Tata Sierra: 11.49 ಲಕ್ಷ.. ಇಂದು ಬಿಡುಗಡೆಯಾದ ಹೊಸ ಟಾಟಾ ಸಿಯೆರಾ ಕುರಿತ ಪ್ರಮುಖಾಂಶಗಳು

ಮುಂಬೈನಲ್ಲಿಂದು ನಡೆದ ಅದ್ದೂರಿ ಸಮಾರಂಭದಲ್ಲಿ ಬಹುನಿರೀಕ್ಷಿತ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಡಿಸೆಂಬರ್ 16 ರಿಂದ ಬುಕ್ಕಿಂಗ್‌ ತೆಗೆದುಕೊಳ್ಳುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. 2026ರ ಜನವರಿ 15 ರಿಂದ ವಿತರಣೆಯನ್ನು ಶುರುವಾಗಲಿದೆ . ಬನ್ನಿ, ಈ ಕಾರಿನ ಬೆಲೆ ಹಾಗೂ ವಿಶೇಷತೆ ವಿಶೇಷತೆಗಳ ಕುರಿತಂತೆ ಪ್ರಮುಖಾಂಶಗಳು ಏನೆಂಬುದನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಹೊಚ್ಚ ಹೊಸ 'ಟಾಟಾ ಸಿಯೆರಾ' ಎಸ್‌ಯುವಿಯನ್ನು ರೂ.11.49 ಲಕ್ಷ (ಎಕ್ಸ್-ಶೋರೂಂ) ಪರಿಚಯಾತ್ಮಕ ಬೆಲೆಯಲ್ಲಿ ಮಾರಾಟಕ್ಕೆ ತರಲಾಗಿದೆ. ಸ್ಮಾರ್ಟ್ ಪ್ಲಸ್, ಪ್ಯೂರ್, ಪ್ಯೂರ್ ಪ್ಲಸ್, ಅಡ್ವೆಂಚರ್, ಅಡ್ವೆಂಚರ್ ಪ್ಲಸ್, ಅಕಾಂಪ್ಲಿಶ್ಡ್ ಹಾಗೂ ಅಕಾಂಪ್ಲಿಶ್ಡ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

New Tata Sierra Suv Top Things You Should Must Know

ವಿನ್ಯಾಸ & ಬಣ್ಣಗಳು (Design & Colors):

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಫ್ಲಶ್ ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು ಹಾಗೂ 19 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ & ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಸುತ್ತಳತೆ (Dimensions):

ನೂತನ 'ಟಾಟಾ ಸಿಯೆರಾ' ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 4,340 ಮಿ.ಮೀ ಉದ್ದ, 1,841 ಮಿ.ಮೀ ಅಗಲ ಹಾಗೂ 1715 ಮಿ.ಮೀ ಎತ್ತರವಿದೆ. ಜೊತೆಗೆ 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2730 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಇದು 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 622 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಕಾರ್ಯಕ್ಷಮತೆ (Performance):

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ.

ಒಳಾಂಗಣ & ವೈಶಿಷ್ಟ್ಯಗಳು (Interior & Features):

ನೂತನ 'ಸಿಯೆರಾ'ದ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇ), ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ಆಟೋಮೆಟಿಕ್ ವೈಪರ್‌ಗಳು, ರೇರ್ ಎಸಿ ವೆಂಟ್‌ಗಳು ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Tuesday, November 25, 2025, 17:13 [IST]
English summary
New tata sierra suv top things you should must know
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+