Skoda: ಸಖತ್ ಡಿಮ್ಯಾಂಡ್.. ಲಕ್ಸುರಿ ಫೀಚರ್ಸ್‌ನ ಸ್ಕೋಡಾ ಕೈಲಾಕ್ ಕಾರಿನ ಬೆಲೆಗಳು ಯಥಾಸ್ಥಿತಿಯಲ್ಲಿ ಮುಂದುವರಿಕೆ!

ಸ್ಕೋಡಾ ಆಟೋ ಇಂಡಿಯಾ (Skoda Auto India), ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿಯು ಮಾರಾಟಗೊಳಿಸುವ ಕೈಲಾಕ್ (Kylaq) ಜನಪ್ರಿಯ ಎಸ್‌ಯುವಿಯಾಗಿದೆ. ಕಳೆದ ವರ್ಷದ ನವೆಂಬರ್ ತಿಂಗಳಲ್ಲಿ ಆದ್ದೂರಿಯಾಗಿ ಬಿಡುಗಡೆಯಾದ ಈ ಕಾರಿಗೆ ಭಾರೀ ಬೇಡಿಕೆಯಿದ್ದು, ಗ್ರಾಹಕರು ಕೂಡ ತಾಮುಂದು - ನಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಸದ್ಯ, ಬಹುತೇಕ ವಾಹನ ತಯಾರಕ ಕಂಪನಿಗಳು ಎಲ್ಲ ಕಾರುಗಳ ಬೆಲೆಯನ್ನು ಏರಿಕೆ ಮಾಡಿವೆ. ಆದರೆ, ಸ್ಕೋಡಾ ಮಾತ್ರ ಕೈಲಾಕ್ ಎಸ್‌ಯುವಿ ದರವನ್ನು ಹೆಚ್ಚಿಸಿಲ್ಲ.

ದೇಶೀಯವಾಗಿ ಸ್ಕೋಡಾ ಆಟೋ ಇಂಡಿಯಾ, ನೂತನ ಕೈಲಾಕ್ ಕಾರನ್ನು ರೂ.7.89 ಲಕ್ಷದಿಂದ ರೂ.14.40 ಲಕ್ಷ ಎಕ್ಸ್-ಶೋರೂಂ ದರದಲ್ಲಿ ಮಾರಾಟಕ್ಕೆ ತಂದಿತ್ತು. ಈ ಪರಿಚಯಾತ್ಮಕ ಬೆಲೆಯೂ ಮೊದಲ 33,333 ಬುಕ್ಕಿಂಗ್‌ಗಳಿಗೆ ಮಾನ್ಯವಾಗಿರಲಿದೆ ಎಂದು ಘೋಷಣೆ ಮಾಡಿತ್ತು. ಈಗ ಇದೇ ದರದಲ್ಲಿ ಏಪ್ರಿಲ್ 30 ರವರೆಗೂ ಕೈಲಾಕ್ ಎಸ್‌ಯುವಿಯನ್ನು ಮಾರಾಟಗೊಳಿಸಲು ಕಂಪನಿಯು ನಿರ್ಧರಿಸಿದೆ.

Skoda Kylaq Introductory Price Extended Till April 30 Details

ಹೊಸ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ, ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಡುಯಲ್ ಪಾಡ್ ಎಲ್ಇಡಿ ಹೆಡ್‌ಲೈಟ್‌ಗಳು, ಬಟರ್‌ಫ್ಲೈ ಗ್ರಿಲ್, ಎಲ್ಇಡಿ ಡಿಆರ್‌ಎಲ್‌ಗಳು, ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್‌ ಹಾಗೂ 17-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಕಾರು ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಹಾಗೂ ಟೊರ್ನಾಡೊ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಕೊಂಡೊಯ್ಯಲು 446 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Skoda Kylaq Introductory Price Extended Till April 30 Details

ಸ್ಕೋಡಾ ಕೈಲಾಕ್ ಎಸ್‌ಯುವಿ ಶಕ್ತಿಯುತವಾದ 1.0-ಲೀ. ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 115 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 178 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಎಸ್‌ಯುವಿ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್, ಕೀಲೆಸ್ ಎಂಟ್ರಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Skoda Kylaq Introductory Price Extended Till April 30 Details

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಎಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ಚೈಲ್ಡ್ ಸೀಟ್ ಮೌಂಟ್‌ಗಳು, ಡಿಸ್ಕ್/ ಡ್ರಮ್‌ ಬ್ರೇಕ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, April 4, 2025, 8:25 [IST]
English summary
Skoda kylaq introductory price extended till april 30 details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+