500+ Km ರೇಂಜ್! ಮಾರುತಿಯ ಮೊದಲ ಎಲೆಕ್ಟ್ರಿಕ್ ಕಾರಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ.. ಸೆ.3ಕ್ಕೆ ಬಿಡುಗಡೆ, ಬೆಲೆ ಎಷ್ಟು?

ನೂತನ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಬಿಡುಗಡೆಗಾಗಿ ಗ್ರಾಹಕರು ತುದಿಗಾಲಿನಲ್ಲಿ ಕಾಯುತ್ತಿದ್ದು, ದಿನಗಣನೆ ಶುರುವಾಗಿದೆ. ಇದೊಂದು ಎಲೆಕ್ಟ್ರಿಕ್ ಚಾಲಿತ ಎಸ್‌ಯುವಿಯಾಗಿದ್ದು, ಭಾರತವು ಒಳಗೊಂಡಂತೆ ವಿದೇಶಿ ಮಾರುಕಟ್ಟೆಯಲ್ಲಿ ಮಾರಾಟಗೊಳಿಸಲು ಕಂಪನಿಯು ಉದ್ದೇಶಿಸಿದೆ. ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೊತೆಗೆ ಸ್ಪರ್ಧಾತ್ಮಕ ಬೆಲೆಯಲ್ಲಿ ಕೂಡ ಪರಿಚಯಗೊಳ್ಳುವ ನಿರೀಕ್ಷೆಯಿದೆ.

ಸದ್ಯ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಗುಜರಾತ್ ಪ್ರವಾಸದಲ್ಲಿದ್ದಾರೆ. ಮಂಗಳವಾರ ಹಂಸಲ್‌ಪುರದ ಮಾರುತಿ ಸುಜುಕಿ ಉತ್ಪಾದನಾ ಘಟಕದಿಂದ ಹೊರತಂದಿರುವ ಪ್ರಪ್ರಥಮ 'ಇ-ವಿಟಾರಾ' ಎಲೆಕ್ಟ್ರಿಕ್ ಎಸ್‌ಯುವಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಇದೇ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ಜಪಾನ್ ರಾಯಭಾರಿ ಕೀಚಿ ಒನೊ ಅವರು ಸಹ ಹಾಜರಿದ್ದರು.

PM Narendra Modi Flag Off First Electric SUV Maruti Suzuki e Vitara Details

ಭಾರತದಲ್ಲಿ ತಯಾರಾಗುವ ಈ ಮಾರುತಿ ಇ-ವಿಟಾರಾ ಕಾರನ್ನು ಯುರೋಪ್ ಮತ್ತು ಜಪಾನ್‌ ಸೇರಿದಂತೆ 100 ಹೆಚ್ಚು ದೇಶಗಳಿಗೆ ರಫ್ತು ಮಾಡಲು ಕಂಪನಿಯು ತೀರ್ಮಾನಿಸಿದೆ ಎಂದು ವರದಿಯಾಗಿದೆ. ಇದು ದೇಶೀಯ ಆಟೋಮೊಬೈಲ್ ಉದ್ಯಮದಲ್ಲಿ ಮಹತ್ವದ ಬೆಳವಣಿಗೆಯಾಗಿದೆ ವಿಶ್ಲೇಷಣೆ ಮಾಡಲಾಗುತ್ತಿದೆ.

ಹೊಸ ಮಾರುತಿ ಸುಜುಕಿ ಇ-ವಿಟಾರಾ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಲೋಕಾರ್ಪಣೆಗೊಳಿಸಿದ ಬಳಿಕ, ಪ್ರಧಾನಿ ಮೋದಿ ಅವರು 'ಲಿಥಿಯಂ-ಐಯಾನ್ ಬ್ಯಾಟರಿ'ಯನ್ನು ಉತ್ಪಾದಿಸುವ ತಯಾರಿಕಾ ಘಟಕವನ್ನು ಉದ್ಘಾಟಿಸಿದರು. ಇದು ಹೈಬ್ರಿಡ್ ಹಾಗೂ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿ ಉತ್ಪಾದನೆಯಲ್ಲಿ ಮಹತ್ವದ ಪಾತ್ರವಹಿಸಬಲ್ಲದು.

