22 ಕಿ.ಮೀ ಮೈಲೇಜ್.. 4.70 ಲಕ್ಷ, 5-ಸೀಟರ್.. ಈ ಜನಪ್ರಿಯ ಕಾರನ್ನು ಗ್ರಾಹಕರು ಕೊಳ್ಳುತ್ತಿಲ್ಲ, ಯಾಕೆ?

ರೆನಾಲ್ಟ್ ಕ್ವಿಡ್ (Renault Kwid) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ಹೆಚ್ಚು ಆಕರ್ಷಕವಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಆದರೆ, ಈ ಕಾರಿನ ಮಾರಾಟ ಸಂಖ್ಯೆಯು ದಿನೇ ದಿನೆ ಕುಸಿತವಾಗುತ್ತಿದೆ. ಅದು 'ಮೇ' ತಿಂಗಳಲ್ಲೂ ಮುಂದುವರಿದಿದೆ. ಒಟ್ಟು 540 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2024ರ ಇದೇ ಅವಧಿಯಲ್ಲಿ 743 ಯುನಿಟ್‌ಗಳನ್ನು ಮಾರಾಟ ಮಾಡಲಾಗಿತ್ತು. ಈ ಅಂಕಿಸಂಖ್ಯೆಯನ್ನು ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ (YoY) ಶೇಕಡ 27.32% ಇಳಿಕೆಯಾಗಿದೆ.

ಈ ವರ್ಷದ ಮೊದಲ 4 ತಿಂಗಳು ರೆನಾಲ್ಟ್ ಕ್ವಿಡ್ ಹ್ಯಾಚ್‌ಬ್ಯಾಕ್ ಮಾರಾಟವು ಅಷ್ಟೊಂದು ಉತ್ತಮವಾಗಿರಲಿಲ್ಲ. ಇಲ್ಲಿಯೂ ಹಲವು ಏರಿಳಿತಗಳನ್ನು ಕಾಣಲಾಗಿದೆ. ಏಪ್ರಿಲ್‌ನಲ್ಲಿ 595 ಯುನಿಟ್, ಮಾರ್ಚ್‌ನಲ್ಲಿ 532 ಯುನಿಟ್, ಫೆಬ್ರವರಿಯಲ್ಲಿ 698 ಯುನಿಟ್ ಮತ್ತು 569 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ.

Renault Kwid May 2025 Sales Report

ರೆನಾಲ್ಟ್ ಕ್ವಿಡ್ ಕಾರಿನ ಮಾರಾಟ ಸಂಖ್ಯೆ ಇಳಿಕೆಯಾಗಲು ನಾನಾ ಕಾರಣಗಳಿವೆ. ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಹೆಚ್ಚು-ಕಮ್ಮಿ ಇದೇ ದರಕ್ಕೆ ಹಲವು ಸೆಡಾನ್ ಹಾಗೂ ಎಸ್‌ಯುವಿಗಳು ಖರೀದಿಗೆ ಲಭ್ಯವಿವೆ. ಗ್ರಾಹಕರು ಅವುಗಳತ್ತ ಮುಖ ಮಾಡಿದ್ದಾರೆ. ಜೊತೆಗೆ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳಲ್ಲೂ ಕೊರತೆಯಿದೆ. ಹೀಗಾಗಿ, ಕ್ವಿಡ್ ಮಾರಾಟ ಪ್ರಮಾಣ ಕುಸಿತವಾಗುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.

ರೆನಾಲ್ಟ್ ಕ್ವಿಡ್ ವಿಶೇಷತೆಗಳೇನು:

ಇದು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದ್ದು, ರೂ.4.70 ಲಕ್ಷದಿಂದ ರೂ.6.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್ (ಒ) ಮತ್ತು ಆರ್‌ಎಕ್ಸ್‌ಟಿ ಒಳಗೊಂಡಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ಹೊರಭಾಗದಲ್ಲಿ ಉತ್ತಮವಾಗಿರುವ ವಿನ್ಯಾಸವನ್ನು ಹೊಂದಿದೆ. ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್ ಮತ್ತು ಮೂನ್‌ಲೈಟ್ ಸಿಲ್ವರ್ ಎಂಬ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ.

Renault Kwid May 2025 Sales Report

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದ್ದು, 1-ಲೀ. ಸಾಮರ್ಥ್ಯದ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 68 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 91 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21 ರಿಂದ 22 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.

ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರ ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 279 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 28 ಲೀ. ಸಾಮರ್ಥ್ಯವಿರುವ ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ. ಈ ಕಾರು 3731 ಎಂಎಂ ಉದ್ದ, 1579 ಎಂಎಂ ಅಗಲ ಹಾಗೂ 1474 ಎಂಎಂ ಎತ್ತರವು ಇದೆ.

Renault Kwid May 2025 Sales Report

ನೂತನ ಕ್ವಿಡ್ ಹ್ಯಾಚ್‌ಬ್ಯಾಕ್ ಅಚ್ಚುಕಟ್ಟಾದ ಕ್ಯಾಬಿನ್ ವಿನ್ಯಾಸವನ್ನು ಹೊಂದಿದೆ. 8 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕೀ ಲೆಸ್ - ಎಂಟ್ರಿ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ಹಲವು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್), ಹಿಲ್ ಸ್ಟಾರ್ಟ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಪಡೆದಿದೆ.

More from DriveSpark

Article Published On: Sunday, June 22, 2025, 9:27 [IST]
English summary
Renault kwid may 2025 sales report
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+