Skoda: ಸ್ಕೊಡಾದಿಂದ 25,000 ಕಾರುಗಳ ಹಿಂತೆಗೆತ ಘೋಷಣೆ.. ಕಾರಣವೇನು?

ಸ್ಕೋಡಾ ಆಟೋ ಇಂಡಿಯಾ (Skoda Auto India) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಸದ್ಯ, ನಿರ್ದಿಷ್ಟ ಅವಧಿಯಲ್ಲಿ ಉತ್ಪಾದಿಸಿದ ಸ್ಲಾವಿಯಾ, ಕುಶಾಕ್ ಹಾಗೂ ಕೈಲಾಕ್ ಕಾರುಗಳಲ್ಲಿ ಸ್ವಲ್ಪ ಮಟ್ಟಿಗೆ ಸಂಭಾವ್ಯ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದಾಗಿ ಈ ಮಾಡೆಲ್‌ಗಳ ಬರೋಬ್ಬರಿ 25,000 ಯುನಿಟ್‌ಗಳನ್ನು ವಾಪಸ್ ಪಡೆಯಲು ಕಂಪನಿಯು ತೀರ್ಮಾನಿಸಿದೆ ಎಂದು ವರದಿಯಾಗಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಸ್ಲಾವಿಯಾ, ಕುಶಾಕ್ ಮತ್ತು ಕೈಲಾಕ್ ಕಾರುಗಳ ಹಿಂಬದಿಯ ಸೀಟ್‌ನಲ್ಲಿ ತೊಂದರೆ ಕಂಡುಬಂದಿದೆ. ಒಂದೊಮ್ಮೆ ಅಪಘಾತವಾದರೆ, ಹಿಂಭಾಗದ ಸೀಟ್‌ಬೆಲ್ಟ್ ಬಕಲ್ ಲ್ಯಾಚ್ ಪ್ಲೇಟ್ ಮುರಿದು ಹೋಗಿ, ಪ್ರಯಾಣಿಕರಿಗೆ ಗಾಯಗಳಾಗಬಹುದು. ಈ ತೊಂದರೆಯನ್ನು ಸರಿಪಡಿಸಲು ಸ್ಕೋಡಾ ಕಂಪನಿಯು ಈ ನಿರ್ಧಾರಕ್ಕೆ ಬಂದಿದೆ ಎಂಬ ವಿಚಾರವು ಗೊತ್ತಾಗಿದೆ.

Skoda Kushaq Slavia Kylaq Cars 25 000 Units Recalled In India Details

ಸ್ಕೋಡಾ ಆಟೋ, ಮೇ 24, 2024 ರಿಂದ ಏಪ್ರಿಲ್ 1, 2025ರ ಅವಧಿಯಲ್ಲಿ ತಯಾರಿಸಲಾದ ಸ್ಲಾವಿಯಾ, ಕುಶಾಕ್ ಹಾಗೂ ಕೈಲಾಕ್ ಕಾರುಗಳನ್ನು ಹಿಂಪಡೆಯಲಿದೆ. ಸಮಸ್ಯೆ ಒಳಗಾಗಿರುವ ಕಾರು ಮಾಲೀಕರನ್ನು ಕಂಪನಿಯೇ ಸಂಪರ್ಕಿಸಲಿದ್ದು, ಯಾವುದೇ ಶುಲ್ಕವಿಲ್ಲದೆ ರಿಪೇರಿ ಮಾಡಿಕೊಡುವ ಸಾಧ್ಯತೆಯೂ ಇದೆ.

ಸ್ಕೋಡಾ ಕಾರುಗಳ ವಿಶೇಷತೆಗಳೇನು..

ಸ್ಕೋಡಾ ಕುಶಾಕ್ (Skoda Kushaq): ಇದೊಂದು ಎಸ್‌ಯುವಿಯಾಗಿದೆ. ರೂ.10.99 ಲಕ್ಷದಿಂದ ರೂ.19.01 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಪೆಟ್ರೋಲ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 18.09 ರಿಂದ 19.76 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Skoda Kushaq Slavia Kylaq Cars 25 000 Units Recalled In India Details

ಈ ಸ್ಕೋಡಾ ಕುಶಾಕ್ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 8-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸಿಂಗಲ್ ಪೇನ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಸ್ಕೋಡಾ ಸ್ಲಾವಿಯಾ (Skoda Slavia): ಈ ಸೆಡಾನ್ ರೂ.10.34 ಲಕ್ಷದಿಂದ ರೂ.18.24 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. 1.0-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 18.73 ರಿಂದ 20.32 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10-ಇಂಚಿನ ಇನ್ಪೋಟೈನ್‌ಮೆಂಟ್ ಸಿಸ್ಟಮ್, ಎಲೆಕ್ಟ್ರಿಕ್ ಸನ್‌ರೂಫ್, ವೈರ್‌ಲೆಸ್ ಚಾರ್ಜರ್ ಕೀಲೆಸ್ ಎಂಟ್ರಿ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸ್ಕೋಡಾ ಕೈಲಾಕ್ (Skoda Kylaq): ಇದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.7.89 ಲಕ್ಷದಿಂದ ರೂ.14.40 ಎಕ್ಸ್-ಶೋರೂಂ ದರವನ್ನು ಪಡೆದಿದೆ. 1.0-ಲೀಟರ್ ಪೆಟ್ರೋಲ್ ಎಂಜಿನ್‌ ಹೊಂದಿದ್ದು, 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Wednesday, April 30, 2025, 19:50 [IST]
English summary
Skoda kushaq slavia kylaq cars 25000 units recalled in india details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+