ಸದ್ದಿಲ್ಲದೇ Renault Kwid ಎಲೆಕ್ಟ್ರಿಕ್ ಕಾರಿನ ಪರೀಕ್ಷೆ.. ಭಾರೀ ಫೀಚರ್ಸ್, ಶೀಘ್ರದಲ್ಲೇ ಬಿಡುಗಡೆ.. 5 ಲಕ್ಷ ಬೆಲೆ?

ರೆನಾಲ್ಟ್ ಇಂಡಿಯಾ (Renault India), ವಿಶ್ವಾಸಾರ್ಹ ಕಾರು ತಯಾರಕ ಕಂಪನಿಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ತಯಾರಿ ಮಾಡಿಕೊಳ್ಳುತ್ತಿದೆ. ಅದರಲ್ಲೂ ಜಾಗತಿಕವಾಗಿ ಕಂಪನಿಯ ಒಡೆತನದಲ್ಲಿರುವ 'ಡೇಸಿಯಾ ಸ್ಪ್ರಿಂಗ್ ಇವಿ' ಆಧಾರಿತ ಕ್ವಿಡ್ ಇವಿಯನ್ನು ಕೂಡ ಮಾರಾಟಕ್ಕೆ ತರಲಿದೆ. ಈ ಮೊದಲು ಚೆನ್ನೈ ವಿಮಾನ ನಿಲ್ದಾಣ ಸಮೀಪ ಟ್ರಕ್‌ವೊಂದರಲ್ಲಿ ಇದೇ 'ರೆನಾಲ್ಟ್ ಕ್ವಿಡ್' ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನ್ನು ನಿಲ್ಲಿಸಲಾಗಿತ್ತು. ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲೂ ಸಖತ್ ವೈರಲ್ ಆಗಿದ್ದವು. ಸದ್ಯ, ಈ ಕಾರು ಪ್ರಾಯೋಜಿಕ ಓಡಾಟದ ಸಂದರ್ಭದಲ್ಲಿ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದೆ.

ನೂತನ ರೆನಾಲ್ಟ್ ಕ್ವಿಡ್ ಇವಿ (Renault Kwid EV) ಪರೀಕ್ಷಾರ್ಥ ಸಂಚಾರ ನಡೆಸುತ್ತಿರುವ ಸ್ಪೈ ಫೋಟೋಗಳನ್ನು ಗಮನಿಸಿದಾಗ, ಈ ಕಾರು ಹೆಚ್ಚು ಅತ್ಯಾಧುನಿಕ ವಿನ್ಯಾಸವನ್ನು ಹೊಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಇದು ಥೀಕ್ ಕ್ಲಾಡಿಂಗ್, ಡೋರ್ ಮೋಲ್ಡಿಂಗ್ ಹಾಗೂ ಸ್ಪೋರ್ಟಿ ಅಲಾಯ್ ವೀಲ್‌ಗಳನ್ನು ಹೊಂದಿರುವುದನ್ನು ನೋಡಬಹುದಾಗಿದೆ. ಅದರ ಹೊರತಾಗಿ ಡೇಸಿಯಾ ಸ್ಪ್ರಿಂಗ್ ಇವಿಯಂತೆ ಫುಲ್ ವಿಡ್ತ್ ಎಲ್‌ಇಡಿ ಲೈಟ್ ಸ್ಟ್ರಿಪ್ ಹಾಗೂ ಗಟ್ಟಿಮುಟ್ಟಾದ ಬಂಪರ್‌ಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.

Renault Kwid Ev Spotted On Test Launch Soon Expected Price Range And Features Details

ಈ ಎಲೆಕ್ಟ್ರಿಕ್ ಕಾರು ಬಲಿಷ್ಠವಾದ ಪವರ್‌ಟ್ರೇನ್‌ ಆಯ್ಕೆಯನ್ನು ಪಡೆದಿರುವ ಸಾಧ್ಯತೆಯಿದೆ. 26.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿರಲಿದೆ. ಭರ್ತಿ ಚಾರ್ಜ್‌ನಲ್ಲಿ 220 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡಬಹುದು ಎಂದು ಹೇಳಲಾಗಿದೆ. ಇದರೊಂದಿಗೆ ಹೆಚ್ಚಿನ ಹಾರ್ಸ್ ಪವರ್‌ನ್ನು ಹೊರಹಾಕುವ ಎಲ್ಲ ಲಕ್ಷಣಗಳಿವೆ.

ಹೊಸ ರೆನಾಲ್ಟ್ ಕ್ವಿಡ್ ಇವಿಯ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿರಲಿದೆ. ಅದಕ್ಕೆ ತಕ್ಕಂತೆ 10-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಸ್ಮಾರ್ಟ್‌ಫೋನ್ ಕನೆಕ್ಟಿವಿಟಿ, ವೈರ್‌ಲೆಸ್ ಫೋನ್ ಚಾರ್ಜರ್, 4 ಪವರ್ ವಿಂಡೋಗಳು ಹಾಗೂ ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎನ್ನಲಾಗಿದೆ.

Renault Kwid Ev Spotted On Test Launch Soon Expected Price Range And Features Details

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ಮಾಡಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ ಸ್ವಲ್ಪ ಮಟ್ಟಿಗೆ ದೊಡ್ಡ ಗಾತ್ರದ 308 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುವ ನಿರೀಕ್ಷೆಯಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-1 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಟಿಪಿಎಂಎಸ್ (ಟೈರ್ - ಪ್ರೆಶರ್ ಮಾನಿಟರಿಂಗ್ ಸಿಸ್ಟಮ್‌) ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯೂ ಇದೆ.

ಎಲ್ಲವು ಅಂದುಕೊಂಡಂತೆ ನಡೆದರೆ, ನೂತನ ರೆನಾಲ್ಟ್ ಕ್ವಿಡ್ ಇವಿ ಈ ವರ್ಷದ ದ್ವಿತೀಯಾರ್ಧ ಅಥವಾ ಮುಂದಿನ ವರ್ಷದ ಆರಂಭದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಬಹುದು ಎನ್ನಲಾಗಿದೆ. ಈ ಕಾರು ಅತಿ ಕಡಿಮೆ ಬೆಲೆಯಲ್ಲೂ ಖರೀದಿಗೆ ದೊರೆಯಲಿದ್ದು, ರೂ.5 ಲಕ್ಷ ಆರಂಭಿಕ ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಪ್ರಸ್ತುತ ಖರೀದಿಗೆ ದೊರೆಯುವ ಇಂಧನ ಚಾಲಿತ ರೆನಾಲ್ಟ್ ಕ್ವಿಡ್ ವಿಶೇಷತೆಗಳೇನು:

ಈ ಕಾರು ರೂ.4.70 ಲಕ್ಷ ರೂ.6.40 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಎಂಜಿನ್‌ ಹೊಂದಿದ್ದು, 21 22 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನಗಳಿವೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀ ಲೆಸ್ ಎಂಟ್ರಿ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Source Link: Rushlane

More from DriveSpark

Article Published On: Wednesday, July 16, 2025, 12:58 [IST]
English summary
Renault kwid ev spotted on test launch soon expected price range and features details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+