6 ಲಕ್ಷ.. 7-ಸೀಟರ್, 20 Km ಮೈಲೇಜ್.. ಆದರೂ ಈ ಜನಪ್ರಿಯ ಕಾರನ್ನು ಗ್ರಾಹಕರು ಕೊಳ್ಳುತ್ತಿಲ್ಲ.. ಯಾಕೆ?

ರೆನಾಲ್ಟ್ ಟ್ರೈಬರ್ (Renault Triber) ಜನಪ್ರಿಯ ಎಂಪಿವಿಯಾಗಿದೆ. ಇದು ಅತ್ಯಾಧುನಿಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಅದರ ಹೊರತಾಗಿಯೂ ದಿನದಿಂದ ದಿನಕ್ಕೆ 'ಟ್ರೈಬರ್' ಕಾರಿನ ಮಾರಾಟ ಸಂಖ್ಯೆ ಮಾತ್ರ ಕುಸಿತವಾಗುತ್ತಿದೆ. ಈ ಏಪ್ರಿಲ್‌ನಲ್ಲೂ ಅದು ಮುಂದುವರಿದಿದ್ದು, ಮಾರಾಟ ಪ್ರಮಾಣ ಇಳಿಕೆಯಾಗುತ್ತಿರುವ ಬಗ್ಗೆ ಕಂಪನಿಯು ಯಾವುದೇ ಸ್ಪಷ್ಟವಾದ ಕಾರಣವನ್ನು ಬಹಿರಂಗಪಡಿಸಿಲ್ಲ.

ಕಳೆದ ತಿಂಗಳು (ಏಪ್ರಿಲ್-2025) ರೆನಾಲ್ಟ್ ಇಂಡಿಯಾ ಸರಿ ಸುಮಾರು 1,401 ಯುನಿಟ್ 'ಟ್ರೈಬರ್' ಎಂಪಿವಿಗಳನ್ನು ಮಾರಾಟ ಮಾಡಿದೆ. 2024ರ ಇದೇ ಅವಧಿಯಲ್ಲಿ 1,671 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ಈ ಅಂಕಿಅಂಶಕ್ಕೆ ಹೋಲಿಕೆ ಮಾಡಿದರೆ, ಮಾರಾಟ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡ -22% ಇಳಿಕೆಯಾಗಿದೆ.

Renault Triber Mpv April 2025 Sales Details

ಅದೇ ರೀತಿಯಲ್ಲಿ ಈ ವರ್ಷದ ಮೊದಲ 3 ತಿಂಗಳು ಸಹ 'ರೆನಾಲ್ಟ್ ಟ್ರೈಬರ್' ಕಾರಿನ ಮಾರಾಟ ಸಂಖ್ಯೆ 2,000 ಯುನಿಟ್ ಗಡಿ ದಾಟಿಲ್ಲ. ಮಾರ್ಚ್‌ನಲ್ಲಿ 1,552 ಯುನಿಟ್, ಫೆಬ್ರವರಿಯಲ್ಲಿ 1,545 ಯುನಿಟ್ ಹಾಗೂ ಜನವರಿಯಲ್ಲಿ 1,456 ಯುನಿಟ್ ಟ್ರೈಬರ್ ಎಂಪಿವಿಗಳನ್ನು ಮಾರಾಟಗೊಳಿಸುವಲ್ಲಿ ಮಾತ್ರ ಕಂಪನಿಯು ಯಶಸ್ವಿಯಾಗಿದೆ.

ರೆನಾಲ್ಟ್ ಟ್ರೈಬರ್ ಎಂಪಿವಿ ಮಾರಾಟ ಸಂಖ್ಯೆ ಇಳಿಮುಖವಾಗಲು ನಾನಾ ಕಾರಣಗಳಿವೆ. ಬೇರೆ ಕಂಪನಿ ಕಾರುಗಳಿಗೆ ಹೋಲಿಕೆ ಮಾಡಿದರೆ, ಈ ಟ್ರೈಬರ್ ಎಂಪಿವಿ ಅಷ್ಟು ಚಿರಪರಿಚಿತವಾಗಿಲ್ಲ. ನೋಡುವುದಕ್ಕೂ ದೊಡ್ಡದಾಗಿ ಕಾಣುವುದಿಲ್ಲ. ಒಂದಷ್ಟು ವೈಶಿಷ್ಟ್ಯಗಳ ಕೊರತೆಯಿದ್ದು, ಖರೀದಿದಾರರು ಕೊಂಡುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

Renault Triber Mpv April 2025 Sales Details

ರೆನಾಲ್ಟ್ ಟ್ರೈಬರ್ ವಿಶೇಷತೆಗಳೇನು?

ಈ ಎಂಪಿವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.6.15 ಲಕ್ಷದಿಂದ ರೂ.8.98 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿ 7 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 84 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಟ್ರೈಬರ್ ಕಾರು 1-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 18.2 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಎಂಪಿವಿ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಐಸ್ ಕೂಲ್ ವೈಟ್, ಸೀಡರ್ ಬ್ರೌನ್, ಮೂನ್‌ಲೈಟ್ ಸಿಲ್ವರ್ ಮತ್ತು ಎಲೆಕ್ಟ್ರಿಕ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Renault Triber Mpv April 2025 Sales Details

ಹೊಸ ರೆನಾಲ್ಟ್ ಟ್ರೈಬರ್ ಎಂಪಿವಿ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, May 17, 2025, 15:04 [IST]
English summary
Renault triber mpv april 2025 sales details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+