TATA: ಶೋರೂಂ ಮುಂದೆ ಗ್ರಾಹಕರು ಸಾಲು ಕಟ್ಟುವರು.. ಬಿಡುಗಡೆಗೆ ಮೊದಲೇ ಕಾಣಿಸಿಕೊಳ್ತು ಹೊಸ ಟಾಟಾ ಕಾರು, ಬೆಲೆಯೂ ಅಗ್ಗ?
ನಂಬಿಕೆಗೆ ಮತ್ತೊಂದು ಹೆಸರೇ ಟಾಟಾ ಮೋಟಾರ್ಸ್ (Tata Motors) ಎಂದು. ಅಷ್ಟರಮಟ್ಟಿಗೆ ಕಂಪನಿಯು ಜನಪ್ರಿಯತೆ ಗಳಿಸಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ಹೊಚ್ಚ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಬಹುಮುಖ್ಯವಾಗಿ 1991 ರಿಂದ 2003 ರವರೆಗೆ ಮಾರಾಟಗೊಂಡಿದ್ದ 'ಸಿಯೆರಾ' ಎಸ್‌ಯುವಿಯನ್ನು ನವೀನ ರೂಪದಲ್ಲಿ ಪರಿಚಯಿಸಲಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಮುಂದಿನ ತಿಂಗಳೇ ಈ ಕಾರು ರಸ್ತೆಗಿಳಿಯಲಿದೆ.
ಇತ್ತೀಚೆಗೆ, ನೂತನ ಟಾಟಾ ಸಿಯೆರಾ (Tata Sierra) ಎಸ್‌ಯುವಿಯು ಟ್ರಕ್‌ವೊಂದರ ಫ್ಲಾಟ್-ಬೆಡ್ ಮೇಲೆ ನಿಂತಿರುವ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿವೆ. ಈ ಫೋಟೋಗಳನ್ನು ಸೂಕ್ಷ್ಮವಾಗಿ ಗಮನಿಸದಾಗ, ಹೊಸ 'ಸಿಯೆರಾ' ವಿನೂತನವಾದ ಡುಯಲ್ ಟೋನ್ ಅಲಾಯ್ ವೀಲ್‌ಗಳು, ಗ್ಲಾಸ್ ಬ್ಲ್ಯಾಕ್ ಕ್ಲಾಡಿಂಗ್ ಹಾಗೂ ಬ್ರಷ್ಡ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್‌ಗಳನ್ನು ಹೊಂದಿರುವುದನ್ನು ನೋಡಬಹುದು.

ಇದೇ ವರ್ಷಾರಂಭದಲ್ಲಿ ಮುಕ್ತಾಯಗೊಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲೂ 'ಟಾಟಾ ಸಿಯೆರಾ' ಎಸ್‌ಯುವಿಯನ್ನು ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್, ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿತ್ತು. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳನ್ನು ಪಡೆದಿತ್ತು.
ಹೊಸ 'ಸಿಯೆರಾ' ಇಂಧನ (ಪೆಟ್ರೋಲ್/ಡೀಸೆಲ್) ಮತ್ತು ಎಲೆಕ್ಟ್ರಿಕ್ ಪವರ್‌ಟ್ರೇನ್ ಆಯ್ಕೆಯಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಕಾರಿನ ಇಂಧನ ಚಾಲಿತ ಮಾಡೆಲ್, 1.5-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್ & 2.0-ಲೀ. ಟರ್ಬೊ ಡೀಸೆಲ್ ಎಂಜಿನ್‌ನ್ನು ಒಳಗೊಂಡಿರಲಿದೆ. ಜೊತೆಗಿದು 21 ಕಿ.ಮೀವರೆಗೆ ಮೈಲೇಜ್ ನೀಡಬಹುದು ಎನ್ನಲಾಗಿದೆ.

ಎಲೆಕ್ಟ್ರಿಕ್ ಚಾಲಿತ ಮಾಡೆಲ್, 'ಟಾಟಾ ಹ್ಯಾರಿಯರ್ ಇವಿ'ಯಂತೆಯೇ ಕಾರ್ಯಕ್ಷಮತೆ ಹೊಂದಿರಲಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದುಕೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ.
ಈ ನೂತನ 'ಸಿಯೆರಾ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಲು ಸಾಧ್ಯವಾಗಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (14.5 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10 ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ ಎನ್ನಲಾಗಿದೆ.
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದೆ. ಅದಕ್ಕಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿರಲಿದೆ ಎನ್ನಲಾಗಿದೆ. ವಿಶೇಷವಾಗಿ 7 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್ ವೀಲ್ ಡಿಸ್ಕ್ ಬ್ರೇಕ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.
ಹೊಸ 'ಸಿಯೆರಾ' ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುವ ಸಾಧ್ಯತೆಯಿದ್ದು, ಎಲ್ಲ ವರ್ಗದವರು ಸುಲಭವಾಗಿ ಕೊಂಡುಕೊಳ್ಳಬಹುದು ಎನ್ನಲಾಗಿದೆ. ಇಂಧನ ಚಾಲಿತ ಮಾಡೆಲ್, ರೂ.10 ಲಕ್ಷ ಆರಂಭಿಕ ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಹಾಗೆಯೇ ಎಲೆಕ್ಟ್ರಿಕ್ ಚಾಲಿತ ಮಾಡೆಲ್ ರೂ.15 ಲಕ್ಷದಿಂದ ರೂ.18 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರುವ ನಿರೀಕ್ಷೆಯಿದೆ.
ಒಟ್ಟಾರೆಯಾಗಿ ಅತಿ ಶೀಘ್ರದಲ್ಲೇ ನೂತನ 'ಟಾಟಾ ಸಿಯೆರಾ' ಬಿಡುಗಡೆಯಾಗಲಿದೆ ಎಂಬ ವಿಚಾರವು ದೇಶೀಯ ಗ್ರಾಹಕರಿಗೆ ಹೆಚ್ಚಿನ ಖುಷಿ ನೀಡಿದೆ. ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿರಲಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಈ ಕಾರು ಮಾರಾಟಕ್ಕೆ ಬಂದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.
Source: Carwale


Click it and Unblock the Notifications