PM Narendra Modi Flag Off First Electric SUV Maruti Suzuki e Vitara Details

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, 'ಭಾರತದ ಮೇಲೆ ಹಲವು ಕಂಪನಿಗಳು ಹೆಚ್ಚಿನ ವಿಶ್ವಾಸವನ್ನು ಹೊಂದಿವೆ. ಕೆಲವು ವರ್ಷಗಳ ಹಿಂದೆ ಎಲೆಕ್ಟ್ರಿಕ್ ವಾಹನಗಳಿಗಾಗಿ ಬ್ಯಾಟರಿಯನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಯಿತು. ಪ್ರಸ್ತುತ ಸ್ಥಳೀಯವಾಗಿ ಉತ್ಪಾದಿಸುವ ಬ್ಯಾಟರಿ ಸೆಲ್‌ಗ‌ಳು ಹಾಗೂ ಎಲೆಕ್ಟ್ರೋಡ್‌ಗಳಿಂದ ದೇಶೀಯ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಹೆಚ್ಚಿನ ಉತ್ತೇಜನ ದೊರೆಯಲಿದೆ' ಎಂದು ಹೇಳಿದ್ದಾರೆ.

ಮಾರುತಿ ಸುಜುಕಿ ಮಾತೃ ಸಂಸ್ಥೆಯಾಗಿರುವ 'ಸುಜುಕಿ ಮೋಟಾರ್ ಕಾರ್ಪೊರೇಷನ್' ವಿಶ್ವದ ಮೂರನೇ ಅತಿದೊಡ್ಡ ಕಾರು ಮಾರುಕಟ್ಟೆ ಹೊಂದಿರುವ ಭಾರತದಲ್ಲಿ ತನ್ನ ಪ್ರಾಬಲ್ಯವನ್ನು ಸಾಧಿಸಲು ಯೋಜಿಸಿದೆ. ಅದರ ಭಾಗವಾಗಿ ಮುಂದಿನ 5-6 ವರ್ಷಗಳಲ್ಲಿ ರೂ.70,000 ಕೋಟಿ ಹೂಡಿಕೆ ಮಾಡಲು ತೀರ್ಮಾನಿಸಿದೆ. ಈ ಮೂಲಕ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಹಣಿಯಾಗುತ್ತಿದೆ.

ಮಾರುತಿ ಸುಜುಕಿ ಇ-ವಿಟಾರಾ ವಿಶೇಷತೆಗಳೇನು:

ಈ ನೂತನ ಎಲೆಕ್ಟ್ರಿಕ್ ಎಸ್‌ಯುವಿಯನ್ನು ಸೆಪ್ಟೆಂಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗುತ್ತದೆ. ಕನಿಷ್ಠ ರೂ.17 ಲಕ್ಷ ಹಾಗೂ ಗರಿಷ್ಠ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿರುವ ನಿರೀಕ್ಷೆಯಿದೆ. ಇದೇ ಕಾರನ್ನು ಜನವರಿಯಲ್ಲಿ ಕೊನೆಗೊಂಡ 'ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ'ದಲ್ಲಿ ಪ್ರದರ್ಶಿಸಲಾಯಿತು. ಅಲ್ಲಿ ಬಹುತೇಕ ಎಲ್ಲ ವಿವರಗಳನ್ನು ಬಹಿರಂಗಪಡಿಸಲಾಯಿತು.

ಹೊಸ ಇ-ವಿಟಾರಾ ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಫಾಗ್ ಲೈಟ್‌ಗಳು, ಎಲ್ಇಡಿ ಟೈಲ್ ಲೈಟ್ ಹಾಗೂ ಅಲಾಯ್ ವೀಲ್‌ಗಳನ್ನು ಪಡೆದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಬ್ಲ್ಯೂಯಿಸ್ ಬ್ಲ್ಯಾಕ್ ಮತ್ತು ಒಪ್ಯುಲೆಂಟ್ ರೆಡ್ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯನ್ನು ಒಳಗೊಂಡಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದುಕೊಂಡಿರುವ ಎಲ್ಲ ಲಕ್ಷಣಗಳಿವೆ. 49 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 61 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಪೂರ್ತಿ ಚಾರ್ಜ್‌ನಲ್ಲಿ 500 ಕಿ.ಮೀ ವರೆಗೂ ರೇಂಜ್ (ಮೈಲೇಜ್) ನೀಡಬಲ್ಲದು ಹೇಳಲಾಗಿದೆ.

ಈ ಕಾರು 5 ಆಸನಗಳನ್ನು ಹೊಂದಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Tuesday, August 26, 2025, 13:48 [IST]
English summary
Pm narendra modi flag off first electric suv maruti suzuki e vitara details
Read more on maruti suzuki india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+