20 ಕಿ.ಮೀ ಮೈಲೇಜ್.. 6 ಲಕ್ಷ, 5-ಸೀಟರ್.. Nissan Magnite ಕಾರಿಗೆ ರೂ.91000 ವರೆಗೆ ರಿಯಾಯಿತಿ!

ಭಾರತದ ಕಾರು ಮಾರುಕಟ್ಟೆಯಲ್ಲಿ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಬಲು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದರ ಆಕರ್ಷಕವಾದ ನೋಟಕ್ಕೆ ಗ್ರಾಹಕರು ಕೂಡ ಮರುಳಾಗಿದ್ದು, ಅತ್ಯುತ್ತಮ ವೈಶಿಷ್ಟ್ಯಗಳನ್ನು ಹೊಂದಿರುವುದರಿಂದ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಸದ್ಯ, ಈ ಕಾರನ್ನು ಕೊಂಡುಕೊಳ್ಳಬೇಕು ಎಂದು ಆಲೋಚಿಸಿರುವ ಖರೀದಿದಾರರಿಗೆ ಭಾರೀ ಸಿಹಿಸುದ್ದಿಯೊಂದು ಲಭ್ಯವಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಕೇರಳ ಹೊರತಾಗಿಪಡಿಸಿ, ಉಳಿದೆಲ್ಲ ದಕ್ಷಿಣ ಭಾರತದ ರಾಜ್ಯಗಳಲ್ಲಿ ಈ ಜುಲೈನಲ್ಲಿ 'ನಿಸ್ಸಾನ್ ಮ್ಯಾಗ್ನೈಟ್' ಕಾರಿಗೆ ದೊಡ್ಡ ಮಟ್ಟದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ. 2025ರಲ್ಲಿ ಉತ್ಪಾದನೆಗೊಂಡ ಈ ಎಸ್‌ಯುವಿಯ ವಿವಿಧ ರೂಪಾಂತರಗಳು, ರೂ.7,000 ರಿಂದ ರೂ.91,000 ವರೆಗೆ ಹಣಕಾಸಿನ ಪ್ರಯೋಜನವನ್ನು ಹೊಂದಿವೆ.

Nissan Magnite Suv Get Big Discount In July 2025 Details

ನಿಸ್ಸಾನ್ ಮ್ಯಾಗ್ನೈಟ್ ವಿಶೇಷತೆಗಳೇನು:

ಇದೊಂದು ಸಬ್-ಕಾಂಪ್ಯಾಕ್ಟ್ ಎಸ್‌ಯುವಿಯಾಗಿಯಾಗಿದ್ದು, ಅತಿ ಕಡಿಮೆ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.6.14 ಲಕ್ಷದಿಂದ ರೂ.11.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ ಹಾಗೂ ಟೆಕ್ನಾ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಹೊರಭಾಗದಲ್ಲೂ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಇದು ನೋಡುಗರನ್ನು ಸೆಳೆಯುತ್ತದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, ಟೈಲ್ ಲ್ಯಾಂಪ್‌ಗಳು & ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಬ್ಲೇಡ್ ಸಿಲ್ವರ್, ಸನ್‌ರೈಸ್ ಕೂಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲ್ಯಾಕ್ & ಪರ್ಲ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Nissan Magnite Suv Get Big Discount In July 2025 Details

ನೂತನ ಮ್ಯಾಗ್ನೈಟ್ ಎಸ್‌ಯುವಿಯು ಸಾಕಷ್ಟು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ & ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17 ರಿಂದ 20 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 40 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 336 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಈ ಕಾರು 3994 ಎಂಎಂ ಉದ್ದ, 1758 ಎಂಎಂ ಅಗಲ ಹಾಗೂ 1572 ಎಂಎಂ ಎತ್ತರವು ಇದೆ. ಜೊತೆಗೆ 205 ಎಂಎಂ ಗ್ರೌಂಡ್ ಕಿಯರೆನ್ಸ್ ಮತ್ತು 2500 ವೀಲ್‌ಬೇಸ್‌ನ್ನು ಪಡೆದಿದೆ.

Nissan Magnite Suv Get Big Discount In July 2025 Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೋಲ್ಡ್ ಗ್ಲೋವ್ ಬಾಕ್ಸ್, ಕ್ರೂಸ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, 6-ಸ್ಪೀಕರ್‌ಗಳು, ರೇರ್ ಎಸಿ ವೆಂಟ್‌ಗಳು, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್, ಫ್ರಂಟ್ & ರೇರ್ ಯುಎಸ್‌‍ಬಿ ಚಾರ್ಜರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್ ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್-ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಬ್ರೇಕ್ ಅಸಿಸ್ಟ್, ಹೈಡ್ರಾಲಿಕ್ ಬ್ರೇಕ್ ಅಸಿಸ್ಟ್, ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) ಹಾಗೂ ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

More from DriveSpark

Article Published On: Thursday, July 10, 2025, 16:37 [IST]
English summary
Nissan magnite suv get big discount in july 2025 details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+