ಬಿಡುಗಡೆಯಾಗಿ ಇನ್ನೂ 6 ತಿಂಗಳು ಕಳೆದಿಲ್ಲ.. ಅಗ್ಗದ Kia & Skoda ಎಸ್‌ಯುವಿಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್!
ದೇಶೀಯ ಮಾರುಕಟ್ಟೆಯಲ್ಲಿ ಕೆಲವೇ ತಿಂಗಳ ಅಂತರದಲ್ಲಿ ಹೊಚ್ಚ ಹೊಸ ಸ್ಕೋಡಾ ಕೈಲಾಕ್ (Skoda Kylaq) ಹಾಗೂ ಕಿಯಾ ಸೈರಸ್ (Kia Syros) ಕಾರುಗಳನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಯಿತು. ಇವೆರೆಡು ಕಾಂಪ್ಯಾಕ್ಟ್ ಎಸ್‌ಯುವಿಗಳಿದ್ದು, ಗ್ರಾಹಕರಿಂದಲೂ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರತಿ ತಿಂಗಳು ಹೆಚ್ಚಿನ ಸಂಖ್ಯೆಯಲ್ಲಿಯೇ ಮಾರಾಟಗೊಳುತ್ತಿವೆ. ಅದಕ್ಕೆ ಈ 'ಮೇ' ಕೂಡ ಹೊರತಾಗಿಲ್ಲ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಸ್ಕೋಡಾ ಕೈಲಾಕ್ ಮಾರಾಟದ ಅಂಕಿಅಂಶ..
ಕಳೆದ ತಿಂಗಳು (ಮೇ-2025) ಸ್ಕೋಡಾ ಕಂಪನಿಯು ಒಟ್ಟು 4,949 ಯುನಿಟ್ 'ಕೈಲಾಕ್' ಎಸ್‌ಯುವಿಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸಿದೆ. ಈ ವರ್ಷದ ಮೊದಲ 4 ತಿಂಗಳಲ್ಲೂ 'ಕೈಲಾಕ್'ಕಾರುಗಳನ್ನು ಭಾರೀ ಸಂಖ್ಯೆಯಲ್ಲಿ ಮಾರಾಟ ಮಾಡಲಾಗಿದೆ. ಏಪ್ರಿಲ್‌ನಲ್ಲಿ 5,364 ಯುನಿಟ್, ಮಾರ್ಚ್‌ನಲ್ಲಿ 5,327 ಯುನಿಟ್, ಫೆಬ್ರವರಿಯಲ್ಲಿ 3,636 ಯುನಿಟ್ ಹಾಗೂ ಜನವರಿಯಲ್ಲಿ 1,242 ಯುನಿಟ್‌ಗಳು ಮಾರಾಟವಾಗಿವೆ.

ಸ್ಕೋಡಾ ಕೈಲಾಕ್ ವಿಶೇಷತೆಗಳನು...
ಈ ಎಸ್‌ಯುವಿಯನ್ನು 2024ರ ಡಿಸೆಂಬರ್‌ನಲ್ಲಿ ಮಾರಾಟಕ್ಕೆ ತರಲಾಯಿತು. ಈ ಕಾರು ರೂ.8.25 ಲಕ್ಷದಿಂದ ರೂ.13.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 446 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.0-ಲೀ. ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಕಿಯಾ ಸೈರಸ್ ಮಾರಾಟದ ಅಂಕಿ ಅಂಶ..
ಹೋದ ತಿಂಗಳು (ಮೇ-2025) ಕಿಯಾ ಮೋಟಾರ್ಸ್, ಸರಿ ಸುಮಾರು 3,611 ಯುನಿಟ್ 'ಸೈರಸ್' ಎಸ್‌ಯುವಿಗಳನ್ನು ಮಾರಾಟ ಮಾಡಿದೆ. ಹಾಗೆಯೇ ಏಪ್ರಿಲ್‌ನಲ್ಲಿ 4,000 ಯುನಿಟ್, ಮಾರ್ಚ್‌ನಲ್ಲಿ 5,015 ಯುನಿಟ್, ಫೆಬ್ರವರಿಯಲ್ಲಿ 5,425 ಯುನಿಟ್ ಮತ್ತು ಜನವರಿಯಲ್ಲಿ 5,546 ಯುನಿಟ್‌ಗಳನ್ನು ಯಶಸ್ವಿಯಾಗಿಯೂ ಮಾರಾಟಗೊಳಿಸಿದೆ.
ಕಿಯಾ ಸೈರಸ್ ವಿಶೇಷತೆಗಳೇನು..
ಇದೊಂದು ಎಸ್‌ಯುವಿಯಾಗಿದೆ. ರೂ.9.50 ಲಕ್ಷದಿಂದ ರೂ.17.80 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 465 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು, 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 21 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್ ಸೆಟಪ್, 8-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications