20 ಕಿ.ಮೀ ಮೈಲೇಜ್.. 5.76 ಲಕ್ಷ, 5-ಸೀಟರ್.. ಈ ಹೊಸ ಕಾರಿಗೆ ಮನಸೋತ ಗ್ರಾಹಕರು!

ರೆನಾಲ್ಟ್ ಕೈಗರ್ (Renault Kiger) ಪ್ರಮುಖ ಎಸ್‌ಯುವಿಯಾಗಿದೆ. ಆಗಸ್ಟ್‌ನಲ್ಲಿ ಈ ಕಾರನ್ನು 'ಫೇಸ್‌ಲಿಫ್ಟ್' ರೂಪದಲ್ಲಿ ಮಾರಾಟಕ್ಕೆ ತರಲಾಗಿತ್ತು. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳು 'ಕೈಗರ್' ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 1,166 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 988 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.02% ಬೆಳವಣಿಗೆಯಾಗಿದೆ.

'ರೆನಾಲ್ಟ್ ಕೈಗರ್' ವಿಶೇಷತೆಗಳೇನು?

ಈ ಎಸ್‌ಯುವಿಯು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.5.76 ಲಕ್ಷ ಹಾಗೂ ಗರಿಷ್ಠ ರೂ.10.34 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಬಹುದು. ಅಥೆಂಟಿಕ್, ಎವೊಲ್ಯೂಷನ್, ಟೆಕ್ನೋ, ಎಮೊಷನ್, ಎಮೊಷನ್ ಟರ್ಬೊ, ಟೆಕ್ನೋ ಟರ್ಬೊ ಸಿವಿಟಿ & ಎಮೊಷನ್ ಸಿವಿಟಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Renault Kiger Suv September 2025 Sales Report

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್ ಲೈಟ್‌ಗಳು ಮತ್ತು 16 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್ ಹಾಗೂ ಪರ್ಲ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ಕೈಗರ್' ಹೆಚ್ಚು ವಿಶಾಲವಾಗಿದೆ 3,991 ಮಿ.ಮೀ ಉದ್ದ, 1,750 ಮಿ.ಮೀ ಅಗಲ ಮತ್ತು 1,605 ಮಿ.ಮೀ ಎತ್ತರವಿದೆ. ಜೊತೆಗಿದು 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,500 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 940 ಕೆಜಿ ತೂಕವಿದೆ.

Renault Kiger Suv September 2025 Sales Report

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 1.0 ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 72 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಇನ್ನೊಂದು 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್, 100 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 160 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ & ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ಇದರೊಂದಿಗೆ ಹೆಚ್ಚಿನ ಹಣ ಪಾವತಿಸಿದರೆ ಡೀಲರ್‌ಶಿಪ್ ಫಿಟೆಡ್ ಸಿಎನ್‌ಜಿ ಕಿಟ್ ಆಯ್ಕೆಯಲ್ಲಿಯೂ ದೊರೆಯುತ್ತದೆ.

Renault Kiger Suv September 2025 Sales Report

ನೂತನ 'ಕೈಗರ್' ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 19.83 ರಿಂದ 20.38 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 40 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 10.20 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಕಾರಿನ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 455 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8 ಇಂಚು), ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೇರ್ ಎಸಿ ವೆಂಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸರ್‌ಗಳು, ಟ್ರಾಕ್ಷನ್-ಕಂಟ್ರೋಲ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

More from DriveSpark

Article Published On: Wednesday, October 22, 2025, 19:21 [IST]
English summary
Renault kiger suv september 2025 sales report
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+