Nissan: ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ ಬಿಡುಗಡೆ, ಬೆಲೆಯೂ ಅಗ್ಗ, ವಿಶೇಷತೆಗಳೇನು?
ನಿಸ್ಸಾನ್ ಮ್ಯಾಗ್ನೈಟ್ ಪ್ರಮುಖ ಎಸ್‌ಯುವಿಯಾಗಿ ಹೊರಹೊಮ್ಮಿದೆ. ವಿಶಿಷ್ಟ ವಿನ್ಯಾಸ ಹಾಗೂ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಕಡಿಮೆ ನಿರ್ವಹಣಾ ವೆಚ್ಚ & ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಪ್ರತಿ ತಿಂಗಳು ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಮನೆಗೆ ತರುತ್ತಿದ್ದಾರೆ. ಸದ್ಯ ಇದೇ ಕಾರನ್ನು ಅವರಿಗೆ ಮತ್ತಷ್ಟು ಹತ್ತಿರವಾಗಿಸಲು ಕಂಪನಿಯು ಮುಂದಾಗಿದ್ದು, ಹೊಚ್ಚ ಹೊಸ 'ಕುರೊ ಎಡಿಷನ್'ನ್ನು ಬಿಡುಗಡೆಗೊಳಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ನೂತನ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ (Nissan Magnite Kuro Edition), ರೂ.8.30 ಲಕ್ಷ (ಎಕ್ಸ್-ಶೋರೂಂ) ಬೆಲೆಗೆ ಮಾರಾಟಕ್ಕೆ ಬಂದಿದೆ. 'ಎನ್-ಕನೆಕ್ಟಾ' ರೂಪಾಂತರವನ್ನು (ವೇರಿಯೆಂಟ್) ಆಧರಿಸಿದೆ. ಬುಕ್ಕಿಂಗ್ ಕೂಡ ಶುರುವಾಗಿದ್ದು, ಆಸಕ್ತ ಗ್ರಾಹಕರು ಸಮೀಪದ ಕಂಪನಿಯ ಡೀಲರ್‌ಶಿಪ್ ಅಥವಾ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.11,000 ಮುಂಗಡ ಹಣವನ್ನು ಪಾವತಿಸುವುದರೊಂದಿಗೆ ಆರ್ಡರ್ ಮಾಡಬಹುದು.

ಇದು ಹೊರಭಾಗದಲ್ಲಿ ವಿನ್ಯಾಸದ ದೃಷ್ಟಿಯಿಂದ ಸಾಮಾನ್ಯ 'ಮ್ಯಾಗ್ನೈಟ್' ಎಸ್‌ಯುವಿಗೆ ಹೋಲಿಕೆಯಾಗಲಿದೆ. ಆದರೆ, ಹೊಸದಾಗಿರುವ ಸಿಲ್ವರ್ ಇನ್ಸೆರ್ಟ್ಸ್ ಜೊತೆಗೆ ಆಲ್-ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಪಡೆದಿದೆ. ಈ ಕಾರಿನ ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಹಾಗೂ ಡೈಮಂಡ್ ಕಟ್ ವೀಲ್‌ಗಳು ಸೇರಿದಂತೆ ಎಲ್ಲವು ಬ್ಲ್ಯಾಕ್ (ಕಪ್ಪು) ಬಣ್ಣದಲ್ಲಿವೆ.
ಹೊಸ 'ಕುರೊ ಎಡಿಷನ್' ಪವರ್‌ಟ್ರೇನ್ ಆಯ್ಕೆಯಲ್ಲಿ ಯಾವುದೇ ಬದಲಾವಣೆಯನ್ನು ಮಾಡಲಾಗಿಲ್ಲ. ಇದರ 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 72 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.
ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 100 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಈ ಕಾರು 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. ಇದಕ್ಕೆ ಸಿಎನ್‌ಜಿ ಕಿಟ್‌ನ್ನು ಸಹ ಅಳವಡಿಕೆ ಮಾಡಬಹುದಾಗಿದೆ.
ನೂತನ 'ಕುರೊ ಎಡಿಷನ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 336 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 3994 ಎಂಎಂ ಉದ್ದ, 1758 ಎಂಎಂ ಅಗಲ ಮತ್ತು 1572 ಎಂಎಂ ಎತ್ತರವು ಇದೆ. 205 ಎಂಎಂ ಗ್ರೌಂಡ್ ಕಿಯರೆನ್ಸ್ & 2500 ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರಿನ ಒಳಭಾಗದ ವಿನ್ಯಾಸದಲ್ಲೂ ಮಾರ್ಪಾಡುಗಳಾಗಿಲ್ಲ. ಇದು ಬ್ಲ್ಯಾಕ್ ಪೇಂಟ್ ಸ್ಕೀಮ್‌ನ ಕ್ಯಾಬಿನ್, ರೂಫ್, ಡ್ಯಾಶ್‌ಬೋರ್ಡ್, ಸ್ಟೀರಿಂಗ್ ವೀಲ್ ಹಾಗೂ ಸೆಂಟರ್ ಕನ್ಸೋಲ್‍ನ್ನು ಹೊಂದಿದೆ. ಇದರೊಂದಿಗೆ ಅರ್ಕಾಮಿಸ್ ಸೌಂಡ್ ಸಿಸ್ಟಮ್, ಐ-ಕೀ ಆಟೋ ಅನ್‌ಲಾಕ್, ಇಲ್ಯುಮಿನೇಟೆಡ್ ಗ್ಲೋವ್ ಬಾಕ್ಸ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಹೊಸ ಕುರೊ ಎಡಿಷನ್ ಸುರಕ್ಷತೆಗೂ ಹೆಸರುವಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ಹಿಲ್ ಹೋಲ್ಡ್ ಅಸಿಸ್ಟ್, 360-ಡಿಗ್ರಿ ಕ್ಯಾಮೆರಾ, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.


Click it and Unblock the Notifications