ಓಲಾ, ಉಬರ್‌ಗೆ ಶಾಕ್: ಶೀಘ್ರದಲ್ಲೇ ಪ್ರಧಾನಿ ಮೋದಿ ಸರ್ಕಾರದಿಂದ 'ಸಹಕಾರ್ ಟ್ಯಾಕ್ಸಿ' ಸೇವೆ ಶುರು.. ಲಾಭವೋ ಲಾಭ!

ಓಲಾ, ಉಬರ್ ಓಟಕ್ಕೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಶೀಘ್ರದಲ್ಲೇ 'ಸಹಕಾರ್ ಟ್ಯಾಕ್ಸಿ' ಹೆಸರಿನ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆಯನ್ನು ಪ್ರಾರಂಭ ಮಾಡಲಿದೆ. ಈ ಮೂಲಕ ಪ್ರಯಾಣಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಬೈಕ್, ಕ್ಯಾಬ್ ಹಾಗೂ ಆಟೋ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದರಿಂದ ಚಾಲಕರು ಹಾಗೂ ಪ್ರಯಾಣಿಕರಿಗೆ ದೊಡ್ಡ ಮಟ್ಟದ ಲಾಭವಾಗುವ ನಿರೀಕ್ಷೆಯಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ

ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು, ಬುಧವಾರ ಸಂಸತ್ತಿನಲ್ಲಿ ಸಹಕಾರ್ ಟ್ಯಾಕ್ಸಿ (Sahkar Taxi) ಸೇವೆ ಆರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ. ಈ ಯೋಜನೆಯಿಂದ ಟ್ಯಾಕ್ಸಿ ಸೇವೆ ಒದಗಿಸುವ ದ್ವಿಚಕ್ರ ವಾಹನ ಸವಾರರು, ಆಟೋ ಚಾಲಕರು ಮತ್ತು ಕ್ಯಾಬ್ ಚಾಲಕರು ಹೆಚ್ಚಿನ ಪ್ರಯೋಜನವನ್ನು ಪಡೆಯಬಹುದು. ಲಾಭಾಂಶವು ಕೂಡ ನೇರವಾಗಿ ಚಾಲಕರಿಗೆ ಹೋಗುತ್ತದೆ ಎಂದು ಹೇಳಿದ್ದಾರೆ.

Ola Uber Rival Government Launch Sahkar Taxi Service Soon Details

ಸಾಮಾನ್ಯ ಚಾಲಕರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು. ಜೊತೆಗೆ ಪ್ರಯಾಣಿಕರಿಗೆ ಕೈಗೆಟುಕುವ ಹಾಗೂ ವಿಶ್ವಾಸಾರ್ಹ ಸೇವೆ ಒದಗಿಸುವುದು ಈ ಸಹಕಾರ್ ಟ್ಯಾಕ್ಸಿಯ ಬಹುಮುಖ್ಯ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ. ಈ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ಯಾವಾಗಿನಿಂದ ಶುರುವಾಗುತ್ತದೆ ಎಂಬುದರ ಕುರಿತಂತೆ ಕೇಂದ್ರ ಸರ್ಕಾರದಿಂದ ಅಧಿಕೃತ ವಿವರಗಳು ಲಭ್ಯವಾಗಿಲ್ಲ. ಆದರೆ ಮುಂಬರುವ ತಿಂಗಳಲ್ಲಿ ಸಹಕಾರ್ ಟ್ಯಾಕ್ಸಿ ಸೇವೆ ಪ್ರಾರಂಭವಾಗಲಿದೆ ಎಂದು ಅಮಿತ್ ಶಾ ಅವರು ತಿಳಿಸಿದ್ದಾರೆ.

