Nissan: 8 ಲಕ್ಷ.. 5-ಸೀಟರ್, ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ ಕುರಿತ ಪ್ರಮುಖಾಂಶಗಳಿವು.. ಯಾರು ಹೇಳಲ್ಲ!
ಇತ್ತೀಚೆಗೆ ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ (Nissan Magnite Kuro Edition) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಇದು ತುಂಬಾ ಚೆನ್ನಾಗಿರುವ ವಿನ್ಯಾಸ ಮತ್ತು ಹತ್ತಾರು ಅತ್ಯಾಧುನಿಕವಾದ ವೈಶಿಷ್ಟ್ಯಗಳನ್ನು ಪಡೆದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಇದರೊಂದಿಗೆ ಕೈಗೆಟುಕುವ ದರದಲ್ಲೂ ಗ್ರಾಹಕರ ಖರೀದಿಗೆ ಲಭ್ಯವಿದೆ. ನಾವಿಲ್ಲಿ ನೂತನ 'ಕುರೊ ಎಡಿಷನ್' ಬೆಲೆ ಹಾಗೂ ವಿಶೇಷತೆಗಳ ಕುರಿತ ಪ್ರಮುಖಾಂಶಗಳು ಏನೆಂಬುದನ್ನು ತಿಳಿಸಿಕೊಟ್ಟಿದ್ದೇವೆ.
ಬೆಲೆ (Price):
ಈ ಎಸ್‌ಯುವಿಯು ಅಗ್ಗದ ದರದಲ್ಲೂ ಲಭ್ಯವಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.8.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಬುಕ್ಕಿಂಗ್‌ನ್ನು ಪ್ರಾರಂಭ ಮಾಡಲಾಗಿದ್ದು, ಆಸಕ್ತರು ಸಮೀಪದ ಕಂಪನಿಯ ಶೋರೂಂಗೆ ಅಥವಾ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ರೂ.11,000 ಮುಂಗಡ ಹಣವನ್ನು ಪಾವತಿಸಿ, ಕಾಯ್ದಿರಿಸಬಹುದು.

ವಿನ್ಯಾಸ (Design):
ಹೊಸ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್, ವಿನ್ಯಾಸವು ಖರೀದಿದಾರರನ್ನು ಸೆಳೆಯುವಂತಿದೆ. ಹೊರಭಾಗದಲ್ಲಿ ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಪಡೆದಿದೆ. ಈ ಕಾರಿನ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, ಟೈಲ್ ಲ್ಯಾಂಪ್‌ಗಳು ಹಾಗೂ ಡೈಮಂಡ್ ಕಟ್ ಅಲಾಯ್ ವೀಲ್‌ಗಳು ಸೇರಿದಂತೆ ಎಲ್ಲವು ಬ್ಲ್ಯಾಕ್ (ಕಪ್ಪು) ಬಣ್ಣವನ್ನು ಹೊಂದಿವೆ.
ಸುತ್ತಳತೆ (Dimensions):
ನೂತನ ಕುರೊ ಎಡಿಷನ್ ಸುತ್ತಳತೆಯಲ್ಲಿಯೂ ಯಾವುದೇ ಬದಲಾವಣೆಗಳಿಲ್ಲ. ಇದು ಸಾಮಾನ್ಯ 'ಮ್ಯಾಗ್ನೈಟ್'ನಂತೆಯೇ ಇದೆ. 3994 ಎಂಎಂ ಉದ್ದ, 1758 ಎಂಎಂ ಅಗಲ ಹಾಗೂ 1572 ಎಂಎಂ ಎತ್ತರವಿದೆ. ಜೊತೆಗೆ 205 ಎಂಎಂ ಗ್ರೌಂಡ್ ಕಿಯರೆನ್ಸ್ ಮತ್ತು 2500 ವೀಲ್‌ಬೇಸ್‌ನ್ನು ಪಡೆದಿದೆ.
ಆಸನ ಆಯ್ಕೆ & ಬೂಟ್ ಸ್ಪೇಸ್ (Seating Capacity & Boot Space):
ಈ ಎಸ್‌ಯುವಿಯು 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ದೂರದ ಊರುಗಳಿಗೆ ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಕಾರ್ಯಕ್ಷಮತೆ (Performance):
ಹೊಸ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ ಎಸ್‌ಯುವಿಯು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. ಹೆಚ್ಚಿನ ಹಣ ನೀಡಿದರೆ, ಸಿಎನ್‌ಜಿ ಕಿಟ್‌ನ್ನು ಅಳವಡಿಸಿಯೂ ಕೊಡಲಾಗುತ್ತದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17 ರಿಂದ 24 ಕಿ.ಮೀ ವರೆಗೆ ಮೈಲೇಜ್‌ನ್ನು ಕೊಡಬಹುದು ಎಂದು ಅಂದಾಜಿಸಲಾಗಿದೆ.
ವೈಶಿಷ್ಟ್ಯಗಳು (Features):
ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದ್ದು, ಬ್ಲ್ಯಾಕ್ ಪೇಂಟ್ ಸ್ಕೀಮ್‌ನ ಕ್ಯಾಬಿನ್, ರೂಫ್, ಡ್ಯಾಶ್‌ಬೋರ್ಡ್ ಮತ್ತು ಸ್ಟೀರಿಂಗ್ ವೀಲ್ ಪಡೆದಿದೆ. ಹಾಗೆಯೇ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್ ಹಾಗೂ ಯುಎಸ್‌ಬಿ ಚಾರ್ಜರ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಸುರಕ್ಷತಾ ವೈಶಿಷ್ಟ್ಯಗಳು (Safety Features):
ನೂತನ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








