226 Km ಮೈಲೇಜ್.. ಅತಿ ಶೀಘ್ರದಲ್ಲೇ ವಿಶ್ವದ ಮೊಟ್ಟ ಮೊದಲ TVS Jupiter CNG ಸ್ಕೂಟರ್ ಮಾರಾಟಕ್ಕೆ, ಬೆಲೆ ಎಷ್ಟು, ಹೇಗಿರಲಿದೆ?
ಟಿವಿಎಸ್ ಜೂಪಿಟರ್ (TVS Jupiter) ವಿಶ್ವಾಸಾರ್ಹ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಇದು ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ತಕ್ಕಂತೆ ಈ ಜೂನ್ ತಿಂಗಳಲ್ಲೂ ಬರೋಬ್ಬರಿ 1,07,980 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 49.76% ಪ್ರಗತಿಯಾಗಿದೆ. 2024ರ ಇದೇ ಅವಧಿಯಲ್ಲಿ 72,100 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು.
ಸದ್ಯ, ಟಿವಿಎಸ್ ಕಂಪನಿಯು ಜೂಪಿಟರ್ ಸ್ಕೂಟರ್‌ನ್ನು 'ಸಿಎನ್‌ಜಿ' ಪವರ್‌ಟ್ರೇನ್ ಆಯ್ಕೆಯಲ್ಲಿ ಮಾರಾಟಕ್ಕೆ ತರಲು ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಈ ಸ್ಕೂಟರ್‌ನ್ನು ಇದೇ ಅಕ್ಟೋಬರ್‌ನಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಿದೆ ಎನ್ನಲಾಗಿದೆ. ಆದರೆ, ಕಂಪನಿ ಕಡೆಯಿಂದ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

ಹೊಚ್ಚ ಹೊಸ ಟಿವಿಎಸ್ ಜೂಪಿಟರ್ ಸಿಎನ್‌ಜಿ (TVS Jupiter CNG) ಸ್ಕೂಟರ್ ಅಗ್ಗದ ದರದಲ್ಲೂ ಸಿಗುವ ಸಾಧ್ಯತೆಯಿದ್ದು, ರೂ.95,000 (ಎಕ್ಸ್-ಶೋರೂಂ) ಬೆಲೆಯನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ. ಜೊತೆಗಿದು ವಿಶ್ವದ ಮೊಟ್ಟ ಮೊದಲ ಸಿಎನ್‌ಜಿ ಸ್ಕೂಟರ್ ಎಂಬ ಹಿರಿಮೆಗೂ ಪಾತ್ರವಾಗಿದೆ.
ನೂತನ ಜೂಪಿಟರ್ ಸಿಎನ್‌ಜಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಬಹುತೇಕ ಸಾಮಾನ್ಯ ಜೂಪಿಟರ್‌ಗೆ ಹೋಲಿಕೆಯಾಗುತ್ತದೆ. ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಪ್ರದರ್ಶನ ಮಾಡಲಾಗಿತ್ತು. ಲೂನಾರ್ ವೈಟ್ ಗ್ಲಾಸ್, ಮೀಟಿಯರ್ ರೆಡ್ ಗ್ಲಾಸ್, ಟೈಟಾನಿಯಂ ಗ್ರೇ ಮ್ಯಾಟ್, ಡಾನ್ ಬ್ಲೂ ಮ್ಯಾಟ್ ಮತ್ತು ಸ್ಟಾರ್‌ಲೈಟ್ ಬ್ಲೂ ಗ್ಲಾಸ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುವ ನಿರೀಕ್ಷೆಯಿದೆ.

ಈ ಸ್ಕೂಟರ್ ಹೆಚ್ಚು ಶಕ್ತಿಯುತವಾದ 124.8-ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ 7.1 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 9.4 ಎನ್ಎಂ (ನ್ಯೂಟನ್ ಮೀಟರ್) ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. 226 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಇದು 2 ಲೀಟರ್‌ನಷ್ಟು ಪೆಟ್ರೋಲ್ & 1.4 ಕೆಜಿಯ ಸಿಎನ್‌ಜಿ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್-ಸ್ಟ್ಯಾಂಡ್ ಇಂಡಿಕೇಟರ್, ಎಲ್‌ಇಡಿ ಹೆಡ್‌ಲ್ಯಾಂಪ್, ಯುಎಸ್‌ಬಿ ಚಾರ್ಜರ್ ಮತ್ತು ಟಿವಿಎಸ್ ಕನೆಕ್ಟ್ ಅಪ್ಲಿಕೇಶನ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಪ್ರಸ್ತುತ ಖರೀದಿಗೆ ಸಿಗುವ ಟಿವಿಎಸ್ ಜುಪಿಟರ್ 110 (Tvs Jupiter 110) ವಿಶೇಷತೆಗಳೇನು:
ಈ ಸ್ಕೂಟರ್ ರೂ.78,631 ರಿಂದ ರೂ.91,781(ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 113.3 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 53 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್-ಇನ್ಸ್ಟ್ರುಮೆಂಟ್ ಕ್ಲಸ್ಟರ್, ಇಂಟಲಿಜೆಂಟ್ ಸ್ಟಾರ್ಟ್/ಸ್ಟಾಪ್, ಇಂಟಿಗ್ರೇಟೆಡ್ ಸ್ಟಾರ್ಟರ್ ಜನರೇಟರ್ ಮತ್ತು ಯುಎಸ್‌ಬಿ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಟಿವಿಎಸ್ ಜೂಪಿಟರ್ 125 (TVS Jupiter 125) ಕೂಡ ಲಭ್ಯ:
ಇದು ರೂ.80,740 ರಿಂದ ರೂ.92,001(ಎಕ್ಸ್-ಶೋರೂಂ) ದರವನ್ನು ಪಡೆದಿದೆ. 124.8-ಸಿಸಿ ಪೆಟ್ರೋಲ್ ಎಂಜಿನ್ ಹೊಂದಿದ್ದು, 57 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 12-ಇಂಚಿರುವ ಅಲಾಯ್ ವೀಲ್‌ಗಳು & 90/90-12 ಅಳತೆಯ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಟೈಟಾನಿಯಂ ಗ್ರೇ ಡ್ರಮ್, ಇಂಡಿಬ್ಲೂ ಡ್ರಮ್ ಮತ್ತು ಡಾನ್ ಆರೆಂಜ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.


Click it and Unblock the Notifications








