Nissan: 6 ಲಕ್ಷ.. 5-ಸೀಟರ್, 20 Km ಮೈಲೇಜ್.. ಈ ಜನಪ್ರಿಯ ಕಾರಿಗೆ 1 ಲಕ್ಷವರೆಗೆ ರಿಯಾಯಿತಿ!

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಪ್ರಮುಖ ಎಸ್‌ಯುವಿಯಾಗಿದೆ. ಇದು ಗೇಮ್ ಚೇಂಜರ್ ಕಾರಾಗಿ ಹೊರಹೊಮ್ಮಿದ್ದು, ಹೆಚ್ಚು ಆಕರ್ಷಕವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಕಳೆದ ತಿಂಗಳು (ಮೇ-2025) ಬರೋಬ್ಬರಿ 1,334 ಯುನಿಟ್‌ 'ಮ್ಯಾಗ್ನೈಟ್' ಎಸ್‌ಯುವಿಗಳನ್ನು ಮಾರಾಟಗೊಳಿಸಲಾಗಿದೆ. ಸದ್ಯ, ಇದೇ ಜೂನ್‌ ತಿಂಗಳು ಈ ಕಾರಿಗೆ ದೊಡ್ಡ ಮಟ್ಟದ ರಿಯಾಯಿತಿ ಪ್ರಯೋಜನಗಳನ್ನು ಘೋಷಣೆ ಮಾಡಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ದಕ್ಷಿಣದ ರಾಜ್ಯಗಳಲ್ಲಿ 2025ರಲ್ಲಿ ತರಿಸಿದ 'ನಿಸ್ಸಾನ್ ಮ್ಯಾಗ್ನೈಟ್' ಕಾರಿನ ವಿವಿಧ ರೂಪಾಂತರಗಳು, ರೂ.40,000 ರಿಂದ ರೂ.80,000 ವರೆಗೆ ರಿಯಾಯಿತಿಯನ್ನು ಹೊಂದಿವೆ. ಅದೇ ರೀತಿಯಲ್ಲಿ 2024ರಲ್ಲಿ ಉತ್ಪಾದಿಸಿದ ರೂಪಾಂತರಗಳು, ರೂ.25,000 ದಿಂದ ರೂ.1.25 ಲಕ್ಷವರೆಗೆ ಹಣಕಾಸಿನ ಪ್ರಯೋಜನಗಳನ್ನು ಪಡೆದಿವೆ.

Nissan Magnite Suv Get Up To Rs 1 25 lakh Discount in June 2025 Details

ನಿಸ್ಸಾನ್ ಮ್ಯಾಗ್ನೈಟ್ ವಿಶೇಷತೆಗಳೇನು:

ಇದೊಂದು ಎಸ್‌ಯುವಿಯಾಗಿದೆ. ಕನಿಷ್ಠ ರೂ.6.14 ಲಕ್ಷ ಹಾಗೂ ಗರಿಷ್ಠ ರೂ.11.76 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಹೊಂದಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ ಹಾಗೂ ಟೆಕ್ನಾ ಪ್ಲಸ್ ಸೇರಿದಂತೆ 6 ಆಕರ್ಷಕ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ. ಜೊತೆಗೆ ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕೂಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ಓನಿಕ್ಸ್ ಬ್ಲ್ಯಾಕ್ ಮತ್ತು ಪರ್ಲ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Nissan Magnite Suv Get Up To Rs 1 25 lakh Discount in June 2025 Details

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ಸರಿ ಸುಮಾರು 336 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. ಸಾಮಾನ್ಯ ಬೈಕ್‌ಗಳಂತೆ 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Nissan Magnite Suv Get Up To Rs 1 25 lakh Discount in June 2025 Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದ್ದು, ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ 4 ಕಲರ್ ಆಂಬಿಯೆಂಟ್ ಲೈಟಿಂಗ್ ಮತ್ತು ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್‍ನ್ನು ಪಡೆದಿದೆ.

ಹೊಸ ಎಸ್‌ಯುವಿಯು ಪ್ರಯಾಣಿಕರಿಗೆ ಗರಿಷ್ಠ ಮಟ್ಟದ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಇದೇ ಕಾರಿಗೆ ದೇಶೀಯ ಮಾರುಕಟ್ಟೆಯಲ್ಲಿ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಮಾರುತಿ ಸುಜುಕಿ ಬ್ರೆಝಾ, ಟಾಟಾ ನೆಕ್ಸಾನ್, ಕಿಯಾ ಸೋನೆಟ್, ರೆನಾಲ್ಟ್ ಕಿಗರ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಮತ್ತು ಮಾರುತಿ ಸುಜುಕಿ ಫ್ರಾಂಕ್ಸ್‌ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

More from DriveSpark

Article Published On: Friday, June 13, 2025, 8:30 [IST]
English summary
Nissan magnite suv get up to rs 1 25 lakh discount in june 2025 details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+