Nissan: ಜನಮೆಚ್ಚಿದ 'ನಿಸ್ಸಾನ್ ಮ್ಯಾಗ್ನೈಟ್' ಕಾರು ಶೀಘ್ರ ಸಿಎನ್‌ಜಿ ಅವತಾರದಲ್ಲಿ.. ಭಾರೀ ಮೈಲೇಜ್!

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಗೇಮ್ ಚೇಂಜರ್ ಎಸ್‌ಯುವಿಯಾಗಿ ಹೊರ ಹೊಮ್ಮಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಪ್ರತಿ ತಿಂಗಳು 2,000ಕ್ಕೂ ಅಧಿಕ ಖರೀದಿದಾರರು ಇದೇ ಮ್ಯಾಗ್ನೈಟ್ ಎಸ್‌ಯುವಿಯನ್ನು ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ನೂತನ ನಿಸ್ಸಾನ್ ಮ್ಯಾಗ್ನೈಟ್ ಕಾರನ್ನು ಹೊಸ ಅವತಾರದಲ್ಲಿ ಮಾರಾಟಕ್ಕೆ ತರಲು ಕಂಪನಿಯು ಭರದಿಂದ ಸಿದ್ಧತೆಯನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಜಾಗತಿಕವಾಗಿ ನಿಸ್ಸಾನ್ (Nissan) ಹಾಗೂ ರೆನಾಲ್ಟ್ (Renault) ಕಂಪನಿಗಳು ವ್ಯಾಪಾರ ಪಾಲುದಾರಿಕೆಯನ್ನು ಹೊಂದಿರುವುದು ಗೊತ್ತೇ ಇದೆ. ಈಗಾಗಲೇ, ರೆನಾಲ್ಟ್ ಕಿಗರ್ ಎಸ್‌ಯುವಿ ಸಾಮಾನ್ಯ ಪೆಟ್ರೋಲ್ ಎಂಜಿನ್‌ನೊಂದಿಗೆ ಸಿಎನ್‌ಜಿ ಸೆಟಪ್‌ನೊಂದಿಗೂ ಮಾರಾಟಕ್ಕೆ ಬಂದಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ನಿಸ್ಸಾನ್ ಮ್ಯಾಗ್ನೈಟ್ ಕೂಡ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ.

Nissan Magnite Expected To Get Cng Engine High Mileage Details

ಪೆಟ್ರೋಲ್ ಚಾಲಿತ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ವಿಶೇಷತೆಗಳೇನು: ಈ ಕಾರು ರೂ.6.14 ಲಕ್ಷದಿಂದ ರೂ.11.76 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ & ಎನ್-ಕನೆಕ್ಟಾ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ ಕಾರು ಶಕ್ತಿಯುತ ಎರಡು ಪವರ್‌ಟ್ರೇನ್‍ನ್ನು ಹೊಂದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Nissan Magnite Expected To Get Cng Engine High Mileage Details

ಈ ಎಸ್‌ಯುವಿ 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಊರಿಂದ ಊರಿಗೆ ಸಂಚಾರ ಮಾಡಬಹುದು. 8 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7 - ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ. ಈ ಎಸ್‌ಯುವಿಗೆ ಟಾಟಾ ನೆಕ್ಸಾನ್‌, ಹ್ಯುಂಡೈ ವೆನ್ಯೂ, ಕಿಯಾ ಸೋನೆಟ್ & ಮಾರುತಿ ಸುಜುಕಿ ಬ್ರೆಝಾ ಕಾರುಗಳು ಅತಿದೊಡ್ಡ ಎದುರಾಳಿಯಾಗಲಿವೆ.

Nissan Magnite Expected To Get Cng Engine High Mileage Details

ಇನ್ನು, ನಿಸ್ಸಾನ್ ಮ್ಯಾಗ್ನೈಟ್ ಕೂಡ ಸಿಎನ್‌ಜಿ ಪವರ್‌ಟ್ರೇನ್ ಆಯ್ಕೆಯಲ್ಲಿ ಮಾರಾಟಕ್ಕೆ ಬರಲಿದೆ ಎನ್ನಲಾಗುತ್ತಿರುವುದು ಖುಷಿಯ ವಿಚಾರವಾಗಿದೆ. ಈ ಕಾರು ಗರಿಷ್ಠ ಮೈಲೇಜ್ ನೀಡುವ ಸಾಧ್ಯತೆಯೂ ಹೆಚ್ಚಿದೆ. ಇದರಿಂದ ಕಡಿಮೆ ನಿರ್ವಹಣಾ ವೆಚ್ಚದ ಹೊಸ ಎಸ್‌ಯುವಿಯನ್ನು ಖರೀದಿ ಮಾಡಬೇಕು ಅಂದುಕೊಂಡಿರುವ ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, March 3, 2025, 15:44 [IST]
English summary
Nissan magnite expected to get cng engine high mileage details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+