20 ಕಿ.ಮೀ ಮೈಲೇಜ್.. 5-ಸೀಟರ್, 6 ಲಕ್ಷ.. ಈ ಜನಪ್ರಿಯ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್ ಘೋಷಣೆ!

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಜನಮೆಚ್ಚಿದ ಎಸ್‌ಯುವಿಯಾಗಿದೆ. ಇದು ವಿಶ್ವಾಸಾರ್ಹತೆ ಹಾಗೂ ಉತ್ತಮವಾದ ಕಾರ್ಯಕ್ಷಮತೆಗೆ ಹೆಸರುವಾಸಿಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಜಾಗತಿಕವಾಗಿ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಗ್ಲೋಬಲ್ ಎನ್‌ಸಿಎಪಿ (Global NCAP) ಭಾರತದಲ್ಲಿ ತಯಾರಾಗುವ ಇದೇ 'ಮ್ಯಾಗ್ನೈಟ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ನೀಡಿದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಯು ಗ್ಲೋಬಲ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 34ಕ್ಕೆ 32.31 ಅಂಕಗಳನ್ನು ಪಡೆದಿದೆ. ಇದರೊಂದಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಯಶಸ್ವಿಯಾಗಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 33.64 ಅಂಕಗಳನ್ನು ಗಳಿಸಿದ್ದು, 3-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಮಾತ್ರ ಪಡೆದಿದೆ.

Nissan Magnite Suv Get 5 Star Safety Rating In Global Ncap Details

ಗ್ಲೋಬಲ್ ಎನ್‌ಸಿಎಪಿ ನೀಡಿರುವ ಈ 5-ಸ್ಟಾರ್ ಸೇಫ್ಟಿ ರೇಟಿಂಗ್‌, ಭಾರತ ಹಾಗೂ ದಕ್ಷಿಣ ಆಫ್ರಿಕಾದಲ್ಲಿ ಮಾರಾಟವಾಗುವ ಎಲ್ಲ ನಿಸ್ಸಾನ್ ಮ್ಯಾಗ್ನೈಟ್ ಮಾಡೆಲ್‌ಗಳಿಗೆ ಅನ್ವಯಿಸುತ್ತದೆ ಎಂಬ ವಿವರಗಳು ಲಭ್ಯವಾಗಿವೆ. ಇದೇ ಕಾರು ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

ದೇಶೀಯವಾಗಿ ಖರೀದಿಗೆ ದೊರೆಯುವ ನಿಸ್ಸಾನ್ ಮ್ಯಾಗ್ನೈಟ್ ವಿಶೇಷತೆಗಳೇನು:

ಇದು ಸಣ್ಣ ಗಾತ್ರದ ಎಸ್‌ಯುವಿಯಾಗಿಯಾಗಿದ್ದು, ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅದಕ್ಕೆ ತಕ್ಕಂತೆ ಕನಿಷ್ಠ ರೂ.6.14 ಲಕ್ಷ ಹಾಗೂ ಗರಿಷ್ಠ ರೂ.11.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ & ಟೆಕ್ನಾ ಪ್ಲಸ್ ಎಂಬ ರೂಪಾಂತರಗಳೊಂದಿಗೂ (ವೇರಿಯೆಂಟ್) ದೊರೆಯುತ್ತದೆ.

Nissan Magnite Suv Get 5 Star Safety Rating In Global Ncap Details

ಈ ಕಾರು ಅದ್ಭುತವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, ಟೈಲ್ ಲ್ಯಾಂಪ್‌ಗಳು ಹಾಗೂ ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಬ್ಲೇಡ್ ಸಿಲ್ವರ್, ಸನ್‌ರೈಸ್ ಕೂಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲ್ಯಾಕ್ ಹಾಗೂ ಪರ್ಲ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 3994 ಎಂಎಂ ಉದ್ದ, 1758 ಎಂಎಂ ಅಗಲ ಮತ್ತು 1572 ಎಂಎಂ ಎತ್ತರವು ಇದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. ಯಾವ ಬೈಕ್‌ಗೂ ಕಡಿಮೆಯಿಲ್ಲದ ರೀತಿಯಲ್ಲಿ 17 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.

ಇದರಲ್ಲಿ 5 ಆಸನ ಆಯ್ಕೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 40 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ.

ಹೊಸ ಮ್ಯಾಗ್ನೈಟ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ (7-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೋಲ್ಡ್ ಗ್ಲೋವ್ ಬಾಕ್ಸ್, ಕ್ರೂಸ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, 6-ಸ್ಪೀಕರ್‌ಗಳು, ರೇರ್ ಎಸಿ ವೆಂಟ್‌ಗಳು, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಹಾಗೂ ಯುಎಸ್‌‍ಬಿ ಚಾರ್ಜರ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, July 25, 2025, 10:36 [IST]
English summary
Nissan magnite suv get 5 star safety rating in global ncap test details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+