New Tata Sumo: 9-ಸೀಟರ್.. ಲಕ್ಸುರಿ ಫೀಚರ್ಸ್, ಅಗ್ಗದ ದರಕ್ಕೆ ಹೊಸ ಟಾಟಾ ಸುಮೋ ಪರಿಚಯ?

ಟಾಟಾ ಮೋಟಾರ್ಸ್ (Tata Motors), ನಂಬಿಕೆಗೆ ಹೆಸರುವಾಸಿಯಾಗಿರುವ ತಯಾರಕ ಕಂಪನಿಯಾಗಿದ್ದು, ಹಳ್ಳಿಯಿಂದ ದಿಲ್ಲಿವರೆಗೆ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವರ್ಷಗಳ ಹಿಂದೆ, ಕಂಪನಿ ಮಾರಾಟಗೊಳಿಸುತ್ತಿದ್ದ ಸುಮೋ (Sumo) ಪ್ರಖ್ಯಾತ ಎಂಪಿವಿಯಾಗಿ ಹೊರಹೊಮ್ಮಿತ್ತು. ದಾಖಲೆ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿತ್ತು. ಆದರೆ, ನಾನಾ ಕಾರಣಗಳಿಗೆ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿತು. ಸದ್ಯ, ಇದೇ 'ಟಾಟಾ ಸುಮೋ' ಹೊಸ ರೂಪದಲ್ಲಿ ಮತ್ತೆ ಮಾರಾಟಕ್ಕೆ ಬರಲಿದೆ ಎಂದು ಎಂದು ವಿವಿಧ ಮಾಧ್ಯಮಗಳು ವರದಿ ಮಾಡಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ ಟಾಟಾ ಸುಮೋ (Tata Sumo) ಎಂಪಿವಿಯನ್ನು ನವದೆಹಲಿಯಲ್ಲಿ ಇದೇ 17 ರಿಂದ 22 ರವರೆಗೆ ಏರ್ಪಡಿಸಿರುವ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ-2025'ದಲ್ಲಿ ಅನಾವರಣಗೊಳಿಸಲಾಗುತ್ತದೆ ಎನ್ನಲಾಗಿದೆ. ಆದರೆ, ಈ ಕುರಿತಂತೆ ಕಂಪನಿಯು ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಕೆಲವೇ ದಿನಗಳಲ್ಲಿ ಸ್ಪಷ್ಟವಾದ ಮಾಹಿತಿ ಲಭ್ಯವಾಗಲಿದೆ.

New Tata Sumo Likely Unveil In Auto Expo 2025 Expected Price Mileage And Features Details

ವಿನ್ಯಾಸ (Design): ಹೊಚ್ಚ ಹೊಸ ಟಾಟಾ ಸುಮೋ ಎಂಪಿವಿ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕ ವಿನ್ಯಾಸ ಒಳಗೊಂಡಿರುವ ಸಾಧ್ಯತೆಯಿದೆ. ಈ ಕಾರು ನವೀನ-ಶೈಲಿಯ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ವಿನೂತನವಾಗಿರುವ ಗ್ರಿಲ್ & ಬಂಪರ್, ಅಲಾಯ್ ವೀಲ್‌ಗಳು ಮತ್ತು ಎಲ್ಇಡಿ ಟೈಲ್ ಲೈಟ್‌ಗಳನ್ನು ಒಳಗೊಂಡಿರುವ ನೀರಿಕ್ಷೆಯಿದೆ.

ಕಾರ್ಯಕ್ಷಮತೆ (Performance): ನೂತನ ಟಾಟಾ ಸುಮೋ ಎಂಪಿವಿ ಶಕ್ತಿಯುತವಾದ ಪವರ್‌ಟ್ರೇನ್‌ ಹೊಂದಿರಬಹುದು ಎಂದು ಹೇಳಲಾಗಿದೆ. ಈ ಕಾರು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಮಾರಾಟಕ್ಕೆ ಬರಬಹುದು. ಜೊತೆಗೆ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿರಬಹುದು ಎನ್ನಲಾಗಿದೆ. 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ.

New Tata Sumo Likely Unveil In Auto Expo 2025 Expected Price Mileage And Features Details

ವೈಶಿಷ್ಟ್ಯಗಳು (Features): ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್-ಜೋನ್ ಆಟೋಮೆಟಿಕ್ ಎಸಿ, 6-ವೇ ಪವರ್ ಡ್ರೈವರ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿರಲಿದೆ ಎನ್ನಲಾಗಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಹೊಸ ಟಾಟಾ ಸುಮೋ ಎಂಪಿವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ನೀರಿಕ್ಷೆಯಿದೆ.

New Tata Sumo Likely Unveil In Auto Expo 2025 Expected Price Mileage And Features Details

ಬೆಲೆ & ಆಸನ ಆಯ್ಕೆ (Price & Seating Capacity): ಈ ಕಾರು ಬಜೆಟ್ ಬೆಲೆಯಲ್ಲಿ ಮಾರಾಟಕ್ಕೆ ಬರಬಹುದು ಎಂದು ಹೇಳಲಾಗಿದೆ. ರೂ.8 ರಿಂದ ರೂ.10 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. 7 ಅಥವಾ 9 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಬಿಡುಗಡೆ ಆಗಬಹುದು ಎಂದು ಹೇಳಲಾಗಿದೆ.

ಇನ್ನು, ಮುಂಬರಲಿದೆ ಎನ್ನಲಾಗಿರುವ ಟಾಟಾ ಸುಮೋ (Tata Sumo) ಎಂಪಿವಿ ಮೇಲೆ ಗ್ರಾಹಕರು ಕೂಡ ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಒಂದೊಮ್ಮೆ ಈ ಕಾರನ್ನು ಟಾಟಾ ಕಂಪನಿಯು ಮತ್ತೆ ಮಾರಾಟಕ್ಕೆ ತಂದರೆ, ಇದು ಮಧ್ಯಮ ವರ್ಗದ ಜನರ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, January 7, 2025, 14:44 [IST]
English summary
New tata sumo likely unveil in auto expo 2025 expected price mileage and features details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+