Tata: ದೇಶದ ಸುರಕ್ಷಿತ ಎಲೆಕ್ಟ್ರಿಕ್ ಕಾರು: 5-ಸ್ಟಾರ್ ರೇಟಿಂಗ್... 10 ಲಕ್ಷಕ್ಕೆ ಬೆಸ್ಟ್ ಇವಿ!
ಭಾರತದಲ್ಲಿ ವಾಹನದ ಗುಣಮಟ್ಟದ ಬಗ್ಗೆ ಖರೀದಿದಾರರಲ್ಲಿ ಆಸಕ್ತಿ ಹೆಚ್ಚಾಗಿದ್ದು, ಸುರಕ್ಷತಾ ರೇಟಿಂಗ್ ಎಂಬುದು ಕಾರು ಖರೀದಿಸುವ ಮುನ್ನ ಪ್ರಮುಖ ಚರ್ಚೆಯ ವಿಷಯವಾಗಿ ಹೊರಹೊಮ್ಮಿದೆ. ನೀವೂ ಸಹ 10 ಲಕ್ಷ ರೂ.ಗಿಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಯೋಚಿಸುತ್ತಿದ್ದರೆ ಈ ಮಾರ್ಗದರ್ಶಿ ನಿಮಗೆ ಸೂಕ್ತವಾಗಿದೆ. ರೂ. 10 ಲಕ್ಷ ಬಜೆಟ್ ಅಡಿಯಲ್ಲಿ ಭಾರತ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟ್ ರೇಟಿಂಗ್‌ಗಳ ಪ್ರಕಾರ ಭಾರತದ ಸುರಕ್ಷಿತ ಕಾರನ್ನು ಕೆಳಗೆ ಪಟ್ಟಿ ಮಾಡಲಾಗಿದೆ. ಇದು ಟಾಟಾ ಮೋಟಾರ್ಸ್ (Tata Motors) ನೀಡುವ ಅತ್ಯಂತ ಸುರಕ್ಷಿತ ಇವಿ ಕಾರಾಗಿದೆ.
ಟಾಟಾ ಪಂಚ್: ನೀವು ಚಾಲನಾ ವೆಚ್ಚದ ಬಗ್ಗೆ ಜಾಗೃತರಾಗಿದ್ದರೆ ಮತ್ತು ಸುರಕ್ಷತ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಬಯಸಿದರೆ ರೂ. 9.99 ಲಕ್ಷ (ಎಕ್ಸ್-ಶೋರೂಂ) ದಿಂದ ಪ್ರಾರಂಭವಾಗುವ ಟಾಟಾ ಪಂಚ್ ಇವಿಯನ್ನು ಪರಿಗಣಿಸಬಹುದು. ಈ ಕಾಂಪ್ಯಾಕ್ಟ್ ಎಲೆಕ್ಟ್ರಿಕ್ ಎಸ್‌ಯುವಿ ವಯಸ್ಕ ಪ್ರಯಾಣಿಕರ ರಕ್ಷಣೆಯಲ್ಲಿ32 ಅಂಕಗಳಲ್ಲಿ 31.46 ಅಂಕಗಳನ್ನು ಮತ್ತು ಮಕ್ಕಳ ಪ್ರಯಾಣಿಕರ ರಕ್ಷಣೆಯಲ್ಲಿ 49 ರಲ್ಲಿ 45 ಅಂಕಗಳನ್ನು ಪಡೆದುಕೊಂಡಿದೆ.

ಮುಂಭಾಗದ ಆಫ್‌ಸೆಟ್ ಡಿಫಾರ್ಮೇಬಲ್ ತಡೆಗೋಡೆ ಪರೀಕ್ಷೆಯಲ್ಲಿ, ಪಂಚ್ ಇವಿ 16 ಅಂಕಗಳಲ್ಲಿ 14.26 ಅಂಕಗಳನ್ನು ಗಳಿಸಿ ಒಟ್ಟಾರೆ 5-ಸ್ಟಾರ್ ಸುರಕ್ಷತಾ ರೇಟಿಂಗ್ ದಕ್ಕಿಸಿಕೊಂಡಿದೆ. ಜೊತೆಗೆ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನ ಎಂಟ್ರಿ ಲೆವೆಲ್ ವೇರಿಯೆಂಟ್ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ರೋಲ್-ಓವರ್ ಮಿಟಿಗೇಶನ್ ಸೇರಿದಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.
ಇತರೆ ಟಾಪ್ ಎಂಡ್ ವೇರಿಯೆಂಟ್‌ಗಳು ಹೆಚ್ಚುವರಿಯಾಗಿ 360 - ಡಿಗ್ರಿ ಕ್ಯಾಮೆರಾ, ಬ್ಲೈಂಡ್ ಸ್ಪಾಟ್ ಮಾನಿಟರಿಂಗ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ ಹಿಲ್ ಡಿಸೆಂಟ್ ಕಂಟ್ರೋಲ್‌ನ್ನು ಪಡೆದಿವೆ. ಹೊಸ ಟಾಟಾ ಪಂಚ್ ಇವಿ ರೂ. 9.99 ಲಕ್ಷ ಲಕ್ಷದಿಂದ ರೂ. 14.29 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಹೊಸ ಟಾಟಾ ಪಂಚ್ ಇವಿ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಏರ್ ಪ್ಯೂರಿಫೈಯರ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಇನ್ಫೋಟೈನ್‌ಮೆಂಟ್ & ಇನ್‌ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್ಪ್ಲೇಗಳು (10.25-ಇಂಚು), ಆಂಡ್ರಾಯ್ಡ್ ಆಟೋ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಂಬಿಯೆಂಟ್ ಲೈಟಿಂಗ್, ಸನ್‌ರೂಫ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ.
ಸ್ಮಾರ್ಟ್, ಸ್ಮಾರ್ಟ್ ಪ್ಲಸ್, ಅಡ್ವೆಂಚರ್ ಹಾಗೂ ಎಂಪವರ್ಡ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಹೊಂದಿದೆ. ಟಾಟಾ ಪಂಚ್ ಇವಿ ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಇದರ 35 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಸಿಂಗಲ್ ಚಾರ್ಜ್‌ನಲ್ಲಿ ಚಾರ್ಜ್‌ನಲ್ಲಿ 365 ಕಿಲೋಮೀಟರ್‌ವರೆಗೂ ಓಡಬಲ್ಲದು. ಇದರ ಪವರ್‌ಫುಲ್ ಮೋಟಾರ್ 122 ಪಿಎಸ್ ಪವರ್ ಹಾಗೂ 190 ಎನ್‌ಎಮ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದೆಡೆ 25 ಕಿಲೋ ವ್ಯಾಟ್ ಸಾಮರ್ಥ್ಯದ ಬ್ಯಾಟರಿಯು ಸಿಂಗಲ್ ಚಾರ್ಜ್‌ನಲ್ಲಿ 265 ಕಿಲೋಮೀಟರ್‌ವರೆಗೂ ರೇಂಜ್ ನೀಡುತ್ತದೆ. ಇದರ ಎಲೆಕ್ಟ್ರಿಕ್ ಮೋಟಾರ್, 82 ಪಿಎಸ್ ಪವರ್ ಮತ್ತು 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಹೊಸ ಟಾಟಾ ಪಂಚ್ ಎಲೆಕ್ಟ್ರಿಕ್ ಕಾರಿನ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಮೆಂಟ್‌ನಲ್ಲಿ ತಿಳಿಸಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications