Renault: ಕಾರು ಖರೀದಿಸುವ ಕನಸಿದ್ಯಾ.. ಅತಿ ಕಡಿಮೆ ಬೆಲೆಗೆ ಮನೆಗೆ ತನ್ನಿ, ರೂ.65,000 ಡಿಸ್ಕೌಂಟ್!

ರೆನಾಲ್ಟ್ ಇಂಡಿಯಾ (Renault India) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಕ್ವಿಡ್, ಕಿಗರ್ ಮತ್ತು ಟ್ರೈಬರ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ರೆನಾಲ್ಟ್ ಇವೆಲ್ಲ ಕಾರುಗಳ ಖರೀದಿ ಮೇಲೆ ಈ ಏಪ್ರಿಲ್ ತಿಂಗಳು ರೂ.65,000 ವರೆಗೆ ರಿಯಾಯಿತಿಯನ್ನು ಘೋಷಣೆ ಮಾಡಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿವನ್ನು ತಿಳಿಯೋಣ.

ರೆನಾಲ್ಟ್ ಕ್ವಿಡ್ (Renault Kwid): ಇದು ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಈ ಕಾರಿನ 2025ರ ಮಾಡೆಲ್‌ಗಳು ಒಟ್ಟು ರೂ.25,000 ವರೆಗೆ ರಿಯಾಯಿತಿಯನ್ನು ಹೊಂದಿವೆ. ಅದೇ ರೀತಿಯಲ್ಲಿ 2024ರ ಮಾಡೆಲ್‌ಗಳು ರೂ.55,000 ವರೆಗೆ ಹಣಕಾಸಿನ ಪ್ರಯೋಜನವನ್ನು ಪಡೆದಿವೆ. ನೂತನ ಕ್ವಿಡ್ ಹ್ಯಾಚ್‌ಬ್ಯಾಕ್ ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

Renault Cars Have Big Discount Upto Rs 65 000 Kwid Kiger Triber Details

ಹೊಸ ರೆನಾಲ್ಟ್ ಕ್ವಿಡ್ ಕಾರು 1-ಲೀ. ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ರೆನಾಲ್ಟ್ ಕಿಗರ್ (Renault Kiger): ಈ ಎಸ್‌ಯುವಿಯ 2025ರ ಮಾಡೆಲ್‌ಗಳು ಬರೋಬ್ಬರಿ ರೂ.35,000 ವರೆಗೆ ಹಣಕಾಸಿನ ಪ್ರಯೋಜನವನ್ನು ಹೊಂದಿವೆ. 2024ರ ಮಾಡೆಲ್‌ಗಳು ಸ್ವಲ್ಪ ಜಾಸ್ತಿ ಅಂದರೆ ರೂ.65,000 ವರೆಗೆ ರಿಯಾಯಿತಿಯನ್ನು ಒಳಗೊಂಡಿವೆ. ಹೊಚ್ಚ ಹೊಸ ಕಿಗರ್ ಕಾರು, ರೂ.6.10 ಲಕ್ಷದಿಂದ ರೂ.11.23 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Renault Cars Have Big Discount Upto Rs 65 000 Kwid Kiger Triber Details

ನೂತನ ರೆನಾಲ್ಟ್ ಕಿಗರ್ ಕಾರು 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಮತ್ತು 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 18.24 ರಿಂದ 20.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ರೆನಾಲ್ಟ್ ಟ್ರೈಬರ್ (Renault Triber): ಇದು ಎಂಪಿವಿ ಆಗಿದೆ. ಈ ಕಾರಿನ 2025ರ ಮಾಡೆಲ್‌ಗಳು ಸರಿ ಸುಮಾರು ರೂ.30,000 ವರೆಗೆ ರಿಯಾಯಿತಿಯನ್ನು ಹೊಂದಿವೆ. 2024ರ ಮಾಡೆಲ್‌ಗಳು ರೂ.60,000 ವರೆಗೆ ಹಣಕಾಸಿನ ಪ್ರಯೋಜನವನ್ನು ಒಳಗೊಂಡಿವೆ. ನೂತನ ಟ್ರೈಬರ್ ಎಂಪಿವಿ ರೂ.6 ಲಕ್ಷದಿಂದ ರೂ.8.97 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ.

Renault Cars Have Big Discount Upto Rs 65 000 Kwid Kiger Triber Details

ಹೊಸ ಟ್ರೈಬರ್ ಕಾರು 1-ಲೀ. ಪೆಟ್ರೋಲ್ ಎಂಜಿನ್‌ ಹೊಂದಿದ್ದು, 18.2 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 7 ಆಸನಗಳಿವೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, April 5, 2025, 11:10 [IST]
English summary
Renault cars have big discount upto rs 65000 kwid kiger triber details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+