ಸ್ಕೋಡಾಗೆ ಜೊತೆಯಾದ ಖ್ಯಾತ ನಟ.. ಕೈಲಾಕ್ ಕಾರಿನ ಯಶಸ್ಸಿನ ಬಳಿಕ ಕಂಪನಿಗೆ ಹೊಸ ಹುರುಪು!
ಭಾರತ ವಿಶ್ವದಲ್ಲಿಯೇ ಅತಿದೊಡ್ಡ ಕಾರು ಮಾರುಕಟ್ಟೆಯನ್ನು ಹೊಂದಿದೆ. ಸ್ಕೋಡಾ ಆಟೋ ಇಂಡಿಯಾ (Skoda Auto India) ಸಹ ಹೆಚ್ಚಿನ ಪ್ರಾಬಲ್ಯವನ್ನು ಸಾಧಿಸಲು ಕಾರ್ಯಪ್ರವೃತವಾಗಿದೆ. ಅದರ ಭಾಗವಾಗಿ ಬಾಲಿವುಡ್ ಖ್ಯಾತ ನಟ ರಣವೀರ್ ಸಿಂಗ್ (Ranveer Singh) ಅವರನ್ನು ಕಂಪನಿಯ ಮೊದಲ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳಲಾಗಿದೆ. ದೇಶದಲ್ಲಿ ಸ್ಕೋಡಾ ಕಳೆದ 23 ವರ್ಷಗಳಿಂದಲೂ ಕಾರ್ಯಾಚರಣೆ ನಡೆಸುತ್ತಿದೆ. ಇತ್ತೀಚೆಗೆ ಹೊಚ್ಚ ಹೊಸ ಸಬ್-4 ಮೀಟರ್ ಎಸ್‌ಯುವಿ 'ಕೈಲಾಕ್' ಯಶಸ್ಸು ಕಂಪನಿಗೆ ಹೊಸ ಹುರುಪನ್ನು ತಂದುಕೊಟ್ಟಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ರಣವೀರ್ ಸಿಂಗ್ ಅವರು, 'ಸ್ಕೋಡಾ ಆಟೋ ಇಂಡಿಯಾದ ಮೊಟ್ಟ ಮೊದಲ ರಾಯಭಾರಿಯಾಗುವುದು ನನಗೆ ಅತೀವ ಸಂತೋಷವನ್ನು ತಂದುಕೊಟ್ಟಿದೆ. ದೇಶೀಯವಾಗಿ ಕಂಪನಿಯ ಪ್ರಗತಿಗೆ ಹೆಚ್ಚಿನ ಕೊಡುಗೆ ನೀಡಲು ನಾನು ಎದುರು ನೋಡುತ್ತಿದ್ದೇನೆ' ಎಂದು ಹೇಳಿದ್ದಾರೆ.

ನಟ ರಣವೀರ್ ಸಿಂಗ್ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿಯೊಂದಿಗಿರುವ ಜಾಹೀರಾತು ಅತಿ ಶೀಘ್ರದಲ್ಲೇ ಪ್ರದರ್ಶನಗೊಳ್ಳಲಿದೆ. ನೂತನ ಕೈಲಾಕ್ ಕಾರಿನ ಕುರಿತಂತೆ ಹೇಳುವುದಾದರೆ, ಇದು ರೂ.7.89 ಲಕ್ಷದಿಂದ ರೂ.14.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 15 ರಿಂದ 18 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ.
ನೂತನ ಸ್ಕೋಡಾ ಕೈಲಾಕ್ ಎಸ್‌ಯುವಿ 5 ಆಸನಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್, ಕೀಲೆಸ್ ಎಂಟ್ರಿ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಸ್ಕೋಡಾ ಕಂಪನಿಯು 'ಕುಶಾಕ್' ಕಾರನ್ನು ಮಾರಾಟ ಮಾಡುತ್ತದೆ. ಇದು ರೂ.10.89 ಲಕ್ಷದಿಂದ ರೂ.18.79 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದೆ. 18.09 ರಿಂದ 19.76 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಸ್ಕೋಡಾ ಸ್ಲಾವಿಯಾ ಬಗ್ಗೆ ಮಾತನಾಡುವುದಾದರೆ, ಇದೊಂದು ಸೆಡಾನ್ ಆಗಿದೆ. ರೂ.10.69 ಲಕ್ಷದಿಂದ ರೂ.18.69 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಪಡೆದಿದೆ. 1-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಕಡೆಯದಾಗಿ ಸ್ಕೋಡಾ ಕೊಡಿಯಾಕ್ ಕಾರಿನ ಕುರಿತಂತೆ ಮಾತನಾಡುವುದಾದರೆ, ಇದು ರೂ.40.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಪಡೆದಿದ್ದು, 13.32 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 7 ಜನರು ಪ್ರಯಾಣ ಮಾಡಬಹುದು. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








