Nissan: 20 ಕಿ.ಮೀ ಮೈಲೇಜ್.. ಬರೀ 5.62 ಲಕ್ಷ, ಈ ಜನಪ್ರಿಯ ಕಾರಿಗೆ ಭಾರೀ ರಿಯಾಯಿತಿ ಘೋಷಣೆ!
ನಿಸ್ಸಾನ್ ಮೋಟಾರ್ ಇಂಡಿಯಾ (Nissan Motor India), ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ 'ಮ್ಯಾಗ್ನೈಟ್' ಎಸ್‌ಯುವಿಯನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಇದು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಇದೇ ಕಾರಿಗೆ ಕರ್ನಾಟಕವು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ದೊಡ್ಡ ಮಟ್ಟದಲ್ಲಿ ಹಣಕಾಸಿನ ಪ್ರಯೋಜನಗಳನ್ನು ಘೋಷಣೆ ಮಾಡಲಾಗಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಈ ಡಿಸೆಂಬರ್ ತಿಂಗಳು ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿಯು ರೂಪಾಂತರಗಳನ್ನು ಅವಲಂಭಿಸಿ, ರೂ.50,000 ದಿಂದ ರೂ.1.36 ಲಕ್ಷವರೆಗೆ ರಿಯಾಯಿತಿ ಹೊಂದಿದೆ. ಇದರಲ್ಲಿ ನಗದು ಪ್ರಯೋಜನ, ವಿನಿಮಯ ಹಾಗೂ ಕಾರ್ಪೊರೇಟ್ ಬೋನಸ್‌ಗಳು ಸೇರಿವೆ.

'ನಿಸ್ಸಾನ್ ಮ್ಯಾಗ್ನೈಟ್' ವಿಶೇಷತೆಗಳೇನು:
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದೆ. ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್ ಕನೆಕ್ಟಾ, ಟೆಕ್ನಾ ಹಾಗೂ ಟೆಕ್ನಾ ಪ್ಲಸ್ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಿದೆ.
ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಓನಿಕ್ಸ್ ಬ್ಲ್ಯಾಕ್, ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕಾಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ವಿವಿಡ್ ಬ್ಲೂ ಹಾಗೂ ಮೆಟಾಲಿಕ್ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 205 ಮಿ.ಮೀ ಗ್ರೌಂಡ್ ಕಿಯರೆನ್ಸ್ & 2,500 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ನಿಸ್ಸಾನ್ ಮ್ಯಾಗ್ನೈಟ್' 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿಗಳಲ್ಲಿ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು 336 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಇದು ಸಾಕಷ್ಟು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 17 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 16 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಅತ್ಯಾಕರ್ಷಕವಾದ ಡ್ಯಾಶ್‌ಬೋರ್ಡ್‌ನ್ನು ಒಳಗೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೋಲ್ಡ್ ಗ್ಲೋವ್ ಬಾಕ್ಸ್, ಕ್ರೂಸ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ರೇರ್ ಎಸಿ ವೆಂಟ್‌ಗಳು, ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ ಹಾಗೂ ಯುಎಸ್‌ಬಿ ಚಾರ್ಜರ್‌ನಂತಹ ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ 'ಮ್ಯಾಗ್ನೈಟ್' ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.


Click it and Unblock the Notifications