ಓಲಾ ಹಾಗೂ ಉಬರ್‌ನಂತಹ ಪ್ಲಾಟ್‌ಫಾರ್ಮ್‌ಗಳಲ್ಲಿ ಟ್ಯಾಕ್ಸಿ ಸೇವೆ ಒದಗಿಸುವ ಚಾಲಕರು, ತಾವು ಗಳಿಸಿದ ಬಾಡಿಗೆಯ ಒಂದಷ್ಟು ಹಣವನ್ನು ಕಮಿಷನ್ ರೂಪದಲ್ಲಿ ಪಾವತಿಸಬೇಕಾಗಿದೆ. ಇದು ಅವರ ಒಟ್ಟಾರೆ ಆದಾಯವನ್ನು ಕಡಿಮೆಗೊಳಿಸುತ್ತದೆ. ಆದರೆ ಸಹಕಾರ್ ಟ್ಯಾಕ್ಸಿಯಲ್ಲಿ ಸಂಪೂರ್ಣ ಹಣವನ್ನು ಚಾಲಕರಿಗೆ ನೀಡಲು ಉದ್ದೇಶಿಸಲಾಗಿದೆ. ಇದರಿಂದ ಟ್ಯಾಕ್ಸಿ ಸೇವೆ ನೀಡುವ ಖಾಸಗಿ ಕಂಪನಿಗಳು ಭಾರೀ ಸ್ಪರ್ಧೆಯನ್ನು ಎದುರಿಸಬೇಕಾಗಿ ಬರಬಹುದು.

Ola Uber Rival Government Launch Sahkar Taxi Service Soon Details

ಈಗಾಗಲೇ, ಪ.ಬಂಗಾಳ ರಾಜ್ಯದಲ್ಲಿ ಅಲ್ಲಿನ ಸರ್ಕಾರ 'ಯಾತ್ರಿ ಸಾಥಿ' ಹೆಸರಿನಲ್ಲಿ ಟ್ಯಾಕ್ಸಿ ಸೇವೆಯನ್ನು ಆರಂಭಿಸಿದೆ. ಈ ಮೂಲಕ ಕೋಲ್ಕತ್ತಾ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಕೈಗೆಟುಕುವ ದರದಲ್ಲಿ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿದೆ. 2022ರಲ್ಲಿಯೇ ಕೇರಳ ಸರ್ಕಾರ 'ಕೇರಳ ಸವಾರಿ' ಹೆಸರಿನ ಟ್ಯಾಕ್ಸಿ ಸೇವೆಯನ್ನು ಪ್ರಾರಂಭಿಸಿತ್ತು. ಆದರೆ, ನಾನಾ ಕಾರಣಗಳಿಗೆ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಪ್ರಾರಂಭಿಸಲು ಯೋಜಿಸಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ಟ್ಯಾಕ್ಸಿ ಮಾರುಕಟ್ಟೆಯು ದಿನದಿಂದ ದಿನಕ್ಕೆ ವೇಗವಾಗಿ ಬೆಳವಣಿಗೆಯಾಗುತ್ತಿದೆ. ಮೊರ್ಡರ್ ಇಂಟೆಲಿಜೆನ್ಸ್ ಪ್ರಕಾರ, ಈಗ 23.40 ಬಿಲಿಯನ್ ಡಾಲರ್ ಮಾರುಕಟ್ಟೆ ಪಾಲನ್ನು ಹೊಂದಿದೆ. ಅದು 2030ರಲ್ಲಿ 44.18 ಬಿಲಿಯನ್‌ ಡಾ‌ಲರ್‌ಗಳಿಗೆ ಮುಟ್ಟಲಿದೆ. ಈ ಕಾರಣಕ್ಕೆ ದೇಶದ ಟ್ಯಾಕ್ಸಿ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಮೆರೆಯಲು ಹಲವು ಕಂಪನಿಗಳು ಪ್ರಯತ್ನಿಸುತ್ತಿವೆ.

ಒಟ್ಟಾರೆಯಾಗಿ ಓಲಾ ಹಾಗೂ ಉಬರ್‌ನಂತಹ ಖಾಸಗಿ ಕಂಪನಿಗಳು ಟ್ಯಾಕ್ಸಿ ಸೇವೆ ಒದಗಿಸುವಲ್ಲಿ ಗರಿಷ್ಠ ಮಾರುಕಟ್ಟೆ ಪಾಲನ್ನು ಹೊಂದಿವೆ. 'ಸಹಕಾರ್ ಟ್ಯಾಕ್ಸಿ' ಹೆಸರಿನ ಆ್ಯಪ್‌ ಆಧಾರಿತ ಟ್ಯಾಕ್ಸಿಯನ್ನು ಕೇಂದ್ರ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದರೆ, ಚಾಲಕರು ಮಾತ್ರವಲ್ಲದೆ ಪ್ರಯಾಣಿಕರಿಗೂ ಹೆಚ್ಚಿನ ಅನುಕೂಲವಾಗುವುದರಲ್ಲಿ ಎರಡು ಮಾತಿಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, March 28, 2025, 11:02 [IST]
English summary
Ola uber rival government launch sahkar taxi service soon details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+