Renault: ಜಿಎಸ್‌ಟಿ ಬದಲಾವಣೆ.. ರೆನಾಲ್ಟ್ ಕಾರುಗಳ ಬೆಲೆ ರೂ.96,000 ವರೆಗೆ ಇಳಿಕೆ, ರೂ.4.30 ಲಕ್ಷಕ್ಕೆ ಹೊಸ ಗಾಡಿ!
ರೆನಾಲ್ಟ್ ಇಂಡಿಯಾ (Renault India) ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರವು ಕಾರುಗಳ ಮೇಲಿನ ಜಿಎಸ್‌ಟಿ (GST) ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ಕಡಿತಗೊಳಿಸಿದೆ. ಇದರ ಸಂಪೂರ್ಣ ಪ್ರಯೋಜನವನ್ನು ಗ್ರಾಹಕರಿಗೆ ವರ್ಗಾಯಿಸುವುದಾಗಿ ಕಂಪನಿಯು ಘೋಷಿಸಿದೆ. ವಿವಿಧ ಕಾರುಗಳ ಬೆಲೆಯನ್ನು ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.40,000 ರಿಂದ ರೂ.96,000 ವರೆಗೆ ಇಳಿಸಿದೆ. ಹೊಸ ದರಗಳು ಸೆಪ್ಟೆಂಬರ್ 22 ರಿಂದ ಅಧಿಕೃತವಾಗಿ ಜಾರಿಗೆ ಬರಲಿವೆ.
ರೆನಾಲ್ಟ್ ಕ್ವಿಡ್ (Renault Kwid):
ಇದೊಂದು ಹ್ಯಾಚ್‌ಬ್ಯಾಕ್ ಆಗಿದೆ. ಸದ್ಯ ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಪರಿಷ್ಕೃತ ದರ ರೂ.4.29 ಲಕ್ಷದಿಂದ ರೂ.5.90 ಲಕ್ಷ ಆಗಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್ ಮತ್ತು ಮೂನ್‌ಲೈಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಕ್ವಿಡ್ ಉತ್ತಮವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 22 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 279 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು 8 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕೀ ಲೆಸ್ ಎಂಟ್ರಿ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಕೊಂಡಿದೆ.

ರೆನಾಲ್ಟ್ ಕೈಗರ್ (Renault Kiger):
ಇದು ಜನಪ್ರಿಯ ಎಸ್‌ಯುವಿಯಾಗಿದೆ. ಪ್ರಸ್ತುತ ರೂ.6.29 ಲಕ್ಷದಿಂದ ರೂ.11.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೊಸ ಬೆಲೆಯು ರೂ.5.76 ಲಕ್ಷದಿಂದ ರೂ.10.33 ಲಕ್ಷ ಇದೆ. ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ ಕೈಗರ್ ಕಾರು ಅತ್ಯುತ್ತಮವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀಟರ್ ಟರ್ಬೋ ಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಹಾಗೂ ಆಟೋಮೆಟಿಕ್, ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 20 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳಿದ್ದು, 455 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಈ ಎಸ್‌ಯುವಿಯು 8 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೇರ್ ಎಸಿ ವೆಂಟ್‌ಗಳು ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ರೆನಾಲ್ಟ್ ಟ್ರೈಬರ್ (Renault Triber):
ಇದೊಂದು ಫ್ಯಾಮಿಲಿ ಎಂಪಿವಿಯಾಗಿದೆ. ಸದ್ಯ ರೂ.6.29 ಲಕ್ಷದಿಂದ ರೂ.9.39 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಪರಿಷ್ಕೃತ ದರ ರೂ.5.76 ಲಕ್ಷದಿಂದ ರೂ.8.59 ಲಕ್ಷ ಆಗಿದೆ. ಈ ಕಾರು ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಮತ್ತು ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 7 ಆಸನಗಳನ್ನು ಹೊಂದಿದೆ.
ಈ ಕಾರು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 20 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








