Tata Sierra: ಆಯ್ದ ಡೀಲರ್‌ಶಿಪ್‌ಗಳಲ್ಲಿ ಹೊಸ ಟಾಟಾ ಸಿಯೆರಾ ಕಾರಿಗಾಗಿ ಬುಕ್ಕಿಂಗ್ ಶುರು.. ಬೆಲೆ ಎಷ್ಟು, ವಿಶೇಷತೆಗಳೇನು?

ಮುಂಬೈನಲ್ಲಿ ಶನಿವಾರ ನಡೆದ ಅದ್ದೂರಿ ಸಮಾರಂಭದಲ್ಲಿ ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಪರಿಚಯಿಸಲಾಯಿತು. ಬಹುಮುಖ್ಯವಾಗಿ 'ಐಸಿಇ' ಮಾಡೆಲ್‌ನ್ನು ಮಾತ್ರ ಅನಾವರಣಗೊಳಿಸಲಾಯಿತು. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಈ ತಿಂಗಳ 25ರಂದು ನೂತನ 'ಸಿಯೆರಾ'ವನ್ನು ಮಾರಾಟಕ್ಕೆ ತರಲಾಗುತ್ತದೆ. ಇದರ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ.

ಸದ್ಯ, ದೇಶಾದ್ಯಂತ ಆಯ್ದ ಡೀಲರ್‌ಶಿಪ್‌ಗಳಲ್ಲಿ ಹೊಸ 'ಟಾಟಾ ಸಿಯೆರಾ'ಗಾಗಿ ಅನಧಿಕೃತವಾಗಿ ಬುಕ್ಕಿಂಗ್‌ಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆಸಕ್ತ ಗ್ರಾಹಕರು, ರೂ.11,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು. ಈ ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದ್ದು, ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

New Tata Sierra Suv Unofficial Bookings Open Details

ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು ದೊಡ್ಡ ಗಾತ್ರದ ಅಲಾಯ್ ವೀಲ್‌ಗಳನ್ನು ಪಡೆದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ 6 ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ವಿಶೇಷವಾಗಿ ನೂತನ 'ಸಿಯೆರಾ'ದ ಕಾರ್ಯಕ್ಷಮತೆ ಬಗ್ಗೆ ಕಂಪನಿಯು ಯಾವುದೇ ಪ್ರಮುಖ ವಿವರಗಳನ್ನು ಬಹಿರಂಗಪಡಿಸಿಲ್ಲ. ಮೂಲಗಳ ಪ್ರಕಾರ, ಈ ಕಾರು 2 ಪವರ್‌ಟ್ರೇನ್‌ನ್ನು ಹೊಂದಿರುವ ನಿರೀಕ್ಷೆಯಿದೆ. 1.5-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿರಲಿದ್ದು, 170 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕಬಹುದು. 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿರಬಹುದು ಎನ್ನಲಾಗಿದೆ.

ಮತ್ತೊಂದು 1.5-ಲೀ. ಡೀಸೆಲ್ ಎಂಜಿನ್, 118 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 260 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಬಹುದು. 6-ಸ್ಪೀಡ್ ಮ್ಯಾನುವಲ್/ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿರುವ ನಿರೀಕ್ಷೆಯಿದೆ.

ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇ), ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌, 12-ಸ್ಪೀಕರ್ ಬಿಜಿಎಲ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ವೈಪರ್‌ಗಳು ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.

ಈ ಕಾರು ಸುರಕ್ಷತೆಯಿಂದಲೂ ಮನೆ ಮಾತಾಗಿದ್ದು, ಗರಿಷ್ಠ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಿಲ್ ಅಸಿಸ್ಟ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟಾಟಾ ಸಿಯೆರಾ ಇವಿ ಸಹ ಮಾರಾಟಕ್ಕೆ ಬರಲಿದೆ:

ಮುಂದಿನ ವರ್ಷದ ಜನವರಿಯಲ್ಲಿ ಹೊಸ ಎಲೆಕ್ಟ್ರಿಕ್ ಚಾಲಿತ 'ಸಿಯೆರಾ' ಎಸ್‌ಯುವಿಯು ಬಿಡುಗಡೆಯಾಗಲಿದೆ. ಈ ಕಾರು ರೂ.15 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. 65 ಹಾಗೂ 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಅಂದಾಜಿಸಲಾಗಿದೆ.

More from DriveSpark

Article Published On: Tuesday, November 18, 2025, 8:30 [IST]
English summary
New tata sierra suv unofficial bookings open details
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+