Toyota: ಮೊನ್ನೆಯಷ್ಟೆ ಬಿಡುಗಡೆ: ಹೊಸ ಟೊಯೋಟಾ ಹೈಬ್ರಿಡ್ ಎಸ್‌ಯುವಿ ವಿಶೇಷತೆಗಳು!

ಟೊಯೋಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಭಾರತದ ಮೊದಲ ಸೆಲ್ಫ್-ಚಾರ್ಜಿಂಗ್ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ಎಸ್‌ಯುವಿ ಎಂದು ವ್ಯಾಪಕವಾಗಿ ಜನಪ್ರಿಯವಾಗಿದೆ. ಈ ಎಸ್‌ಯುವಿಯ ಸುರಕ್ಷತೆ, ಸೌಕರ್ಯ ಮತ್ತು ಅನುಕೂಲತೆಯನ್ನು ಹೆಚ್ಚಿಸುವ ಸಲುವಾಗಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಹೊಸ ಫೀಚರ್‌ಗಳ ಅಪ್‌ಡೇಟ್‌ಗಳೊಂದಿಗೆ ಇತ್ತೀಚೆಗೆ ಬಿಡುಗಡೆ ಮಾಡಿದೆ. ಗ್ರಾಹಕರ ಚಾಲನಾ ಅನುಭವವನ್ನು ಹೆಚ್ಚಿಸಲು ಮತ್ತು ವಿಕಸನಗೊಳ್ಳುತ್ತಿರುವ ಮಾರುಕಟ್ಟೆ ಪ್ರವೃತ್ತಿಗಳನ್ನು ಮನಗಂಡು ಹೊಸ ಅಪ್‌ಡೇಟ್‌ಗಳನ್ನು ಪರಿಚಯಿಸಿರುವುದಾಗಿ ಟೊಯೋಟಾ ಕಂಪನಿ ಹೇಳಿದೆ.

2021 ರಲ್ಲಿ ಬಿಡುಗಡೆಯಾದ ಅರ್ಬನ್ ಕ್ರೂಸರ್ ಹೈರೈಡರ್, ಭಾರತದಲ್ಲಿ ಈಗಾಗಲೇ 1 ಲಕ್ಷ ಕಾರುಗಳು ಮಾರಾಟವಾಗಿವೆ. ಪ್ರಸ್ತುತ ವರ್ಧಿತ ವೈಶಿಷ್ಟ್ಯ ನವೀಕರಣಗಳೊಂದಿಗೆ ಬಿಡುಗಡೆಯಾಗಿರುವ ಈ ಕಾರಿನ ಬೆಲೆಯು ರೂ. 11.34 ಲಕ್ಷಗಳ (ಎಕ್ಸ್ ಶೋ ರೂಂ) ಆರಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಅರ್ಬನ್ ಕ್ರೂಸರ್ ಹೈರೈಡರ್‌ನ ಹೊಸ ಫೀಚರ್ ಅಪ್‌ಡೇಟ್‌ಗಳನ್ನು ಕೆಳಗೆ ನೋಡೋಣ.

newly-launched-toyota-urban-cruiser-hyryder-price-features-details

ಸುಧಾರಿತ ಸುರಕ್ಷತೆಗಾಗಿ ಎಲ್ಲಾ ವೇರಿಯೆಂಟ್‌ಗಳಲ್ಲಿ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯ ಮಾಡಲಾಗಿದೆ. ಹೆಚ್ಚುವರಿ ಅನುಕೂಲತೆ ಮತ್ತು ಸುರಕ್ಷತೆಗಾಗಿ ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ (ಇಪಿಬಿ) ಅನ್ನು ಕೆಲವು ವೇರಿಯೆಂಟ್‌ಗಳಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಗೆ ಸೇರಿಸಲಾಗಿದೆ. ಡ್ರೈವಿಂಗ್ ಪೊಸಿಷನ್‌ಗಾಗಿ 8-ವೇ ಹೊಂದಾಣಿಕೆ ಮಾಡಬಹುದಾದ ಪವರ್ ಡ್ರೈವರ್ ಸೀಟ್ ಈಗ ಟಾಪ್‌ ವೇರಿಯೆಂಟ್‌ಗಳಲ್ಲಿ ಲಭ್ಯವಿದೆ.

