Nissan: 2 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ.. ಮೊದಲಿಗೆ ಬರಲಿದೆ 7-ಸೀಟರ್‌ನ ಎಂಪಿವಿ, 10 ಲಕ್ಷಕ್ಕಿಂತ ಕಡಿಮೆ ಬೆಲೆ?
ಜಪಾನ್ ಮೂಲದ ನಿಸ್ಸಾನ್ (Nissan) ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿದೆ. ಭಾರತವು ಸೇರಿದಂತೆ ಹಲವು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ನಾನಾ ಬಗೆಯ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಸದ್ಯ, ದೇಶೀಯವಾಗಿ ಎರಡು ಹೊಚ್ಚ ಹೊಸ ಕಾರುಗಳನ್ನು ಮಾರಾಟಕ್ಕೆ ತರಲು ಸಿದ್ಧತೆಯನ್ನು ನಡೆಸುತ್ತಿದೆ. ಅದನ್ನು ನೂತನ ಕಾರುಗಳ ಕುರಿತಂತೆ ಟೀಸರ್ ಬಿಡುಗಡೆಗೊಳಿಸುವ ಮೂಲಕ ಖಚಿತಪಡಿಸಿದೆ. ಎಲ್ಲವು ಅಂದುಕೊಂಡರೆ ನಡೆದರೆ, ಅತಿ ಶೀಘ್ರದಲ್ಲಿ ಈ ಹೊಸ ನಿಸ್ಸಾನ್ ಕಾರುಗಳು ಗ್ರಾಹಕರ ಖರೀದಿಗೂ ಲಭ್ಯವಾಗಲಿವೆ.
ನಿಸ್ಸಾನ್ ಕಂಪನಿಯು 2025ರ ಹಣಕಾಸು ವರ್ಷದ ಅಂತ್ಯದೊಳಗೆ ನೂತನ ಮೂರು ಸಾಲಿನ 7-ಆಸನಗಳ ಎಂಪಿವಿಯನ್ನು ಬಿಡುಗಡೆಗೊಳಿಸಲು ನಿರ್ಧರಿಸಿದೆ. ಇದು ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ 'ರೆನಾಲ್ಟ್ ಟ್ರೈಬರ್' ಎಂಪಿವಿಗೆ ಹೋಲಿಕೆಯಾಗಲಿದ್ದು, ಆದರೂ ವಿನ್ಯಾಸ ಹಾಗೂ ವೈಶಿಷ್ಟ್ಯಗಳಲ್ಲಿ ಒಂದಷ್ಟು ಬದಲಾವಣೆಗಳನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ. ಪ್ರಸ್ತುತ ರೆನಾಲ್ಟ್ & ನಿಸ್ಸಾನ್ ಕಂಪನಿಗಳು ಜಾಗತಿಕವಾಗಿ ವ್ಯಾಪಾರ ಪಾಲುದಾರಿಕೆಯನ್ನು ಹೊಂದಿವೆ.

ಹೊಸ 7-ಆಸನಗಳ ಎಂಪಿವಿಯನ್ನು ಮಾರಾಟಕ್ಕೆ ತಂದ ಮೇಲೆ 5 ಆಸನ ಆಯ್ಕೆ ವ್ಯವಸ್ಥೆಯೊಂದಿರುವ ಕಾಂಪ್ಯಾಕ್ಟ್ ಎಸ್‌ಯುವಿಯನ್ನು ಕಂಪನಿಯು ಬಿಡುಗಡೆಗೊಳಿಸಲಿದೆ. ಇದು 2026ರ ಹಣಕಾಸು ವರ್ಷದಲ್ಲಿ ಮಾರಾಟಕ್ಕೆ ಬರಲಿದೆ. ಈ ಕಾರಿಗೆ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಕಿಯಾ ಸೆಲ್ಟೋಸ್, ಹೋಂಡಾ ಎಲಿವೇಟ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್, ಎಂಜಿ ಆಸ್ಟರ್, ಪೋಕ್ಸ್‌ವ್ಯಾಗನ್ ಟೈಗನ್ ಹಾಗೂ ಸ್ಕೋಡಾ ಕುಶಾಕ್ ಎಸ್‌ಯುವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.
ದೇಶೀಯವಾಗಿ ನಿಸ್ಸಾನ್ ಕಂಪನಿಯ ಮ್ಯಾಗ್ನೈಟ್ ಹಾಗೂ ಎಕ್ಸ್-ಟ್ರಯಲ್ ಎಂಬ ಎರಡು ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಅದರಲ್ಲೂ ಮ್ಯಾಗ್ನೈಟ್ ಗೇಮ್ ಚೇಂಜರ್ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ರೂ.6.14 ಲಕ್ಷದಿಂದ ರೂ.11.76 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿದ್ದು, 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ಈ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ನಿಸ್ಸಾನ್ ಎಕ್ಸ್-ಟ್ರಯಲ್ (Nissan X-Trail) ಕಾರು ರೂ.49.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. 3-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ಇದರಲ್ಲಿ 7 ಜನರು ಓಡಾಟ ನಡೆಸಬಹುದು. 12.3-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಇನ್ನು, 5 ಆಸನಗಳ ಹೊಸ ಎಸ್‌ಯುವಿ ಬಗ್ಗೆ ಅಷ್ಟಾಗಿ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ. ಅದರ ಹೊರತಾಗಿ 7-ಆಸನಗಳ ನೂತನ ಎಂಪಿವಿ 'ರೆನಾಲ್ಟ್ ಟ್ರೈಬರ್' ಕಾರನ್ನು ಆಧರಿಸಿರುವುದರಿಂದ ಕೈಗೆಟುಕುವ ಬೆಲೆಯಲ್ಲಿ ಅಂದರೆ, 10 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಬಿಡುಗಡೆಯಾಗುವ ನೀರಿಕ್ಷೆಯಿದೆ. ಸದ್ಯವಿರುವ ಟ್ರೈಬರ್ ಎಂವಿಪಿ ರೂ.6 ಲಕ್ಷದಿಂದ ರೂ.8.97 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








