ಹೆದ್ದಾರಿ ಪ್ರಯಾಣಿಕರೆ ಗುಡ್ ನ್ಯೂಸ್: ವರ್ಷಕ್ಕೆ ರೂ. 3,000 ಸಾಕು... ಸಚಿವ ನಿತಿನ್ ಗಡ್ಕರಿ ಘೋಷಣೆ!

ತೊಂದರೆ-ಮುಕ್ತ ಹೆದ್ದಾರಿ ಪ್ರಯಾಣದತ್ತ ಪರಿವರ್ತಕ ಹೆಜ್ಜೆಯಾಗಿ, ನಾವು ರೂ. 3,000 ಬೆಲೆಯ ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿದ್ದೇವೆ. ಇದು ಆಗಸ್ಟ್ 15, 2025 ರಿಂದ ಜಾರಿಗೆ ಬರಲಿದೆ. ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷ ಅಥವಾ 200 ಟ್ರಿಪ್‌ಗಳವರೆಗೆ ಮಾನ್ಯವಾಗಿರುತ್ತದೆ. ಇವೆರಡರಲ್ಲಿ ಯಾವುದು ಮೊದಲು ಬರುತ್ತದೆಯೋ ಅದನ್ನು ಪರಿಗಣಿಸಲಾಗುವುದು. ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗಾಗಿ ಮಾತ್ರ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ.

ಟ್ವಿಟರ್ (X) ಮೂಲಕ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಅವರು, ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್, ಟೋಲ್ ಪ್ಲಾಜಾಗಳಲ್ಲಿ ಆಗಾಗ್ಗೆ ಪ್ರಯಾಣಿಕರು ಹಾಗೂ ಟೋಲ್ ಸಿಬ್ಬಂದಿಯ ನಡುವಿನ ಕಿರಿ ಹಾಗೂ ವಾಹನಗಳು ದೀರ್ಘ ಕಾಲ ಕಾಯುವ ಸಮಯವನ್ನು ಕಡಿಮೆ ಮಾಡಲಿದೆ. ಲಕ್ಷಾಂತರ ಖಾಸಗಿ ವಾಹನ ಮಾಲೀಕರಿಗೆ ವೇಗವಾದ ಮತ್ತು ಸುಗಮ ಪ್ರಯಾಣ ಅನುಭವವನ್ನು ನೀಡಲಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

nitin-gadkari-announces-new-fastag-based-annual-pass

ಸಚಿವ ನಿತಿನ್ ಗಡ್ಕರಿ ಟ್ವೀಟ್: ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಸುಗಮ ಹೆದ್ದಾರಿ ಅನುಭವಗಳಿಗಾಗಿ ಭಾರತದ ರಸ್ತೆ ಮೂಲಸೌಕರ್ಯವನ್ನು ಡಿಜಿಟಲೀಕರಣ ಮತ್ತು ಆಧುನೀಕರಿಸುವ ಸರ್ಕಾರದ ಪ್ರಯತ್ನದ ಭಾಗವಾಗಿದೆ. ಫಾಸ್ಟ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಕೇವಲ ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ ಎಂದು ಒತ್ತಿ ಹೇಳಿದ್ದಾರೆ.

ವಾರ್ಷಿಕ ಪಾಸ್ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸುಗಮ ಮತ್ತು ವೆಚ್ಚ - ಪರಿಣಾಮಕಾರಿ ಪ್ರಯಾಣಕ್ಕೆ ಅನುವು ಮಾಡಿಕೊಡಲಿದೆ. ಸಕ್ರಿಯಗೊಳಿಸುವಿಕೆ ಮತ್ತು ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ನೀತಿಯು 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಕಳವಳಗಳನ್ನು ಪರಿಹರಿಸುತ್ತದೆ. ಒಂದೇ, ಕೈಗೆಟುಕುವ ವಹಿವಾಟಿನ ಮೂಲಕ ಟೋಲ್ ಪಾವತಿಗಳನ್ನು ಸರಳಗೊಳಿಸುತ್ತದೆ. ಕಾಯುವ ಸಮಯವನ್ನು ಕಡಿಮೆ ಮಾಡುವ ಮೂಲಕ, ದಟ್ಟಣೆಯನ್ನು ಕಡಿಮೆ ಮಾಡಿ ಟೋಲ್ ಪ್ಲಾಜಾಗಳಲ್ಲಿ ವಿವಾದಗಳನ್ನು ಕಡಿಮೆ ಮಾಡಲಿದೆ.

ಲಕ್ಷಾಂತರ ಖಾಸಗಿ ವಾಹನ ಮಾಲೀಕರಿಗೆ ವೇಗವಾದ ಮತ್ತು ಸುಗಮ ಪ್ರಯಾಣದ ಅನುಭವವನ್ನು ನೀಡುವ ಗುರಿಯನ್ನು ವಾರ್ಷಿಕ ಪಾಸ್ ಹೊಂದಿದೆ. ಇದು 2025 ರ ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. ಸಕ್ರಿಯಗೊಳಿಸಿದ ದಿನಾಂಕದಿಂದ ಒಂದು ವರ್ಷದವರೆಗೆ ಅಥವಾ 200 ಟ್ರಿಪ್‌ಗಳವರೆಗೆ ಮಾನ್ಯವಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

nitin-gadkari-announces-new-fastag-based-annual-pass

ವಾರ್ಷಿಕ ಪಾಸ್ ಪಡೆಯುವುದು ಹೇಗೆ?: ಫಾಸ್ಟ್ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ರಾಜ್‌ಮಾರ್ಗ್ ಯಾತ್ರಾ ಮೊಬೈಲ್ ಅಪ್ಲಿಕೇಶನ್ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ) ಅಥವಾ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (ಎಂಒಆರ್‌ಟಿಎಚ್) ಅಧಿಕೃತ ವೆಬ್‌ಸೈಟ್‌ಗಳ ಮೂಲಕ ಪಡೆಯಬಹುದು. ಇದರ ಲಿಂಕ್ ಆಗಸ್ಟ್ 15, 2025 ರ ಮುಂಚಿತವಾಗಿ ಅಸ್ಥಿತ್ವಕ್ಕೆ ಬರಬಹುದು ಎನ್ನಲಾಗಿದೆ.

ಒಟ್ಟಾರೆ ಈ ಉಪಕ್ರಮವು ಟೋಲ್ ಬೂತ್‌ಗಳಲ್ಲಿ ಕಾಯುವ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡಿ, ಶುಲ್ಕಗಳ ಮೇಲಿನ ವಿವಾದಗಳನ್ನು ತೊಡೆದುಹಾಕಲಿದೆ. ದಟ್ಟಣೆಯನ್ನು ಸರಾಗಗೊಳಿಸುವುದರ ಜೊತೆಗೆ ದೇಶಾದ್ಯಂತ ಖಾಸಗಿ ವಾಹನ ಚಾಲಕರಿಗೆ ಸುಗಮ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣದ ಅನುಭವವನ್ನು ನೀಡುತ್ತದೆ. ಈ ಹೊಸ ಉಪಕ್ರಮದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಮೆಂಟ್‌ನಲ್ಲಿ ತಿಳಿಸಿ.

Article Published On: Wednesday, June 18, 2025, 14:42 [IST]
English summary
Nitin gadkari announces new fastag based annual pass
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+