Toyota: 550 Km ರೇಂಜ್.. 5-ಸೀಟರ್, ಅತಿ ಶೀಘ್ರದಲ್ಲೇ ಟೊಯೊಟಾದ ಮೊದಲ ಎಲೆಕ್ಟ್ರಿಕ್ ಕಾರು ಬಿಡುಗಡೆ.. ಬೆಲೆ ಅಗ್ಗವೇ?
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಜಗಮೆಚ್ಚಿದ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟ ಮೊದಲ ಎಲೆಕ್ಟ್ರಿಕ್ ಕಾರನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ ಹೊಚ್ಚ ಹೊಸ ಅರ್ಬನ್ ಕ್ರೂಸರ್ ಇವಿ (Urban Cruiser EV) ಅದ್ದೂರಿಯಾಗಿ ಮಾರಾಟಕ್ಕೂ ಬರಲಿದೆ. ಬನ್ನಿ. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ನೂತನ ಟೊಯೊಟಾ ಅರ್ಬನ್ ಕ್ರೂಸರ್ ಇವಿ (Toyota Urban Cruiser EV) ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಇದೇ ವರ್ಷದ ಜನವರಿಯಲ್ಲಿ ಕೊನೆಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಈ ಕಾರನ್ನು ಪ್ರದರ್ಶಿಸಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್, ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್, ರೂಫ್-ಮೌಂಟೆಡ್ ಸ್ಪಾಯ್ಲರ್, ಚಾರ್ಜಿಂಗ್ ಪೋರ್ಟ್ ಹಾಗೂ ಅಲಾಯ್ ವೀಲ್‌ಗಳನ್ನು ಒಳಗೊಂಡಿತ್ತು.

ಇದು ಹೆಚ್ಚು ವಿಶಾಲ ಗಾತ್ರದಲ್ಲಿರಲಿದ್ದು, ಮಾರುತಿ ಸುಜುಕಿ ಇ-ವಿಟಾರಾವನ್ನು ಆಧರಿಸಿದೆ. 4,285 ಮಿ.ಮೀ ಉದ್ದ, 1,800 ಮಿ.ಮೀ ಅಗಲ ಹಾಗೂ 1,640 ಮಿ.ಮೀ ಎತ್ತರವಿವು ಇರಲಿದೆ. ಜೊತೆಗಿದು 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,700 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿರಲಿದೆ.
ಈ ಕಾರು 5 ಆಸನಗಳನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ದೊಡ್ಡ ಗಾತ್ರದ 400 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಇವಿಯು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿರುವ ಸಾಧ್ಯತೆಯಿದೆ. 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿರಬಹುದು. ಅದೇ ರೀತಿಯಲ್ಲಿ ಸಂಪೂರ್ಣ ಚಾರ್ಜ್‌ನಲ್ಲಿ 550 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡಬಹುದು ಎಂದು ಹೇಳಲಾಗಿದೆ.
ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿರಲಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರಬಹುದು ಎನ್ನಲಾಗಿದೆ. ಬಹುಮುಖ್ಯವಾಗಿ 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಟೂ-ಸ್ಪೋಕ್ ಸ್ಟೀರಿಂಗ್ ವೀಲ್‌ಗಳು, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋ ಎಸಿ, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿರುವ ಎಲ್ಲ ಲಕ್ಷಣಗಳಿವೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿರಲಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ನಿರೀಕ್ಷೆಯಿದೆ.
ನೂತನ 'ಟೊಯೊಟಾ ಅರ್ಬನ್ ಕ್ರೂಸರ್ ಇವಿ' ಕೈಗೆಟುಕುವ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯಬಹುದು. ಕನಿಷ್ಠ ರೂ.18 ಲಕ್ಷ ಹಾಗೂ ಗರಿಷ್ಠ ರೂ.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2026ರ ಫೆಬ್ರವರಿ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.
ಸ್ಟ್ಯಾಂಡರ್ಡ್ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ವಿಶೇಷತೆಗಳೇನು:
ಈ ಎಸ್‌ಯುವಿಯು ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications








