468 ಕಿ.ಮೀ ಓಡುತ್ತೆ.. 5-ಸೀಟರ್, ಅಗ್ಗದ VinFast VF6 ಕಾರಿನ ಕುರಿತ ಪ್ರಮುಖಾಂಶಗಳಿವು.. ನೀವೇ ನೋಡಿ!

ನಿನ್ನೆಯಷ್ಟೇ ಹೊಚ್ಚ ಹೊಸ ವಿನ್‌ಫಾಸ್ಟ್ ವಿಎಫ್6 (VinFast VF6) ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆಗೊಂಡಿದೆ. ಇದು ಆಕರ್ಷಕವಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಅಗ್ಗದ ದರದಲ್ಲೂ ಲಭ್ಯವಿದೆ. ಈ ಕಾರು ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಹಾಗೂ ಟಾಟಾ ಕರ್ವ್ ಇವಿಗಳಿಗೂ ಪ್ರಬಲವಾದ ಸ್ಪರ್ಧೆಯೊಡ್ಡಲಿದೆ. ನಾವಿಲ್ಲಿ ಈ ನೂತನ 'ವಿಎಫ್6'ರ ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.

ಬೆಲೆ (Price):

ಈ ವಿನ್‌ಫಾಸ್ಟ್ ವಿಎಫ್6 ಎಲೆಕ್ಟ್ರಿಕ್ ಎಸ್‌ಯುವಿಯು ಕನಿಷ್ಠ ರೂ.16.49 ಲಕ್ಷ ಹಾಗೂ ಗರಿಷ್ಠ ರೂ.18.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅರ್ಥ್, ವಿಂಡ್ ಮತ್ತು ವಿಂಡ್ ಇನ್ಫಿನಿಟಿ ಎಂಬ 3 ಅತ್ಯಾಧುನಿಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

New VinFast VF 6 Suv Top Things

ವಿನ್ಯಾಸ & ಬಣ್ಣಗಳು (Design & Colors):

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದ್ದು, ನೋಡುಗರ ಸೆಳೆಯುವಂತಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ರೇರ್ ಎಲ್ಇಡಿ ಲೈಟ್ ಬಾರ್‌ಗಳು ಹಾಗೂ 18 ಇಂಚಿನ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಮತ್ತು ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

ಹೊಸ ವಿನ್‌ಫಾಸ್ಟ್ ವಿಎಫ್6 ಕಾರು ಕೊಂಚ ಮಟ್ಟಿಗೆ ದೊಡ್ಡದಾಗಿದೆ. 4,241 ಎಂಎಂ ಉದ್ದ, 1,834 ಎಂಎಂ ಅಗಲ ಹಾಗೂ 1,580 ಎಂಎಂ ಎತ್ತರವಿದೆ. ಇದರೊಂದಿಗೆ 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,730 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

New VinFast VF 6 Suv Top Things

ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):

ಈ ಕಾರು 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್‌ಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 423 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

ಕಾರ್ಯಕ್ಷಮತೆ (Performance):

ನೂತನ ವಿನ್‌ಫಾಸ್ಟ್ ವಿಎಫ್6 ಎಲೆಕ್ಟ್ರಿಕ್ ಎಸ್‌ಯುವಿಯು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಬೃಹದಾಕಾರದ 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 463 ರಿಂದ 468 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇದರ ಬ್ಯಾಟರಿಯು ಫಾಸ್ಟ್ ಚಾರ್ಜಿಂಗ್ ಆಯ್ಕೆಯಲ್ಲಿ 25 ನಿಮಿಷಗಳಲ್ಲಿ ಶೇಕಡ 10 ರಿಂದ 70% ಚಾರ್ಜ್ ಆಗುತ್ತದೆ. ಕೇವಲ 8.9 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

New VinFast VF 6 Suv Top Things

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಅಚ್ಚುಕಟ್ಟಾಗಿದೆ. 12.9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, 8 ಸ್ಪೀಕರ್ ಸೌಂಡ್ ಸಿಸ್ಟಮ್, ಏರ್ ಫಿಲ್ಟರ್, ಅಕೌಸ್ಟಿಕ್ ವಿಂಡ್‌ಶೀಲ್ಡ್, ಪನೋರಮಿಕ್ ಸನ್‌ರೂಫ್, ಯುಎಸ್‌‍ಬಿ ಸಿ ಚಾರ್ಜಿಂಗ್, ರೈನ್ ಸೆನ್ಸಿಂಗ್ ವೈಪರ್‌ಗಳು ಮತ್ತು ಕನೆಕ್ಟೆಡ್ ಕಾರ್ ಟೆಕ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features):

ವಿನ್‌ಫಾಸ್ಟ್ ವಿಎಫ್6 ಎಲೆಕ್ಟ್ರಿಕ್ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಟೋ ಪಾರ್ಕ್ ಅಸಿಸ್ಟ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Sunday, September 7, 2025, 8:30 [IST]
English summary
New vinfast vf 6 suv top things
Read more on VinFast india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+