ಗಣೇಶ ಹಬ್ಬಕ್ಕೆ ಸಿಹಿಸುದ್ದಿ: 20 ಕಿ.ಮೀ ಮೈಲೇಜ್.. 5-ಸೀಟರ್, 6 ಲಕ್ಷ.. ಈ ಪ್ರಖ್ಯಾತ ಕಾರಿಗೆ ದೊಡ್ಡ ರಿಯಾಯಿತಿ!
ಇದೇ 27ಕ್ಕೆ ಗಣೇಶ ಹಬ್ಬ (Ganesha Festival) ಬಂದಿದ್ದು, ಅಂದು ಸಿದ್ದಿ ವಿನಾಯಕನನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಲಾಗುತ್ತದೆ. ಈ ಮೂಲಕ ಹಬ್ಬವನ್ನು ಸಂಭ್ರಮ-ಸಡಗರದಿಂದಲೂ ಆಚರಿಸಲಾಗುತ್ತದೆ. ನೀವು ಗಣೇಶ ಚತುರ್ಥಿಗೆ ಹೊಚ್ಚ ಹೊಸ ಕಾರೊಂದನ್ನು ಖರೀದಿ ಮಾಡಲು ಆಲೋಚಿಸಿದ್ದೀರಾ.. ಯಾವ ಕಾರು ಹೆಚ್ಚಿನ ರಿಯಾಯಿತಿ ಹೊಂದಿದೆ ಎಂಬುದರ ಬಗ್ಗೆ ತಿಳಿಯಲು ಪ್ರಯತ್ನಿಸುತ್ತಿರುವಿರಾ.. ಈ ತಿಂಗಳು ಜನಪ್ರಿಯ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿಯು ಭಾರೀ ರಿಯಾಯಿತಿ ಪ್ರಯೋಜವನ್ನು ಪಡೆದಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ನೂತನ ನಿಸ್ಸಾನ್ ಮ್ಯಾಗ್ನೈಟ್ ಕಾರು ಬಜೆಟ್ ಬೆಲೆಯಲ್ಲಿಯೂ ಸಿಗಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.6.14 ಲಕ್ಷದಿಂದ ರೂ.11.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್ ಕನೆಕ್ಟಾ, ಟೆಕ್ನಾ ಹಾಗೂ ಟೆಕ್ನಾ ಪ್ಲಸ್ ಎಂಬ ರೂಪಾಂತರ ಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಆಗಸ್ಟ್ ತಿಂಗಳು ಕೇರಳ ಹೊರತುಪಡಿಸಿ, ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ 2025ರಲ್ಲಿ ತಯಾರಿಸಿದ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಯು ದೊಡ್ಡ ಮಟ್ಟದಲ್ಲಿ ರಿಯಾಯಿತಿಯನ್ನು ಪಡೆದಿದೆ. ರೂಪಾಂತರಗಳನ್ನು ಅವಲಂಭಿಸಿ, ರೂ.40,000 ರಿಂದ ರೂ.91,000 ವರೆಗೆ ಹಣಕಾಸು ಪ್ರಯೋಜನಗಳು ಲಭ್ಯವಿವೆ. ಇದರಲ್ಲಿ ನಗದು ರಿಯಾಯಿತಿ ಹಾಗೂ ವಿನಿಮಯ ಕೊಡುಗೆಗಳು ಕೂಡ ಸೇರಿವೆ.
ಹೊಸ ಮ್ಯಾಗ್ನೈಟ್ ಕಾರು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಟೈಲ್ ಲ್ಯಾಂಪ್‌ಗಳು ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕಾಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲ್ಯಾಕ್, ವಿವಿಡ್ ಬ್ಲೂ ಹಾಗೂ ಮೆಟಾಲಿಕ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಇದು 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 3994 ಎಂಎಂ ಉದ್ದ, 1758 ಎಂಎಂ ಅಗಲ & 1572 ಎಂಎಂ ಎತ್ತರ ಕೂಡ ಇದೆ. ಜೊತೆಗೆ 205 ಎಂಎಂ ಗ್ರೌಂಡ್ ಕಿಯರೆನ್ಸ್ & 2500 ವೀಲ್‌ಬೇಸ್‌ನ್ನು ಹೊಂದಿದೆ.
ನೂತನ ಮ್ಯಾಗ್ನೈಟ್ ಎಸ್‌ಯುವಿಯು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರು 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ಕೊಡಬಹುದು. ಇದಕ್ಕೆ ಸಿಎನ್‌ಜಿ ಕಿಟ್‌ನ್ನು ಅಳವಡಿಸಬಹುದು. 40 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ.

ಈ ಕಾರು 175 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 10.28 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 4-ಕಲರ್ ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಇದು ಸುರಕ್ಷತೆಗಾಗಿ ಗ್ಲೋಬಲ್ ಎನ್‌ಸಿಎಪಿಯಿಂದ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
ಕೆಲವೇ ದಿನಗಳ ಹಿಂದೆ ನಿಸ್ಸಾನ್ ಮ್ಯಾಗ್ನೈಟ್ ಕುರೊ ಎಡಿಷನ್ ಬಿಡುಗಡೆಯಾಗಿದೆ:
ಈ ಕಾರು ರೂ.8.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬುಕ್ಕಿಂಗ್‌ನ್ನು ಶುರು ಮಾಡಲಾಗಿದ್ದು, ರೂ.11,000 ಮುಂಗಡ ಹಣ ಪಾವತಿಸಿ, ಆರ್ಡರ್ ಮಾಡಬಹುದು. ಸಾಮಾನ್ಯ 'ಮ್ಯಾಗ್ನೈಟ್'ನಂತೆಯೇ ವಿನ್ಯಾಸವನ್ನು ಹೊಂದಿದೆ. ಹೆಚ್ಚುವರಿಯಾಗಿ ಆಲ್ ಬ್ಲ್ಯಾಕ್ ಪೇಂಟ್ ಸ್ಕೀಮ್‌ನ್ನು ಒಳಗೊಂಡಿದೆ.


Click it and Unblock the Notifications