ಸುಧಾರಿತ ಪರ್ಫಾಮೆನ್ಸ್‌ಗಾಗಿ ಈ ಹಿಂದಿದ್ದ AWD 5 - ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಅನ್ನು ಬದಲಿಸಿ ಈಗ ಹೊಸ 6 - ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ (6AT) ವೇರಿಯೆಂಟ್‌ನಲ್ಲಿ AWD (ಆಲ್‌ ವೀಲ್ ಡ್ರೈವ್) ನೀಡಲಾಗಿದೆ. ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS) ಅನ್ನು ಹೆಚ್ಚಿನ ವೇರಿಯೆಂಟ್‌ಗಳಲ್ಲಿ ಪರಿಚಯಿಸಲಾಗಿದೆ. ಹಾಗೆಯೇ ಟಾಪ್ ವೇರಿಯೆಂಟ್‌ಗಳಲ್ಲಿ ಆಂಬಿಯೆಂಟ್ ಲೈಟಿಂಗ್ ಅನ್ನು ಪರಿಚಯಿಸಲಾಗಿದೆ.

newly-launched-toyota-urban-cruiser-hyryder-price-features-details

ಟಾಪ್ ವೇರಿಯೆಂಟ್‌ಗಳಲ್ಲಿ ಚಾಲಕ ಮತ್ತು ಸಹ-ಚಾಲಕರಿಗೆ ವೆಂಟಿಲೇಟೆಡ್ ಸೀಟ್‌ಗಳು, ಟೈಪ್-ಸಿ USB ಫಾಸ್ಟ್ ಚಾರ್ಜಿಂಗ್ ಪೋರ್ಟ್‌ಗಳು (15W), LED ಸ್ಪಾಟ್ ಮತ್ತು ರೀಡಿಂಗ್ ಲ್ಯಾಂಪ್‌ಗಳು ಈಗ ಎಲ್ಲಾ ವೇರಿಯೆಂಟ್‌ಗಳಲ್ಲಿ ಪ್ರಮಾಣಿತವಾಗಿದೆ. ಹಾಗೆಯೇ ಏರ್ ಕ್ವಾಲಿಟಿ ಇಂಡೆಕ್ಸ್ ಡಿಸ್ಪ್ಲೇಯನ್ನು ಆಯ್ದ ವೇರಿಯೆಂಟ್‌ಗಳಿಗೆ ಸೇರಿಸಲಾಗಿದೆ.

ಸ್ಟೈಲಿಂಗ್ ಆಯ್ಕೆಗಳನ್ನು ಹೆಚ್ಚಿಸಲು ಆಯ್ದ ವೇರಿಯೆಂಟ್‌ಗಳಲ್ಲಿ ಡ್ಯುಯಲ್-ಟೋನ್ ಬಾಹ್ಯ ಬಣ್ಣದ ಆಯ್ಕೆಗಳನ್ನು ಪರಿಚಯಿಸಲಾಗಿದೆ. ಮೈಲೇಜ್ ಮತ್ತು ಪರ್ಫಾಮೆನ್ಸ್‌ಗಾಗಿ ನಿಯೋ ಡ್ರೈವ್ (ISG) ನೊಂದಿಗೆ 1.5L K-ಸಿರೀಸ್ ಎಂಜಿನ್, 5-ಸ್ಪೀಡ್ ಮ್ಯಾನುವಲ್, 2WD ಮತ್ತು 4WD ಆಯ್ಕೆಗಳೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಜೊತೆಗೆ ಸೆಲ್ಫ್ - ಚಾರ್ಜಿಂಗ್ ಸ್ಟ್ರಾಂಗ್ ಹೈಬ್ರಿಡ್ ಎಲೆಕ್ಟ್ರಿಕ್ ಪವರ್‌ಟ್ರೇನ್ ಅನ್ನು ಹೊಂದಿದೆ.

newly-launched-toyota-urban-cruiser-hyryder-price-features-details

ಒಳಗೆ ಪ್ರೀಮಿಯಂ ಕ್ಯಾಬಿನ್ 9 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೆಂಟಿಲೇಟೆಡ್ ಲೆದರ್ ಸೀಟ್‌ಗಳು, 360 - ಡಿಗ್ರಿ ಕ್ಯಾಮೆರಾ, ಆಂಬಿಯೆಂಟ್ ಲೈಟಿಂಗ್, ಹೆಡ್ - ಅಪ್ ಡಿಸ್ಪ್ಲೇ ಸೇರಿದಂತೆ ವೈರ್‌ಲೆಸ್ ಚಾರ್ಜಿಂಗ್, ಕ್ರೂಸ್ ಕಂಟ್ರೋಲ್, ಗೂಗಲ್ ಮತ್ತು ಸಿರಿ ವಾಯ್ಸ್ ಅಸಿಸ್ಟೆಂಟ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, April 12, 2025, 10:00 [IST]
English summary
Newly launched toyota urban cruiser hyryder price features details
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+