20 ಕಿ.ಮೀ ಮೈಲೇಜ್.. 5-ಸೀಟರ್.. ಪ್ರಖ್ಯಾತ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಬೆಲೆ ಮತ್ತೆ ಏರಿಕೆ, ಎಷ್ಟಾಗಿದೆ?

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಈ ಫೆಬ್ರವರಿ ತಿಂಗಳು 2,328 ಯುನಿಟ್ 'ನಿಸ್ಸಾನ್ ಮ್ಯಾಗ್ನೈಟ್' ಕಾರುಗಳು ಮಾರಾಟಗೊಂಡಿವೆ. ಸದ್ಯ, ಇದೇ ಕಾರಿನ ಬೆಲೆಯನ್ನು ಮತ್ತೊಮ್ಮೆ ಏರಿಕೆ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಯ ಬಹುತೇಕ ಎಲ್ಲ ರೂಪಾಂತರಗಳ (ವೇರಿಯೆಂಟ್) ಬೆಲೆ ರೂ.4,000 ಹೆಚ್ಚಳಗೊಂಡಿದೆ ಎಂದು ವರದಿಯಾಗಿದೆ. ಈ ಮೊದಲು ಜನವರಿ 31 ರಿಂದ ಜಾರಿಗೆ ಬರುವಂತೆಯೂ ನೂತನ ಮ್ಯಾಗ್ನೈಟ್ ಕಾರಿನ ದರವನ್ನು ರೂ.22,000 ವರೆಗೆ ಅಧಿಕಗೊಳಿಸಲಾಗಿತ್ತು.

Nissan Magnite Car Price Hike Again Details

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ರೂ.6.14 ಲಕ್ಷದಿಂದ ರೂ.11.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ ಹಾಗೂ ಟೆಕ್ನಾ ಪ್ಲಸ್ ಎಂಬ 6 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಹೊಂದಿದೆ.

ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸಗಳನ್ನು ಒಳಗೊಂಡಿದೆ. ಹೊಸದಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಗ್ರಿಲ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಇದರೊಂದಿಗೆ 16-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ. ನೂತನ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕೂಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲ್ಯಾಕ್ ಹಾಗೂ ಪರ್ಲ್ ವೈಟ್ ಎಂಬ ಬಣ್ಣಗಳನ್ನು ಪಡೆದಿದೆ.

Nissan Magnite Car Price Hike Again Details

ನೂತನ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 17.4 ರಿಂದ 20 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.

ಈ ಕಾರಿನಲ್ಲಿ 5 ಮಂದಿ ಓಡಾಟ ನಡೆಸಬಹುದು. ವಾರಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಇದರೊಟ್ಟಿಗೆ 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Nissan Magnite Car Price Hike Again Details

ನೂತನ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಕಾರಿಗೆ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, March 10, 2025, 7:40 [IST]
English summary
Nissan magnite car price hike again details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+