kia: ಕೊರಿಯಾ ಪವರ್ ತೋರಿಸಲು ಕಿಯಾ ಸಿದ್ಧತೆ.. ಶೀಘ್ರ ಹೊಸ ಕಾರು ಬಿಡುಗಡೆ, ಬೆಲೆ ಇಷ್ಟೇನಾ.. ವಿಶೇಷತೆಗಳೇನು?

ದಕ್ಷಿಣ ಕೊರಿಯಾ ಮೂಲದ ಕಿಯಾ ಮೋಟಾರ್ಸ್ (kia motors), ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಹೊರಹೊಮ್ಮಿದೆ. ಭಾರತದ ಮಾರುಕಟ್ಟೆಯಲ್ಲಿ 'ಸೆಲ್ಟೋಸ್' ಎಸ್‌ಯುವಿಯನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಇದೇ ಕಾರನ್ನು ಹೊಸ ರೂಪದಲ್ಲಿ ಬಿಡುಗಡೆಗೊಳಿಸಲು ಕಂಪನಿಯು ತಯಾರಿ ಮಾಡಿಕೊಳ್ಳುತ್ತಿದೆ. 2ನೇ ತಲೆಮಾರಿನ 'ಸೆಲ್ಟೋಸ್'ನ್ನು ಬುಧವಾರ (ಡಿ.10) ಅಂತರರಾಷ್ಟ್ರೀಯ ಮಟ್ಟದಲ್ಲಿ ಅನಾವರಣಗೊಳಿಸಲಿದೆ. ಬನ್ನಿ.. ಈ ಕಾರಿನ ನಿರೀಕ್ಷಿತ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ನೂತನ ಕಿಯಾ ಸೆಲ್ಟೋಸ್ (Kia Seltos), ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನಿರೀಕ್ಷೆಯಿದೆ. ಪ್ರಸ್ತುತವಿರುವ 'ಸೆಲ್ಟೋಸ್'ಗಿಂತ ಪ್ರೀಮಿಯಂ ಆಗಿರಲಿದೆ. ರೂ.11.25 ಲಕ್ಷ (ಎಕ್ಸ್-ಶೋರೂಂ) ಪರಿಚಯಾತ್ಮಕ ದರವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಜೊತೆಗೆ ಆಕರ್ಷಕವಾದ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಾಗುವ ಸಾಧ್ಯತೆಯಿದೆ.

Second Generation Kia Seltos Launch Soon Expected Price Design Engine Features Details

ಹೊಸ ಕಾರು ಹೊರಭಾಗದಲ್ಲಿ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿರಲಿದೆ. ಈಗಾಗಲೇ, 2 ಬೇರೆ-ಬೇರೆ ಟೀಸರ್‌ಗಳಿಂದ ಅದು ದೃಢಪಟ್ಟಿದೆ. ನವೀನವಾದ ಬಂಪರ್, 'ಟೈಗರ್ ಫೇಸ್' ಫ್ರಂಟ್ ಗ್ರಿಲ್, ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳು, ಇಂಟಿಗ್ರೇಟೆಡ್ ಸ್ಪಾಯ್ಲರ್, ಗ್ಲೋಸ್ ಬ್ಲ್ಯಾಕ್ ವೀಲ್ ಆರ್ಚ್ ಕ್ಲಾಡಿಂಗ್ ಹಾಗೂ ಶಾರ್ಕ್-ಫಿನ್ ಆಂಟೆನಾವನ್ನು ಒಳಗೊಂಡಿದೆ.

ಇದು ಹೆಚ್ಚು ವಿಶಾಲ ಗಾತ್ರದಲ್ಲಿರಲಿದೆ. 4,365 ಮಿ.ಮೀ ಉದ್ದ, 1,800 ಮಿ.ಮೀ ಅಗಲ ಮತ್ತು 1,645 ಮಿ.ಮೀ ಎತ್ತರವಿರಲಿದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,610 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿರುವ ನಿರೀಕ್ಷೆಯಿದೆ.

Second Generation Kia Seltos Launch Soon Expected Price Design Engine Features Details

ಈ ಕಾರು, ಸ್ಟ್ಯಾಂಡರ್ಡ್ 'ಸೆಲ್ಟೋಸ್'ನಂತೆ 5 ಆಸನಗಳನ್ನು ಪಡೆದರಲಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 433 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ಎರಡನೇ ತಲೆಮಾರಿನ ಕಿಯಾ ಸೆಲ್ಟೋಸ್ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿರಲಿದೆ. ಈಗಿರುವ 'ಸೆಲ್ಟೋಸ್'ನಂತೆ 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿರಲಿದೆ. ಇದರೊಂದಿಗೆ 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ ಆಯ್ಕೆಯನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ.

ಇದರ ಕ್ಯಾಬಿನ್ ವಿನ್ಯಾಸವು ಚೆನ್ನಾಗಿರಲಿದೆ. ಸೈರಸ್ ಕಾರಿನಂತೆ ಇನ್ಫೋಟೈನ್‌ಮೆಂಟ್‌ ಸಿಸ್ಟಮ್ - ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್‌ ಸೆಟಪ್, ಡುಯಲ್ ಜೋನ್ ಎಸಿ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, 8 ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್, ಸನ್‌ರೂಫ್‌ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.

ನೂತನ 'ಕಿಯಾ ಸೆಲ್ಟೋಸ್' ಸುರಕ್ಷತೆಗೂ ಹೆಸರುವಾಸಿಯಾಗಿರಲಿದ್ದು, ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಅದಕ್ಕಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿರುವ ಸಾಧ್ಯತೆಯಿದೆ.

ಇದಕ್ಕೆ ಸಾಲು - ಸಾಲು ಎದುರಾಳಿಯಾಗಿವೆ. ಹ್ಯುಂಡೈ ಕ್ರೆಟಾ, ಟಾಟಾ ಸಿಯೆರಾ, ಮಾರುತಿ ಸುಜುಕಿ ವಿಕ್ಟೋರಿಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಅರ್ಬನ್ ಕ್ರೂಸರ್ ಹೈ ರೈಡರ್ ಹಾಗೂ ಹೋಂಡಾ ಎಲಿವೇಟ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ.

ಒಟ್ಟಾರೆ, ದೇಶೀಯವಾಗಿ 2ನೇ ತಲೆಮಾರಿನ ಕಿಯಾ ಸೆಲ್ಟೋಸ್ ಎಸ್‌ಯುವಿಯು 2026ರ ಶುರುವಿನಲ್ಲಿಯೇ ಅದ್ದೂರಿಯಾಗಿ ಬಿಡುಗಡೆಯಾಗಬಹುದು ಎನ್ನಲಾಗದೆ. ಇದು ಮಾರಾಟಕ್ಕೆ ಮಾರಾಟಕ್ಕೆ ಬಂದ ಮೇಲೆ ಖರೀದಿದಾರರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದುನೋಡಬೇಕಾಗಿದೆ.

More from DriveSpark

Article Published On: Sunday, December 7, 2025, 16:10 [IST]
English summary
Second generation kia seltos launch soon expected price design engine features details
Read more on kia motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+