20 Km ಮೈಲೇಜ್.. 6 ಲಕ್ಷ, 5-ಸೀಟರ್.. ಕಂಪನಿಯೇ ಊಹಿಸಿರಲಿಲ್ಲ, ಗಾಬರಿ ಹುಟ್ಟಿಸುವ ಸಂಖ್ಯೆಯಲ್ಲಿ ಈ ಕಾರಿನ ಬುಕ್ಕಿಂಗ್!
ನಿಸ್ಸಾನ್ ಮೋಟಾರ್ ಇಂಡಿಯಾ (Nissan Motor India) ಜನಪ್ರಿಯ ಕಾರು ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ (Magnite) ಮತ್ತು ಎಕ್ಸ್-ಟ್ರಯಲ್ (X-Trail) ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದೆ. ಅದರಲ್ಲೂ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ 'ಮ್ಯಾಗ್ನೈಟ್' ಗರಿಷ್ಠ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. 7 ಆಸನ ವ್ಯವಸ್ಥೆಯನ್ನು ಪಡೆದಿರುವ 'ಎಕ್ಸ್-ಟ್ರಯಲ್'ನ್ನು ಬೆರಳೆಣಿಕೆ ಸಂಖ್ಯೆಯ ಗ್ರಾಹಕರು ಮಾತ್ರ ಖರೀದಿ ಮಾಡುತ್ತಿದ್ದಾರೆ.
2024ರ ಅಕ್ಟೋಬರ್‌ನಲ್ಲಿ ಒಂದಷ್ಟು ನವೀಕರಣದೊಂದಿಗೆ ಹೊಚ್ಚ ಹೊಸ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಸದ್ಯ ಈ ಕಾರಿನ ಬುಕ್ಕಿಂಗ್‌ನಲ್ಲಿ ನೂತನ ಇತಿಹಾಸವೊಂದನ್ನು ಬರೆಯಲಾಗಿದೆ. ಅತಿ ಕಡಿಮೆ ಅವಧಿಯಲ್ಲಿ ಸರಿ ಸಮಾರು 10,000ಕ್ಕೂ ಅಧಿಕ ಗ್ರಾಹಕರು ಮ್ಯಾಗ್ನೈಟ್ ಎಸ್‌ಯುವಿಗಳನ್ನು ಆರ್ಡರ್ ಮಾಡಿದ್ದಾರೆ.

ಕಳೆದ ತಿಂಗಳು (ಡಿಸೆಂಬರ್) ನಿಸ್ಸಾನ್ ಮೋಟಾರ್, ಒಟ್ಟು (ದೇಶೀಯ - ವಿದೇಶಕ್ಕೆ ರಫ್ತು) 11,676 ಯುನಿಟ್ ಕಾರುಗಳನ್ನು ಮಾರಾಟಗೊಳಿಸಿದೆ. ಇದು ಕಂಪನಿಯ ಕಾರುಗಳ ಜನಪ್ರಿಯತೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಸಂಖ್ಯೆಯಲ್ಲಿ 9,558 ಯುನಿಟ್‌ಗಳನ್ನು ವಿದೇಶಗಳಿಗೆ ರಫ್ತು ಮಾಡಿದ್ದರೆ, ಬರೋಬ್ಬರಿ 2,118 ಯುನಿಟ್‌ಗಳನ್ನು ಭಾರತದಲ್ಲಿ ಮಾರಾಟಗೊಳಿಸಲಾಗಿದೆ. ಇದು ಮಾತ್ರವಲ್ಲದೆ, ಜನವರಿಯಿಂದ ಡಿಸೆಂಬರ್-2024ರ ಅವಧಿಯಲ್ಲಿ 91,184 ಯುನಿಟ್ ಕಾರುಗಳನ್ನು ಮಾರಲಾಗಿದೆ.
ನಿಸ್ಸಾನ್ ಕಂಪನಿಯು ಈ ಪರಿಪ್ರಮಾಣದಲ್ಲಿ ಯಶಸ್ಸು ಸಾಧಿಸಲು ಮ್ಯಾಗ್ನೈಟ್ ಎಸ್‌ಯುವಿ ಬಹುಮುಖ್ಯ ಕಾರಣವಾಗಿದೆ. ಇದು ರೂ.5.99 ಲಕ್ಷದಿಂದ ರೂ.11.50 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ & ಎನ್-ಕನೆಕ್ಟಾ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಪಡೆದಿದೆ. ಜೊತೆಗೆ ಬ್ಲೇಡ್ ಸಿಲ್ವರ್, ಓನಿಕ್ಸ್ ಬ್ಲ್ಯಾಕ್, ಪರ್ಲ್ ವೈಟ್ ಮತ್ತು ಫ್ಲೇರ್ ಗಾರ್ನೆಟ್ ರೆಡ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಈ ನಿಸ್ಸಾನ್ ಮ್ಯಾಗ್ನೈಟ್ ಕಾರು, 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17 ರಿಂದ 20 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.
ನೂತನ ಮ್ಯಾಗ್ನೈಟ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್, 4-ಕಲರ್ ಆಂಬಿಯೆಂಟ್ ಲೈಟಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಆಟೋ ಡಿಮ್ಮಿಂಗ್ ಐಆರ್‌ವಿಎಂ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. ನೂತನ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಗೆ ಟಾಟಾ ನೆಕ್ಸಾನ್ ಮತ್ತು ಮಾರುತಿ ಬ್ರೆಝಾ ಮಾಡೆಲ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








