ಸದ್ದಿಲ್ಲದೇ ಹೊಸ ಬ್ರ್ಯಾಂಡ್‌ನ ಎಲೆಕ್ಟ್ರಿಕ್ Suv ಕಾಣಿಸಿಕೊಂಡೆ ಬಿಡ್ತು, ಬಿಡುಗಡೆ ಯಾವಾಗ.. ಬೆಲೆ ಇಷ್ಟೇನಾ?
ವಿಯೆಟ್ನಾಂಗೆ ಸೇರಿರುವ ವಿನ್‌ಫಾಸ್ಟ್ (VinFast) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿಯಾಗಿ ಹೆಸರುವಾಗಿದ್ದು, ಜಾಗತಿಕವಾಗಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ದೇಶೀಯ ಮಾರುಕಟ್ಟೆಗೂ ಪಾದಾರ್ಪಣೆ ಮಾಡಲು ಭರದಿಂದ ಸಿದ್ಧತೆ ನಡೆಸುತ್ತಿದೆ. ಈಗಾಗಲೇ ತಮಿಳುನಾಡಿನ ತೂತುಕುಡಿಯಲ್ಲಿ ಬೃಹತ್ ಉತ್ಪಾದನಾ ಘಟಕವನ್ನು ಶುರು ಮಾಡುವ ಹಾದಿಯಲ್ಲಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಕಂಪನಿಯ ಮೊಟ್ಟ ಮೊದಲ ಎಲೆಕ್ಟ್ರಿಕ್ ಕಾರು ಅತಿ ಶೀಘ್ರದಲ್ಲೇ ಮಾರಾಟಕ್ಕೂ ಬರಲಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಸದ್ಯ, ಮುಂಬೈನಲ್ಲಿ ಹೊಚ್ಚ ಹೊಸ ವಿನ್‌ಫಾಸ್ಟ್ ವಿಎಫ್6 ಇವಿ (VinFast VF6 EV) ಪ್ರಾಯೋಗಿಕ ಸಂಚಾರ ನಡೆಸುವಾಗ ಕಂಡುಬಂದಿದೆ. ಅದರ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಕೂಡ ಸೋರಿಕೆಯಾಗಿವೆ. ನೂತನ ಕಾರನ್ನು ಸಂಪೂರ್ಣವಾಗಿ ಕಪ್ಪು ಬಣ್ಣದ ಕವರ್‌ನಿಂದ ಮುಚ್ಚಿದ್ದರಿಂದ ವಿನ್ಯಾಸ ಕುರಿತಂತೆ ಅಷ್ಟಾಗಿ ಯಾವುದೇ ಅಂಶಗಳನ್ನು ಗುರುತಿಸಲು ಸಾಧ್ಯವಾಗಲಿಲ್ಲ.

'ವಿನ್‌ಫಾಸ್ಟ್ ವಿಎಫ್6' ಎಲೆಕ್ಟ್ರಿಕ್ ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ಈ ಕಾರನ್ನು ಇದೇ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಅದ್ದೂರಿಯಾಗಿ ಪ್ರದರ್ಶಿಸಲಾಗಿತ್ತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಲಭ್ಯವಿದ್ದು, ಅಲ್ಲಿ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ.
ನೂತನ ವಿನ್‌ಫಾಸ್ಟ್ ವಿಎಫ್6 ಎಲೆಕ್ಟ್ರಿಕ್ ಎಸ್‌ಯುವಿ ಹೊರಭಾಗದಲ್ಲಿ ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಇದು ವಿ-ಆಕಾರಕ್ಕೆ ಹೋಲಿಕೆಯುಗಯುವ ಸಿಗ್ನೇಚರ್ ಎಲ್ಇಡಿ ಹೆಡ್‌ಲೈಟ್ ಸೆಟಪ್, ಫುಲ್ ವಿಡ್ತ್ ಡಿಆರ್‌ಎಲ್‌ಗಳು ಮತ್ತು 19-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಹಾಗೆಯೇ 4,238 ಎಂಎಂ ಉದ್ದ, 1,820 ಎಂಎಂ ಅಗಲ ಹಾಗೂ 1,594 ಎಂಎಂ ಎತ್ತರವಿದೆ. 2,730 ಎಂಎಂ ಉದ್ದದ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು ಇಕೋ (Eco) ಮತ್ತು ಪ್ಲಸ್ (Plus) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಒಳಗೊಂಡಿದೆ. 59.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 379 ರಿಂದ 410 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ.
ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಬಹುದು. ಈ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಹೆಡ್-ಅಪ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ರೇರ್ ಎಸಿ ವೆಂಟ್‌ಗಳನ್ನು ಹೊಂದಿದೆ.
ಹೊಸ ವಿನ್‌ಫಾಸ್ಟ್ ವಿಎಫ್6 ಇವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್ - 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಇದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದರೂ ಕೈಗೆಟುಕುವ ಬೆಲೆಯಲ್ಲಿಯೂ ಮಾರಾಟಕ್ಕೆ ಬರುವ ನಿರೀಕ್ಷೆಯಿದ್ದು, ರೂ.18 ಲಕ್ಷ (ಎಕ್ಸ್-ಶೋರೂಂ) ಆರಂಭಿಕ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ದೀಪಾವಳಿ ಹಬ್ಬದ ವೇಳೆಗೆ ಬಿಡುಗಡೆಯಾಗಬಹುದು ಎನ್ನಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source Link: Carwale


Click it and Unblock the Notifications