಪನಿಯು ಇದೇ ಕಾರನ್ನು ನೂತನ ರೂಪದಲ್ಲಿ ಬಿಡುಗಡೆಗೊಳಿಸಲು ಸಿದ್ದವಾಗಿದ್ದು, ಹೋದ ತಿಂಗಳು (ಜನವರಿ - 2025) ನವದೆಹಲಿಯಲ್ಲಿ ಅದ್ದೂರಿಯಾಗಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಉತ್ಪಾದನಾ ಹಂತದಲ್ಲಿರುವ ಸಿಯೆರಾ ಕಾರನ್ನು ಪ್ರದರ್ಶನ ಮಾಡಲಾಗಿತ್ತು.

ನೂತನ ಟಾಟಾ ಸಿಯೆರಾ ಇಂಧನ (ಪೆಟ್ರೋಲ್/ಡೀಸೆಲ್) ಹಾಗೂ ಎಲೆಕ್ಟ್ರಿಕ್ ರೂಪದಲ್ಲಿ ಮಾರಾಟಕ್ಕೆ ಬರಲಿದ್ದು, ಪ್ರಸ್ತುತ ಇದೇ ಮೊದಲ ಬಾರಿಗೆ ಪ್ರಾಯೋಗಿಕ ಸಂಚಾರ ನಡೆಸುವಾಗ ಕಾಣಿಸಿಕೊಂಡಿದೆ. ಅದರ ಸ್ಪೈ ಫೋಟೋಗಳು ಕೂಡ ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಈ ಫೋಟೋದಲ್ಲಿ ಕಾರನ್ನು ಸಂಪೂರ್ಣವಾಗಿ ಕಪ್ಪು (ಬ್ಲ್ಯಾಕ್) ಕವರ್‌ನಿಂದ ಮುಚ್ಚಲಾಗಿತ್ತು. ಇದರಿಂದ ಪರೀಕ್ಷಾರ್ಥ ಓಡಾಟ ವೇಳೆಯಲ್ಲಿ ಇಂಧನ ಅಥವಾ ಎಲೆಕ್ಟ್ರಿಕ್ ಚಾಲಿತ ಮಾಡೆಲ್ ಕಂಡುಬಂತೆ ಎಂಬುದು ಸ್ಪಷ್ಟವಾಗಲಿಲ್ಲ.

New Tata Sierra Suv Spied On Testing For The First Time Details

ಆದರೆ, ಬಹುತೇಕ ಹೊರಭಾಗದ ವಿನ್ಯಾಸ ಉತ್ಪಾದನೆಗೆ ಸಿದ್ದಗೊಂಡ ಮಾಡೆಲ್‌ನಂತೆಯೇ ಇತ್ತು. ಈ ಕಾರು, ಹೊಸದಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಹೊಂದಿರುವುದನ್ನು ನೋಡಬಹುದು. ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ಕಾಣಿಸಿಕೊಂಡ ಮಾಡೆಲ್, ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿತ್ತು. ಇದು ಸ್ಟೀಲ್ ವೀಲ್‌ಗಳನ್ನು ಪಡೆದಿದೆ.

ನೂತನ ಟಾಟಾ ಸಿಯೆರಾದ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತಂತೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಇದರ ಇಂಧನ ಚಾಲಿತ ಮಾಡೆಲ್, 1.5-ಲೀಟರ್ ಟರ್ಬೊ ಪೆಟ್ರೋಲ್ & 2-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿರುವ ನಿರೀಕ್ಷೆಯಿದೆ.

New Tata Sierra Suv Spied On Testing For The First Time Details

ಈ ಕಾರು 18 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡಬಹುದು ಎಂದು ಸಹ ಅಂದಾಜಿಸಲಾಗಿದೆ. ಎಲೆಕ್ಟ್ರಿಕ್ ಚಾಲಿತ ಮಾಡೆಲ್, ದೊಡ್ಡ ಗಾತ್ರದ ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಒಳಗೊಂಡಿರುವ ನಿರೀಕ್ಷೆಯಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌‌ವರೆಗೂ ರೇಂಜ್ (ಮೈಲೇಜ್) ಕೊಡಬಹುದು ಎಂದು ತಿಳಿದುಬಂದಿದೆ.

ನೂತನ ಟಾಟಾ ಸಿಯೆರಾ 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿರಲಿದೆ. ಜೊತೆಗೆ 3 ಸ್ಕ್ರೀನ್ ಸೆಟಪ್ ಮತ್ತು 4 ಸ್ಪೋಕ್ ಸ್ಟೀರಿಂಗ್ ವೀಲ್‌ನ್ನು ಪಡೆದುಕೊಂಡಿರುವುದು ಸಹ ಬಹುತೇಕ ಖಚಿತವಾಗಿದೆ. ಇದರೊಟ್ಟಿಗೆ ಪನೋರಮಿಕ್ ಸನ್‌ರೂಫ್, ಪ್ರೀಮಿಯಂ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

New Tata Sierra Suv Spied On Testing For The First Time Details

ಹೊಸ ಸಿಯೆರಾ ಎಸ್‌ಯುವಿಯ ಇಂಧನ ಚಾಲಿತ ಮಾಡೆಲ್, ರೂ.10 ಲಕ್ಷ ಹಾಗೂ ಎಲೆಕ್ಟ್ರಿಕ್ ಚಾಲಿತ ಮಾಡೆಲ್ ರೂ.25 ಲಕ್ಷ ಎಕ್ಸ್-ಶೋರೂಂ ಬೆಲೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರು ಇದೇ ವರ್ಷ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ನೂತನ ಸಿಯೆರಾ ಎಸ್‌ಯುವಿಗೆ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಎಂಜಿ ಆಸ್ಟರ್ ಹಾಗೂ ಹೋಂಡಾ ಎಲಿವೇಟ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source: Autocar India

Article Published On: Thursday, February 20, 2025, 19:02 [IST]
English summary
New tata sierra suv spied on testing for the first time details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+