20 ಕಿ.ಮೀ ಮೈಲೇಜ್.. 5-ಸೀಟರ್, 6 ಲಕ್ಷದ ಈ ಪ್ರಮುಖ ಕಾರಿಗೆ 90,000 ರಿಯಾಯಿತಿ ಘೋಷಣೆ!

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರನ್ನು ಕೆಲವು ನವೀಕರಣಗಳಿಗೆ ಒಳಪಡಿಸಿ, 2024ರ ಅಕ್ಟೋಬರ್‌ನಲ್ಲಿ ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. ಇದು ಸಾಕಷ್ಟು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಕೊಂಡುಕೊಳ್ಳುತ್ತಾರೆ. ಈ ಮೇ ತಿಂಗಳು ಇದೇ 'ಮ್ಯಾಗ್ನೈಟ್' ಎಸ್‌ಯುವಿ ಖರೀದಿ ಮೇಲೆ ದೊಡ್ಡ ಮಟ್ಟದಲ್ಲಿ ರಿಯಾಯಿತಿ ಘೋಷಣೆ ಮಾಡಲಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ದೇಶಾದ್ಯಂತ ನಿಸ್ಸಾನ್ ಮ್ಯಾಗ್ನೈಟ್ ಕಾರಿನ 2024ರ ಮಾಡೆಲ್‌ಗಳಿಗೆ ಭಾರೀ ಹಣಕಾಸಿನ ಪ್ರಯೋಜನ ನೀಡಲಾಗಿದೆ. ಕನಿಷ್ಠ ರೂ.25,000 ಹಾಗೂ ಗರಿಷ್ಠ ರೂ.90,000 ವರೆಗೆ ರಿಯಾಯಿತಿ ಪಡೆದಿವೆ. ಅದೇ ರೀತಿಯಲ್ಲಿ 2025ರ ಮಾಡೆಲ್‌ಗಳು ಸ್ವಲ್ಪ ಮಟ್ಟಿಗೆ ಕಡಿಮೆ ಹಣಕಾಸಿನ ಪ್ರಯೋಜನ ಒಳಗೊಂಡಿದ್ದು, ರೂ.25,000 ರಿಂದ 50,000 ವರೆಗೆ ರಿಯಾಯಿತಿ ಹೊಂದಿವೆ.

Nissan Magnite Suv Have Up to Rs 90 000 Discount In May 2025 Details

ಈ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಳುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಕಂಪನಿಯು ಮಾಸಿಕ ಸರಾಸರಿ 2,000 ಯುನಿಟ್‌ಗಳನ್ನು ಮಾರಾಟ ಮಾಡುತ್ತಿದೆ. ಮಾರ್ಚ್‌ನಲ್ಲಿ 2,484 ಯುನಿಟ್, ಫೆಬ್ರವರಿಯಲ್ಲಿ 2,328 ಯುನಿಟ್ ಹಾಗೂ ಜನವರಿ ತಿಂಗಳಲ್ಲಿ 2,404 ಯುನಿಟ್‌ಗಳನ್ನು ಮಾರಲಾಗಿತ್ತು.

ನಿಸ್ಸಾನ್ ಕಂಪನಿಯು 'ಮ್ಯಾಗ್ನೈಟ್' ಕಾರಿನ ಮಾರಾಟದಲ್ಲಿ ಸ್ಥಿರತೆ ಸಾಧಿಸಲು ಹಲವು ಕಾರಣಗಳಿವೆ. ಈ ಕಾರು ಬಜೆಟ್ ಬೆಲೆಯಲ್ಲಿ ಲಭ್ಯವಾಗಲಿದ್ದು, ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಇದು ಪೆಟ್ರೋಲ್ ಕಾರಾಗಿದ್ದರೂ ಗರಿಷ್ಠ ಮೈಲೇಜ್ ನೀಡುವ ಹಿನ್ನೆಲೆ, ನಿರ್ವಹಣಾ ವೆಚ್ಚ ಅಷ್ಟೇನು ಜಾಸ್ತಿಯಿಲ್ಲ. ಹೀಗಾಗಿ, ಈ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ಭರ್ಜರಿಯಾಗಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

Nissan Magnite Suv Have Up to Rs 90 000 Discount In May 2025 Details

ನಿಸ್ಸಾನ್ ಮ್ಯಾಗ್ನೈಟ್ ಕಾರಿನ ವಿಶೇಷತೆಗಳೇನು..

ಈ ಕಾರು ತುಂಬಾ ಕೈಗೆಟುಕುವ ಬೆಲೆಯಲ್ಲಿ ದೇಶೀಯ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ರೂ.6 ಲಕ್ಷದಿಂದ ರೂ.12 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಪ್ರವಾಸಕ್ಕೆ ದೂರದ ಊರುಗಳಿಗೆ ತೆರಳುವಾಗ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 336 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ ಬೆಲೆಗೆ ತಕ್ಕಂತೆ ಹೆಚ್ಚು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರು ಹೊರಭಾಗದಲ್ಲಿ ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದ್ದು, ಓನಿಕ್ಸ್ ಬ್ಲ್ಯಾಕ್, ಪರ್ಲ್ ವೈಟ್ & ಫ್ಲೇರ್ ಗಾರ್ನೆಟ್ ರೆಡ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Nissan Magnite Suv Have Up to Rs 90 000 Discount In May 2025 Details

ಹೊಸ ಮ್ಯಾಗ್ನೈಟ್ ಕಾರು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋಮೆಟಿಕ್ ಕ್ಲೈಮೇಟ್ ಕಂಟ್ರೋಲ್‌ನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Take a Poll

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, May 8, 2025, 16:43 [IST]
English summary
Nissan magnite suv have up to rs 90000 discount in may 2025 details
Read more on nissan india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+