ಅಗ್ಗದ 7-ಸೀಟರ್ ಕಾರಿದು.. 20 ಕಿ.ಮೀ ಮೈಲೇಜ್, ಈ ರೆನಾಲ್ಟ್ ಎಂಪಿವಿಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!

ರೆನಾಲ್ಟ್ ಟ್ರೈಬರ್ (Renault Triber) ಪ್ರಮುಖ ಎಂಪಿವಿಯಾಗಿ ಹೊರಹೊಮ್ಮಿದೆ. ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಸೆಪ್ಟೆಂಬರ್ ತಿಂಗಳಲ್ಲೂ ಇದೇ 'ಟ್ರೈಬರ್' ಕಾರು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 2,587 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಣೆ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 1,538 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿಸಂಖ್ಯೆಯನ್ನು ವಿಶ್ಲೇಷಣೆ ಮಾಡಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 68.21% ಪ್ರಗತಿಯಾಗಿದೆ.

'ರೆನಾಲ್ಟ್ ಟ್ರೈಬರ್' ವಿಶೇಷತೆಗಳೇನು:

ಈ ಎಂಪಿವಿಯು ಅತಿ ಕಡಿಮೆ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದ್ದು, ಎಲ್ಲ ವರ್ಗದ ಗ್ರಾಹಕರಿಗೂ ಸುಲಭವಾಗಿ ಕೈಗೆಟುಕುತ್ತದೆ. ರೂ.5.76 ಲಕ್ಷದಿಂದ ರೂ.8.60 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಆಥೆಂಟಿಕ್, ಎವಲ್ಯೂಷನ್, ಟೆಕ್ನೋ & ಎಮೋಷನ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ.

Renault Triber Mpv September 2025 Sales 68 Percent Growth Details

ಇದು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಉತ್ತಮವಾದ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು ಮತ್ತು 15 ಇಂಚಿರುವ ವೀಲ್‌ಗಳನ್ನು ಒಳಗೊಂಡಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಹಾಗೂ ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಟ್ರೈಬರ್' ಕೊಂಚ ದೊಡ್ಡ ಗಾತ್ರದಲ್ಲಿರುವ ಎಂಪಿವಿಯಾಗಿದೆ. 3,985 ಮಿ.ಮೀ ಉದ್ದ, 1,739 ಮಿ.ಮೀ ಅಗಲ ಮತ್ತು 1,643 ಮಿ.ಮೀ ಎತ್ತರವಿದೆ. 182 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,636 ವೀಲ್‌ಬೇಸ್‌ನ್ನು ಹೊಂದಿದೆ. ಬರೋಬ್ಬರಿ 947 ಕೆಜಿ ತೂಕವಿದೆ.

ಈ ಕಾರು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌, 72 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 96 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ.

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಜಾಸ್ತಿ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 84 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 1 ಲೀ. ಪೆಟ್ರೋಲ್‌ಗೆ 20 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 140 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 16.72 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ 'ಟ್ರೈಬರ್' ಹತ್ತಾರು ಅತ್ಯಾಕರ್ಷಕವಾದ ವೈಶಿಷ್ಟ್ಯಗಳನ್ನು ಪಡೆದಿದೆ. ವಿಶೇಷವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8 ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಮ್ಯಾನುವಲ್ ಎಸಿ, ಕೀಲೆಸ್ ಎಂಟ್ರಿ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 6-ಸ್ಪೀಕರ್ ಸೌಂಡ್ ಸಿಸ್ಟಮ್‌ನ್ನು ಒಳಗೊಂಡಿದೆ.

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೆಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಒಟ್ಟಾರೆಯಾಗಿ, 'ರೆನಾಲ್ಟ್ ಟ್ರೈಬರ್' ಕಮ್ಮಿ ದರದಲ್ಲಿ ಖರೀದಿಗೆ ಲಭ್ಯವಿರುವುದರಿಂದ ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗಿದೆ. ಅದೇ ರೀತಿಯಲ್ಲಿ ಎಂಪಿವಿ ವಿಭಾಗದಲ್ಲಿ ಇದಕ್ಕಿಂದ ಅಗ್ಗದ ಬೆಲೆಗೆ ಮತ್ತೊಂದು ಕಾರು ಸಿಗುವುದಿಲ್ಲ ಎಂದು ಹೇಳಿದರೂ ತಪ್ಪಾಗುವುದಿಲ್ಲ. ಈ ಅಕ್ಟೋಬರ್ ತಿಂಗಳಲ್ಲೂ 'ಟ್ರೈಬರ್' ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡಿರುವ ನಿರೀಕ್ಷೆಯಿದೆ.

Article Published On: Tuesday, October 21, 2025, 16:52 [IST]
English summary
Renault triber mpv september 2025 sales 68 percent growth details
Read more on renault india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+