Renault: ಫ್ರಾನ್ಸ್ ಕಂಪನಿಯ ಆಟ ಬಲು ಜೋರು.. ಈ ಅಗ್ಗದ ಹೊಸ ಕಾರುಗಳಿಗೆ ಫುಲ್ ಡಿಮ್ಯಾಂಡ್, ಜನ ಮುಗಿಬಿದ್ದು ಖರೀದಿ!

ಫ್ರಾನ್ಸ್ ಮೂಲದ ರೆನಾಲ್ಟ್ (Renault) ನಂಬಿಕಾರ್ಹ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ದೇಶೀಯವಾಗಿ ಕ್ವಿಡ್, ಕೈಗರ್ ಹಾಗೂ ಟ್ರೈಬರ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ನವೆಂಬರ್ ತಿಂಗಳಲ್ಲೂ ಕಂಪನಿಯು ಒಟ್ಟು 3,662 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಿದೆ. 2024ರ ಇದೇ ಅವಧಿಯಲ್ಲಿ 2,811 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 30.27% ಪ್ರಗತಿಯಾಗಿದೆ.

ಸೆಪ್ಟೆಂಬರ್ 22 ರಿಂದ ಜಿಎಸ್‌ಟಿ ಪರಿಷ್ಕರಣೆಗೊಂಡಿದೆ. ಈಚೆಗೆ ಕೈಗರ್ ಮತ್ತು ಟ್ರೈಬರ್‌ಗಳು ಹೊಸ ರೂಪದಲ್ಲಿ ಬಿಡುಗಡೆಗೊಂಡಿವೆ. ಇವೆಲ್ಲ ಕಾರಣಗಳಿಂದ ಮಾರಾಟ ಸಂಖ್ಯೆಯೂ ಅಧಿಕಗೊಂಡಿದೆ. ವಿಶೇಷವಾಗಿ 2,064 ಯುನಿಟ್ ಟ್ರೈಬರ್‌, 1,151 ಯುನಿಟ್ ಕೈಗರ್ ಹಾಗೂ 447 ಯುನಿಟ್ ಕ್ವಿಡ್ ಕಾರುಗಳನ್ನು ಮಾರಾಟ ಮಾಡಲಾಗಿದೆ.

Renault Cars November 2025 Sales Report Triber Kiger And Kwid Details

ರೆನಾಲ್ಟ್ ಟ್ರೈಬರ್ (Renault Triber) ವಿಶೇಷತೆಗಳೇನು:

ಇದೊಂದು ಜನಪ್ರಿಯ ಎಂಪಿವಿಯಾಗಿದ್ದು, ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ಅದಕ್ಕೆ ತಕ್ಕಂತೆ ಸ್ಪರ್ಧಾತ್ಮಕ ಬೆಲೆಯಲ್ಲಿಯೂ ಸಿಗುತ್ತದೆ. ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ & ಶ್ಯಾಡೋ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 182 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,636 ವೀಲ್‌ಬೇಸ್‌ನ್ನು ಪಡೆದಿದೆ.

ನೂತನ 'ಟ್ರೈಬರ್' 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹದು. ಹೆಚ್ಚು ಶಕ್ತಿಯುತವಾದ 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ, ಕೀಲೆಸ್ ಎಂಟ್ರಿ ಹಾಗೂ 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Renault Cars November 2025 Sales Report Triber Kiger And Kwid Details

ರೆನಾಲ್ಟ್ ಕೈಗರ್ (Renault Kiger) ಹೇಗಿದೆ:

ಈ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದು, ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ರೂ.5.76 ಲಕ್ಷದಿಂದ ರೂ.10.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಸ್ಟೆಲ್ತ್ ಬ್ಲ್ಯಾಕ್ ಮತ್ತು ಪರ್ಲ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,500 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಕೈಗರ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. 1.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು 6 ಏರ್‌ಬ್ಯಾಗ್‌ನಂತಹ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Renault Cars November 2025 Sales Report Triber Kiger And Kwid Details

ರೆನಾಲ್ಟ್ ಕ್ವಿಡ್ (Renault Kwid) ಕೂಡ ಖರೀದಿಗೆ ಲಭ್ಯ:

ಇದು ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದ್ದು, ಅತಿ ಕಡಿಮೆ ದರದಲ್ಲೂ ದೊರೆಯುತ್ತದೆ. ರೂ.4.30 ಲಕ್ಷದಿಂದ ರೂ.5.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಸರಳವಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಫಿಯರಿ ರೆಡ್, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್ ಹಾಗೂ ಔಟ್‌ಬ್ಲ್ಯಾಕ್ ಬ್ರಾನ್ಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 184 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,422 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಹೊಸ 'ಕ್ವಿಡ್' 5 ಆಸನಗಳನ್ನು ಪಡೆದಿದೆ. ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. 1-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 21 ರಿಂದ 22 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಮತ್ತು ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Tuesday, December 2, 2025, 13:06 [IST]
English summary
Renault cars november 2025 sales report triber kiger and kwid details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+