ಹೊಸ ಅವತಾರದಲ್ಲಿ ಈ Renault SUV.. ಆಗಸ್ಟ್ 24ರಂದು ಬಿಡುಗಡೆ, 20.5 ಕಿಮೀ ಮೈಲೇಜ್.. 6.50 ಲಕ್ಷ?
ರೆನಾಲ್ಟ್ ಕಿಗರ್ (Renault Kiger) ಪ್ರಮುಖ ಎಸ್‌ಯುವಿಯಾಗಿದೆ. ಈ ಕಾರನ್ನು ದೇಶೀಯವಾಗಿ 2021ರಲ್ಲಿ ಬಿಡುಗಡೆಗೊಳಿಸಲಾಯಿತು. ಅಂದಿನಿಂದ ಇಂದಿನವರೆಗೆ ಸ್ಪರ್ಧಾತ್ಮಕ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಸದ್ಯ, ಇದೇ ಕಿಗರ್ ಎಸ್‌ಯುವಿಯನ್ನು ನವೀಕರಿಸಿದ ರೂಪದಲ್ಲಿ ಅಂದರೆ, ಫೇಸ್‌ಲಿಫ್ಟ್ ಮಾಡೆಲ್‌ನ್ನು ಬಿಡುಗಡೆಗೊಳಿಸಲು ಕಂಪನಿಯು ದಿನಾಂಕವನ್ನು ನಿಗದಿಪಡಿಸಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
2025ರ ಹೊಚ್ಚ ಹೊಸ ರೆನಾಲ್ಟ್ ಕಿಗರ್ ಫೇಸ್‌ಲಿಫ್ಟ್ (Renault Kiger Facelift) ಎಸ್‌ಯುವಿಯು ಇದೇ ಆಗಸ್ಟ್ 24ರಂದು ಅದ್ದೂರಿಯಾಗಿ ಮಾರಾಟಕ್ಕೆ ಬರಲಿದೆ. ಅದಕ್ಕಾಗಿ ಕಂಪನಿಯು ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಂಡಿದೆ. ಈ ಕಾರು ವಿನ್ಯಾಸದಲ್ಲಿ ಪ್ರಮುಖವಾದ ಕಾಸ್ಮೆಟಿಕ್ ಬದಲಾವಣೆಗಳನ್ನು ಹೊಂದಿರುವ ನಿರೀಕ್ಷೆಯಿದೆ.

ವಿಶೇಷವಾಗಿ ಮರುವಿನ್ಯಾಸಗೊಳಿಸಲಾದ ಫ್ರಂಟ್ ಫಾಸಿಯಾ, ಹೊಸದಾದ ಬಂಪರ್‌ಗಳು, ನವೀಕೃತ ಹೆಡ್‌ಲ್ಯಾಂಪ್‌ಗಳು ಹಾಗೂ ಟೈಲ್ ಲೈಟ್‌ಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಈಗಿರುವ ಕಿಗರ್‌ನಂತೆ ಮಿಸ್ಟರಿ ಬ್ಲ್ಯಾಕ್, ಐಸ್ ಕೂಲ್ ವೈಟ್, ಸ್ಟೆಲ್ತ್ ಬ್ಲ್ಯಾಕ್, ಮೂನ್‌ಲೈಟ್ ಸಿಲ್ವರ್,ಮಿಸ್ಟರಿ ಬ್ಲ್ಯಾಕ್, ರೇಡಿಯಂಟ್ ರೆಡ್ ಹಾಗೂ ಕ್ಯಾಸ್ಪಿಯನ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿ ಸಿಗಬಹುದು ಎಂದು ಅಂದಾಜಿಸಲಾಗಿದೆ.
ಈ ಕಾರಿನ ಪವರ್‌ಟ್ರೇನ್ ಆಯ್ಕೆಯಲ್ಲಿಯೂ ಯಾವುದೇ ಮಾರ್ಪಾಡುಗಳಿರುವುದಿಲ್ಲ ಎನ್ನಲಾಗಿದೆ. ಇದು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದುಕೊಂಡಿರಬಹುದು. 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿರಬಹುದು. ಜೊತೆಗೆ 20 ಕಿ.ಮೀ ವರೆಗೆ ಮೈಲೇಜ್ ನೀಡಬಹುದು. ಡೀಲರ್‌ಶಿಪ್ ಫಿಟೆಡ್ ಸಿಎನ್‌ಜಿ ಕಿಟ್ ಆಯ್ಕೆಯನ್ನು ಹೊಂದಿರಬಹುದು ಎಂದು ಹೇಳಲಾಗಿದೆ.
ಇದು 5 ಆಸನಗಳನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಆರಾಮಾಯಕವಾಗಿ ಕುಳಿತುಕೊಂಡು ಪ್ರಯಾಣ ಮಾಡಲು ಸಾದ್ಯವಾಗಲಿದೆ. 8-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿರುವ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಎಲ್ಲ ಲಕ್ಷಣಗಳಿವೆ.
ನೂತನ ರೆನಾಲ್ಟ್ ಕಿಗರ್ ಫೇಸ್‌ಲಿಫ್ಟ್ ಪ್ರಯಾಣಿಕರ ರಕ್ಷಣೆಗಾಗಿ ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ನಿರೀಕ್ಷೆಯಿದೆ. ಬಹುಮುಖ್ಯವಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ & ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಒಳಗೊಂಡಿರಬಹುದು ಎನ್ನಲಾಗಿದೆ.
ಹೊಸ ಕಿಗರ್ ಫೇಸ್‌ಲಿಫ್ಟ್ ಅಗ್ಗದ ದರದಲ್ಲೂ ಖರೀದಿಗೆ ಲಭ್ಯವಾಗುವ ಸಾಧ್ಯತೆಯಿದ್ದು, ಕನಿಷ್ಠ ರೂ. 6.50 ಲಕ್ಷ ಹಾಗೂ ಗರಿಷ್ಠ ರೂ.11.23 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕೆ ಮಾರುತಿ ಸುಜುಕಿ ಫ್ರಾಂಕ್ಸ್, ಟಾಟಾ ಪಂಚ್, ಕಿಯಾ ಸೈರಸ್, ನಿಸ್ಸಾನ್ ಮ್ಯಾಗ್ನೈಟ್ ಕಿಯಾ ಸೋನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್ ಹಾಗೂ ಮಾರುತಿ ಸುಜುಕಿ ಬ್ರೆಝಾ ಎಸ್‌ಯುವಿಗಳು ಪ್ರಬಲವಾದ ಎದುರಾಳಿಯಾಗಬಲ್ಲವು.
ಈಚೆಗೆ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ (Renault Triber Facelift) ಕೂಡ ಬಿಡುಗಡೆಯಾಗಿದೆ:
ಇದೊಂದು ಎಂಪಿವಿಯಾಗಿದೆ. ಕನಿಷ್ಠ ರೂ.6.29 ಲಕ್ಷ ಹಾಗೂ ಗರಿಷ್ಠ ರೂ.9.16 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದ್ದು, ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 7-ಆಸನಗಳಿದ್ದು, ಒಂದು ತುಂಬು ಕುಟುಂಬ ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು 84 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಈ ಕಾರು 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 20 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 8-ಇಂಚಿರುವ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿರುವ ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications