ಭಾರತದಲ್ಲಿ ಹೊಸ ಬ್ರ್ಯಾಂಡ್‌ನ ಕಾರುಬಾರು: ಮೊದಲ ಬಾರಿಗೆ ಕಾಣಿಸಿಕೊಳ್ತು ಆನೆ ಗಾತ್ರದ 7-ಸೀಟರ್ MPV.. ಯಾವುದು?

ವಿಯೆಟ್ನಾಂಗೆ ಸೇರಿರುವ ವಿನ್‌ಫಾಸ್ಟ್‌ (VinFast) ಪ್ರಖ್ಯಾತ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಇದೇ ಅಕ್ಟೋಬರ್‌ನಲ್ಲಿ ಮೊದಲ ಬ್ಯಾಚ್‍ನ ನೂತನ ವಿಎಫ್6 ಹಾಗೂ ವಿಎಫ್7 ಎಲೆಕ್ಟ್ರಿಕ್ ಎಸ್‌ಯುವಿಗಳ ವಿತರಣೆಯನ್ನು ಆರಂಭಿಸಿದೆ. ಗ್ರಾಹಕರು ಕೂಡ ಖುಷಿ ಖುಷಿಯಾಗಿ ಹೊಸ ಕಾರುಗಳನ್ನು ಮನೆಗೆ ಕೊಂಡೊಯ್ದಿದ್ದಾರೆ. ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಮತ್ತೊಂದು ಕಾರನ್ನು ಬಿಡುಗಡೆಗೊಳಿಸಲು ಕಂಪನಿಯು ತಯಾರಿ ಮಾಡಿಕೊಳ್ಳುತ್ತಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಈ ಆಗಸ್ಟ್ ತಿಂಗಳಲ್ಲೇ ನೂತನ ವಿನ್‌ಫಾಸ್ಟ್‌ ಲಿಮೋ ಗ್ರೀನ್‌ (VinFast Limo Green) ಎಂಪಿವಿ ತಯಾರಿಕೆಗಾಗಿ ಪೇಟೆಂಟ್‌ನ್ನು ಸಲ್ಲಿಸಲಾಗಿದೆ. ಇತ್ತೀಚೆಗೆ ಈ ಕಾರು ಮೊದಲ ಬಾರಿಗೆ ಪ್ರಾಯೋಗಿಕ ಸಂಚಾರ ನಡೆಸುವಾಗಲೂ ಕಾಣಿಸಿಕೊಂಡಿದೆ. ಅದಕ್ಕೆ ಸಂಬಂಧಿಸಿದ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿಯೂ ಸೋರಿಕೆಯಾಗಿವೆ.

New VinFast Limo Green Mpv Spied On Test For First time Details

ಹೊಸ ಕಾರನ್ನು ಕಪ್ಪು ಬಣ್ಣದ ಕವರ್‌ನಿಂದ ಮುಚ್ಚಿದರಿಂದ ವಿನ್ಯಾಸದ ಕುರಿತಂತೆ ಅಷ್ಟಾಗಿ ಯಾವುದೇ ಅಂಶಗಳು ಬಹಿರಂಗಗೊಳ್ಳಲಿಲ್ಲ. ಆದರೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಸ್ಟ್ಯಾಂಡರ್ಡ್ 'ಲಿಮೋ ಗ್ರೀನ್‌'ಗೆ ಹೋಲಿಕೆಯಾಗುತ್ತಿತ್ತು. ಜೊತೆಗೆ ಸಿಗ್ನೇಚರ್ ಟೈಲ್ ಲ್ಯಾಂಪ್‌ಗಳು ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿರುವುದನ್ನು ಸಹ ಸ್ಪಷ್ಟವಾಗಿ ಗುರುತಿಸಬಹುದಾಗಿತ್ತು.

ಇದು ಮಾತ್ರವಲ್ಲದೇ, ಜಾಗತಿಕವಾಗಿ ದೊರೆಯುವ 'ವಿನ್‌ಫಾಸ್ಟ್‌ ಲಿಮೋ ಗ್ರೀನ್‌' ಎಂಪಿವಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಫುಲ್ ವಿಡ್ತ್ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ. ಡೀಪ್ ಓಷನ್, ಡೆಸಾಟ್ ಸಿಲ್ವರ್, ನೆಪ್ಚೂನ್ ಗ್ರೇ, ಕ್ರಿಮ್ಸನ್ ರೆಡ್, ಸನ್‌ಸೆಟ್ ಆರೆಂಜ್ ಹಾಗೂ ಜೆಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

New VinFast Limo Green Mpv Spied On Test For First time Details

ಈ ಕಾರು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,740 ಮಿ.ಮೀ ಉದ್ದ, 1,872 ಮಿ.ಮೀ ಅಗಲ ಮತ್ತು 1,728 ಮಿ.ಮೀ ಎತ್ತರವಿದೆ. 170 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,840 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. ಜೊತೆಗಿದು ಸರಿ ಸುಮಾರು ಬರೋಬ್ಬರಿ 1,700 ಕೆಜಿ ತೂಕವಿದೆ.

ಹೊಸ 'ವಿನ್‌ಫಾಸ್ಟ್‌ ಲಿಮೋ ಗ್ರೀನ್‌' ಎಂಪಿವಿ, 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 285 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಇದು 60.13 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 450 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, 201 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 160 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಈ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 10.1 ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ, 3-ಸ್ಪೋಕ್ ಸ್ಟೀರಿಂಗ್ ವೀಲ್, ಲೆಥೆರೆಟ್ ಸೀಟಿಂಗ್, 360 ಡಿಗ್ರಿ ಕ್ಯಾಮೆರಾ, ಫ್ಲೋಟಿಂಗ್ ಸೆಂಟರ್ ಕನ್ಸೋಲ್, 4 ಏರ್‌ಬ್ಯಾಗ್‌ಗಳು ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ ಆಲ್ -ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ಇಕೋ, ಕಂಫರ್ಟ್ & ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ತನ್ನದಾಗಿಸಿಕೊಂಡಿದೆ.

ನೂತನ ​'ವಿನ್‌ಫಾಸ್ಟ್‌ ಲಿಮೋ ಗ್ರೀನ್‌' ಎಂಪಿವಿ ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಲಿದೆ. ಕನಿಷ್ಠ ರೂ.25 ಲಕ್ಷ ಹಾಗೂ ಗರಿಷ್ಠ ರೂ.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರುವ ನಿರೀಕ್ಷೆಯಿದೆ. ಇದಕ್ಕೆ ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV) ಪ್ರಬಲವಾದ ಪ್ರತಿಸ್ಪರ್ಧಿಯಾಗಲಿದೆ.

Image Source: Rushlane

More from DriveSpark

Article Published On: Monday, November 10, 2025, 8:51 [IST]
English summary
New vinfast limo green mpv spied on test for first time details
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+