ಹಬ್ಬಕ್ಕೆ ಕನ್ನಡಿಗರಿಗೆ ಸಿಹಿಸುದ್ದಿ.. 20 Km ಮೈಲೇಜ್, 96,000 ಡಿಸ್ಕೌಂಟ್.. ಈ ನಿಸ್ಸಾನ್ ಕಾರು 5.62 ಲಕ್ಷಕ್ಕೆ ಲಭ್ಯ!

ನಿಸ್ಸಾನ್ ಮೋಟಾರ್ ಇಂಡಿಯಾ (Nissan Motor India), ಕರ್ನಾಟಕದ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಈ ಅಕ್ಟೋಬರ್ ತಿಂಗಳು, ಗೇಮ್ ಚೇಂಜರ್ ಎಸ್‌ಯುವಿ ಎಂದೇ ಹೆಸರುವಾಸಿಯಾಗಿರುವ 'ಮ್ಯಾಗ್ನೈಟ್' ಖರೀದಿ ಮೇಲೆ ದೊಡ್ಡ ಮಟ್ಟದಲ್ಲಿ ಹಣಕಾಸಿನ ಪ್ರಯೋಜನಗಳನ್ನು ಘೋಷಿಸಿದೆ. ಬನ್ನಿ, ಈ ಕಾರಿಗೆ ಎಷ್ಟು ರಿಯಾಯಿತಿ ಇದೆ.. ಜೊತೆಗೆ ಎಕ್ಸ್-ಶೋರೂಂ ದರವೆಷ್ಟು ಎಂಬುದರ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.

ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿಯು ರೂಪಾಂತರಗಳನ್ನು ಅವಲಂಭಿಸಿ, ಒಟ್ಟು ರೂ.30,000 ರಿಂದ ರೂ.96,000 ವರೆಗೆ ಹಣಕಾಸಿನ ಪ್ರಯೋಜನಗಳನ್ನು ಪಡೆದಿದೆ. ಇದರಲ್ಲಿ ದೀಪಾವಳಿ ನಗದು ರಿಯಾಯಿತಿ, ವಿನಿಮಯ ಬೋನಸ್ ಹಾಗೂ ಕಾರ್ಪೊರೇಟ್ ರಿಯಾಯಿತಿಗಳು ಕೂಡ ಸೇರಿವೆ.

Nissan Magnite Suv Get Upto Rs 96 000 Discount In October 2025 Karnataka Details

'ನಿಸ್ಸಾನ್ ಮ್ಯಾಗ್ನೈಟ್' ವಿಶೇಷತೆಗಳೇನು:

ಇದೊಂದು ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.5.62 ಲಕ್ಷ ಹಾಗೂ ಗರಿಷ್ಠ ರೂ.10.76 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದ್ದು, ಎಲ್ಲ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಬಹುದು. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್ ಕನೆಕ್ಟಾ, ಟೆಕ್ನಾ & ಟೆಕ್ನಾ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 16 ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕಾಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್, ವಿವಿಡ್ ಬ್ಲೂ & ಮೆಟಾಲಿಕ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Nissan Magnite Suv Get Upto Rs 96 000 Discount In October 2025 Karnataka Details

ನೂತನ 'ಮ್ಯಾಗ್ನೈಟ್' ಕೊಂಚ ಮಟ್ಟಿಗೆ ದೊಡ್ಡ ಗಾತ್ರದಲ್ಲಿದೆ. 3,994 ಮಿ.ಮೀ ಉದ್ದ, 1,758 ಮಿ.ಮೀ ಅಗಲ ಹಾಗೂ 1,572 ಮಿ.ಮೀ ಎತ್ತರವಿದೆ. ಜೊತೆಗಿದು 205 ಎಂಎಂ ಗ್ರೌಂಡ್ ಕಿಯರೆನ್ಸ್ ಮತ್ತು 2,500 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1103 ಕೆಜಿ ತೂಕವಿದೆ.

ಇದು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್ & 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 19.4 ರಿಂದ 19.7 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.

Nissan Magnite Suv Get Upto Rs 96 000 Discount In October 2025 Karnataka Details

ಮತ್ತೊಂದು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.9 ರಿಂದ 19.9 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿಗೆ ಸಿಎನ್‌ಜಿ ಕಿಟ್‌ನ್ನು ಅಳವಡಿಸಬಹುದು. 40 ಲೀ.ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ.

ಹೊಸ 'ಮ್ಯಾಗ್ನೈಟ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 336 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಅದೇ ರೀತಿಯಲ್ಲಿ 16 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

More from DriveSpark

Article Published On: Thursday, October 16, 2025, 13:22 [IST]
English summary
Nissan magnite suv get upto rs 96000 discount in october 2025 karnataka details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+