ಹೊಸ 'ರೆನಾಲ್ಟ್ ಕ್ವಿಡ್' ಎಲೆಕ್ಟ್ರಿಕ್ ಕಾರು ಕಾಣಿಸಿಕೊಂಡೆ ಬಿಡ್ತು.. ಲಕ್ಸುರಿ ಫೀಚರ್ಸ್, 5 ಲಕ್ಷಕ್ಕೆ ಬಿಡುಗಡೆ?

ರೆನಾಲ್ಟ್ ಇಂಡಿಯಾ (Renault India) ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕ್ವಿಡ್, ಕಿಗರ್ ಮತ್ತು ಟ್ರೈಬರ್ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಸದ್ಯ, ಕಂಪನಿಯು ಹೊಚ್ಚ ಹೊಸ ಎಲೆಕ್ಟ್ರಿಕ್ ಕಾರೊಂದನ್ನು ಮಾರಾಟಕ್ಕೆ ತರಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲಿ 'ಕ್ವಿಡ್ ಇವಿ'ಯು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಬನ್ನಿ, ಆ ಕುರಿತಂತೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಇದೀಗ ಚೆನ್ನೈ ವಿಮಾನ ನಿಲ್ದಾಣ ಸಮೀಪ ರೆನಾಲ್ಟ್ ಕ್ವಿಡ್ ಇವಿ (Renault Kwid EV) ಕಾಣಿಸಿಕೊಂಡಿದ್ದು, ಈ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ್ನು ಟ್ರಕ್‌ವೊಂದರಲ್ಲಿ ನಿಲ್ಲಿಸಲಾಗಿತ್ತು. ಅದಕ್ಕೆ ಸಂಬಂಧಿಸಿದ ಫೋಟೋವೊಂದು ಎಲ್ಲೆಡೆ ಹರಿದಾಡುತ್ತಿದೆ. ಇದೇ ಫೋಟೋವನ್ನು ಸೂಕ್ಷವಾಗಿ ಗಮನಿಸಿದಾಗ ಕ್ವಿಡ್ ಎಲೆಕ್ಟ್ರಿಕ್ ಕಾರು, ಹಿಂಭಾಗ (ರೇರ್) 'ವೈ' ಆಕಾರಕ್ಕೆ ಹೋಲಿಕೆಯಾಗುವ ಟೈಲ್‌ಲೈಟ್‌ಗಳು, ವೈಪರ್ ಹಾಗೂ ಸ್ಟೀಲ್ ವೀಲ್‌ಗಳನ್ನು ಹೊಂದಿರುವುದನ್ನು ಗುರುತಿಸಬಹುದು.

Renault Kwid Electric Car Spotted In India Launch Soon Expected Price Range And Features Details

ನೂತನ ರೆನಾಲ್ಟ್ ಕ್ವಿಡ್ ಇವಿ, ಜಾಗತಿಕವಾಗಿ ಮಾರಾಟಗೊಳ್ಳುವ 'ಡೇಸಿಯಾ ಸ್ಪ್ರಿಂಗ್ ಇವಿ'ಯನ್ನು ಆಧರಿಸಿದೆ. ಕಳೆದ ವರ್ಷದ ಫೆಬ್ರವರಿಯಲ್ಲಿ ಈ 'ಸ್ಪ್ರಿಂಗ್' ಎಲೆಕ್ಟ್ರಿಕ್ ಕಾರನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಪರಿಚಯಿಸಲಾಗಿತ್ತು. ಇದು ನೋಡಲು ತುಂಬಾ ಸುಂದರವಾಗಿದ್ದು, ಹೆಚ್ಚು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ.

ಹೊಸ ಕ್ವಿಡ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌, ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿರುವ ನಿರೀಕ್ಷೆಯಿದೆ. 26.8 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿರಲಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 220 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್, ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ 46 ಪಿಎಸ್ ಮತ್ತು 65 ಪಿಎಸ್ (ಹಾರ್ಸ್ ಪವರ್) ಉತ್ಪಾದಿಸಬಹುದು ಎನ್ನಲಾಗಿದೆ.

Renault Kwid Electric Car Spotted In India Launch Soon Expected Price Range And Features Details

ಈ ಎಲೆಕ್ಟ್ರಿಕ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ಸಾಧ್ಯತೆಯೂ ಹೆಚ್ಚಿದೆ. ಇದು 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ಆಟೋ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 4 ಪವರ್ ವಿಂಡೋಗಳನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ನೂತನ ರೆನಾಲ್ಟ್ ಕ್ವಿಡ್ ಇವಿ ಸುರಕ್ಷತೆಗೂ ಹೆಸರುವಾಸಿಯಾಗಿರಲಿದೆ. ಪ್ರಯಾಣಿಕರ ರಕ್ಷಣೆಗಾಗಿ ಮಲ್ಟಿಪಾಲ್ ಏರ್‌ಬ್ಯಾಗ್‌ಗಳು, ಲೆವೆಲ್ - 1 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್‌) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಹೊಸ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ ದೊಡ್ಡದಾಗಿರುವ ಬೂಟ್ ಸ್ಪೇಸ್‌ನ್ನು ಪಡೆದುಕೊಂಡಿರಲಿದೆ. ಈ ಕಾರು ಅತಿ ಕಡಿಮೆ ಬೆಲೆಯಲ್ಲಿಯೂ ಖರೀದಿಗೆ ದೊರೆಯುವ ನಿರೀಕ್ಷೆಯಿದ್ದು, ರೂ.5 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿರಬಹುದು ಎಂದು ಅಂದಾಜಿಸಲಾಗಿದೆ. ನೂತನ ಕ್ವಿಡ್ ಇವಿಗೆ ಎಂಜಿ ಕಾಮೆಟ್ ಇವಿ & ಟಾಟಾ ಟಿಯಾಗೊ ಇವಿಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Source Link: Team-Bhp.Com

More from DriveSpark

Article Published On: Thursday, May 29, 2025, 13:18 [IST]
English summary
Renault kwid electric car spotted in india launch soon expected price range and features details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+