ಲಕ್ಷುರಿ ಫೀಚರ್ಸ್.. 5-ಸೀಟರ್.. ಸದ್ದಿಲ್ಲದೇ ಹೊಸ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಬೆಲೆ ಏರಿಕೆ!
ನಿಸ್ಸಾನ್ ಮೋಟಾರ್ ಇಂಡಿಯಾ (Nissan Motor India) ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ 'ಮ್ಯಾಗ್ನೈಟ್' ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ ನಿಸ್ಸಾನ್ ಮೋಟಾರ್, ಹೊಚ್ಚ ಹೊಸ ಮ್ಯಾಗ್ನೈಟ್ ಎಸ್‌ಯುವಿ ಬೆಲೆಯನ್ನು ಏರಿಕೆ ಮಾಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ನೂತನ ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿ ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ ಮತ್ತು ಎನ್-ಕನೆಕ್ಟಾ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಖರೀದಿದಾರರಿಗೆ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ ರೂ.22,000 ವರೆಗೆ ದರ ಹೆಚ್ಚಳವನ್ನು ಮಾಡಲಾಗಿದೆ. ಇದರೊಂದಿಗೆ ರೂ.5.99 ಲಕ್ಷವಿದ್ದ ಮ್ಯಾಗ್ನೈಟ್ ಎಸ್‌ಯುವಿಯ ಆರಂಭಿಕ ಬೆಲೆ ರೂ.6.12 ಲಕ್ಷಕ್ಕೆ (ಎಕ್ಸ್-ಶೋರೂಂ) ಏರಿಕೆಯಾಗಿದೆ.

ಹೊಸ ನಿಸ್ಸಾನ್ ಮ್ಯಾಗ್ನೈಟ್ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ - ಹೆಡ್‌ಲ್ಯಾಂಪ್‌ಗಳು, ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಕಾಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್ ಮತ್ತು ಬ್ಲೇಡ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಜೆಯಲ್ಲಿಯೂ ಸಿಗುತ್ತದೆ.
ಈ ಕಾರು, ವಿಶಾಲವಾಗಿರುವ 5 - ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಯಸಬಹುದು. ಜೊತೆಗೆ ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 336 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಈ ಎಸ್‌ಯುವಿ ಎರಡು ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಇದು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ತಕ್ಕಂತೆ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಮತ್ತು ಸಿವಿಟಿ ಗೇರ್‌ಬಾಕ್ಸ್ ಆಯ್ಕೆಯನ್ನು ಪಡೆದಿದೆ. 17 ರಿಂದ 20 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ.
ಹೊಸ ನಿಸ್ಸಾನ್ ಮ್ಯಾಗ್ನೈಟ್ ಕಾರು ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು 4-ಕಲರ್ ಆಂಬಿಯೆಂಟ್ ಲೈಟಿಂಗ್ ಅನ್ನು ಪಡೆದಿದೆ.

ನೂತನ ಮ್ಯಾಗ್ನೈಟ್ ಎಸ್‌ಯುವಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಆಟೋ ಡಿಮ್ಮಿಂಗ್ ಐಆರ್‌ವಿಎಂ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








