ಹೊಸ ಕಾರು ಖರೀದಿಸುತ್ತಿದ್ದೀರಾ? ಕಮ್ಮಿ ಬೆಲೆಯ ಮಾರುತಿ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಇದೆ ನೋಡಿ...
ಸ್ಟೈಲಿಷ್ ಲುಕ್, ಆಕರ್ಷಕ ಫೀಚರ್ಸ್, ಉತ್ತಮ ಎಂಜಿನ್ ಪರ್ಫಾಮೆನ್ಸ್ ಹಾಗೂ ಹೆಚ್ಚು ಮೈಲೇಜ್‌ಗೆ ಜನಪ್ರಿಯತೆ ಪಡೆದಿರುವ ಮಾರುತಿ ಸುಜುಕಿ ಬಲೆನೊ, ಸದ್ಯ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಹ್ಯಾಚ್‌ಬ್ಯಾಕ್ ಆಗಿದೆ. ಐದು ಜನರಿಗೆ ವಿಶಾಲವಾದ ಕ್ಯಾಬಿನ್ ಮತ್ತು ಉತ್ತಮ ನೋಟವನ್ನು ಹೊಂದಿರುವ ಬ್ರ್ಯಾಂಡ್‌ನ ಪ್ರೀಮಿಯಂ ಹ್ಯಾಚ್‌ಬ್ಯಾಕ್, ಮ್ಯಾನುವಲ್ ಮತ್ತು AMT ಗೇರ್‌ಬಾಕ್ಸ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಇದರ ಸಂಸ್ಕರಿಸಿದ 1.2-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ, ಇದನ್ನು CNG ಆಯ್ಕೆಯಲ್ಲೂ ಪಡೆಯಬಹುದು. ಈ ಕಾರು ಚಾಲನೆ ಮಾಡಲು ಸುಲಭ ಮತ್ತು ಹೆದ್ದಾರಿ ವೇಗದಲ್ಲಿ ಸ್ಥಿರವಾಗಿರುತ್ತದೆ.
ಕಾರಿನ ಬೇಸ್ ಮಾಡಲ್ ಬೆಲೆ ರೂ. 7.49 ಲಕ್ಷದಿಂದ ಪ್ರಾರಂಭವಾಗಿ ಟಾಪ್ ಮಾಡಲ್ ಬೆಲೆ ರೂ. 11.29 ಲಕ್ಷದವರೆಗೆ (ಬೆಂಗಳೂರು ಆನ್-ರೋಡ್) ಇದೆ. ಡೆಲ್ಟಾ ಮ್ಯಾನುವಲ್ ಸಿಎನ್‌ಜಿ ವೇರಿಯೆಂಟ್ ಶ್ರೇಣಿಯು ರೂ.9.58 ಲಕ್ಷದಿಂದ ಪ್ರಾರಂಭವಾಗುತ್ತದೆ. ಬಲೆನೊ ಸಿಎನ್‌ಜಿಯನ್ನು ಕೇವಲ ಮ್ಯಾನುವಲ್ ಟ್ರಾನ್ಸ್ ಮಿಷನ್ ಆಯ್ಕೆಯಲ್ಲಿ ಮಾತ್ರ ನೀಡಲಾಗುತ್ತದೆ.

ಮಾರುತಿ ಬಲೆನೊ 1 ಪೆಟ್ರೋಲ್ ಎಂಜಿನ್ ಮತ್ತು 1 ಸಿಎನ್‌ಜಿ ಎಂಜಿನ್ ಹೊಂದಿದೆ. ಇದು ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನೊಂದಿಗೆ ಲಭ್ಯವಿದೆ. ವೇರಿಯೆಂಟ್ ಮತ್ತು ಇಂಧನ ಪ್ರಕಾರವನ್ನು ಅವಲಂಬಿಸಿ ಬಲೆನೊ 22.35 ರಿಂದ 22.94 ಕಿ.ಮೀ ಮೈಲೇಜ್ ನೀಡುತ್ತದೆ. ಬಲೆನೊ 5 - ಸೀಟರ್ ಆಗಿದ್ದು, 3990 ಎಂಎಂ ಉದ್ದ, 1745 ಎಂಎಂ ಅಗಲ ಮತ್ತು 2520 ಎಂಎಂ ವೀಲ್‌ಬೇಸ್ ಹೊಂದಿದೆ.
ಇದರ 1.2 - ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್ 5 - ಸ್ಪೀಡ್ ಮ್ಯಾನುವಲ್/ 6 - ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಹೊಂದಿದೆ. 37 ಲೀ. ಫ್ಯುಯೆಲ್ ಟ್ಯಾಂಕ್ ನೀಡಲಾಗಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 12.1 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ತಲುಪುವ ಸಾಮರ್ಥ್ಯವನ್ನು ಹೊಂದಿದೆ.

ಬಲೆನೊದಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 318 ಲೀ.ನಷ್ಟು ಬೂಟ್ ಸ್ಪೇಸ್ ನೀಡಲಾಗಿದೆ. ಇಂಟೀರಿಯರ್‌ನಲ್ಲಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಪವರ್ ಸ್ಟೀರಿಂಗ್, ರೇರ್ ಎಸಿ ವೆಂಟ್‌ಗಳು & ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕೋಲ್ಡ್ ಗ್ಲೋವ್‌ಬಾಕ್ಸ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಬಲೆನೊ ಸುರಕ್ಷತೆ ವಿಚಾರಕ್ಕೆ ಬಂದರೆ, ಪ್ರಯಾಣಿಕರ ರಕ್ಷಣೆಗಾಗಿ 6 ಏರ್ ಬ್ಯಾಗ್‌ಗಳು, ಕ್ರೂಸ್ ಕಂಟ್ರೋಲ್, ಹಿಲ್ - ಹೋಲ್ಡ್ ಅಸಿಸ್ಟ್, ರೇರ್ ಪಾರ್ಕಿಂಗ್ ಸೇನಾರ್ಸ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಬಲೆನೋ ಡಿಸೈನ್ ವಿಷಯಕ್ಕೆ ಬಂದರೆ, ಆರ್ಕ್ಟಿಕ್ ವೈಟ್, ನೆಕ್ಸಾ ಬ್ಲೂ, ಗ್ರ್ಯಾಂಡಿಯರ್ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಒಪುಲೆಂಟ್ ರೆಡ್ & ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








