8 ಲಕ್ಷ.. 18 Km ಮೈಲೇಜ್, 5-ಸೀಟರ್.. ಈ ಪೆಟ್ರೋಲ್ ಕಾರಿಗೆ ಫುಲ್ ಡಿಮ್ಯಾಂಡ್, ಶೋರೂಂ ಎಡತಾಕಿದ ಗ್ರಾಹಕರು!

ಸ್ಕೋಡಾ ಕೈಲಾಕ್ (Skoda Kylaq) ಪ್ರಮುಖ ಎಸ್‌ಯುವಿಯಾಗಿದೆ. ಈ ಕಾರನ್ನು ಕಳೆದ ಡಿಸೆಂಬರ್ 2 ರಂದು ಮಾರಾಟಕ್ಕೆ ತರಲಾಗಿತ್ತು. ಇದು ಉತ್ತಮವಾದ ವಿನ್ಯಾಸ ಹಾಗೂ ಹತ್ತಾರು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಬಜೆಟ್ ಬೆಲೆಯಲ್ಲಿಯೂ ಸಿಗಲಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿ ಮಾಡುತ್ತಿದ್ದಾರೆ. ಈ ಜೂನ್ ತಿಂಗಳಲ್ಲೂ 'ಕೈಲಾಕ್' ಕಾರು ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 3196 ಯುನಿಟ್‌ಗಳನ್ನು ಗ್ರಾಹಕರು ಖರೀದಿ ಮಾಡಿದ್ದಾರೆ.

ಇದೇ ವರ್ಷದ ಮೊದಲ 5 ತಿಂಗಳಲ್ಲೂ ಸ್ಕೋಡಾ ಕೈಲಾಕ್ ಎಸ್‌ಯುವಿಗಳು ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿವೆ. ಬರೋಬ್ಬರಿ 20,518 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಈ ಅಂಕಿ ಸಂಖ್ಯೆಯನ್ನು ಲೆಕ್ಕ ಹಾಕಿದಾಗ ಮಾಸಿಕ 4,103 ಯುನಿಟ್ ಕೈಲಾಕ್ ಕಾರುಗಳನ್ನು ಮಾರಲಾಗಿದೆ.

Skoda Kylaq June 2025 Sales Details

ಸ್ಕೋಡಾ ಕೈಲಾಕ್ ವಿಶೇಷತೆಗಳೇನು:

ನೂತನ ಸ್ಕೋಡಾ ಕೈಲಾಕ್ ಸ್ಪರ್ಧಾತ್ಮಕ ಬೆಲೆಯಲ್ಲಿ ಸಿಗಲಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ರೂ. 8.25 ಲಕ್ಷದಿಂದ ರೂ.13.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಕ್ಲಾಸಿಕ್, ಸಿಗ್ನೇಚರ್, ಸಿಗ್ನೇಚರ್ ಪ್ಲಸ್ ಹಾಗೂ ಪ್ರೆಸ್ಟೀಜ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಅದು ನೋಡುಗರ ಸೆಳೆಯುವಂತಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು, ಸ್ಲಿಮ್ಡ್-ಡೌನ್ ಗ್ರಿಲ್, ಬ್ಲ್ಯಾಕ್ ಕ್ಲಾಡಿಂಗ್ & ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್‌ನ್ನು ಹೊಂದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ & ಟೊರ್ನಾಡೊ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

Skoda Kylaq June 2025 Sales Details

ಇದು ಬಲಿಷ್ಠವಾದ ಪವರ್‌ಟ್ರೇನ್ ಆಯ್ಕೆಯನ್ನು ಒಳಗೊಂಡಿದೆ. 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 115 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) & 178 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 18 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 45 ಲೀಟರ್ ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ.

ನೂತನ ಕೈಲಾಕ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 446 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 3995 ಉದ್ದ, 1783 ಅಗಲ ಹಾಗೂ 1619 ಎತ್ತರವು ಇದೆ. 189 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 2566 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Skoda Kylaq June 2025 Sales Details

ಈ ಕಾರಿನ ಕ್ಯಾಬಿನ್ ವಿನ್ಯಾಸವು ತುಂಬಾ ಅಚ್ಚುಕಟ್ಟಾಗಿದೆ. 10-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಇಂಚಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಎಂಜಿನ್ ಸ್ಟಾರ್ಟ್-ಸ್ಟಾಪ್ ಬಟನ್, ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ಗಳು, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸಿಂಗಲ್-ಪೇನ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಕೀಲೆಸ್ ಎಂಟ್ರಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ.

ಹೊಸ ಕೈಲಾಕ್ ಎಸ್‌ಯುವಿಯು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

More from DriveSpark

Article Published On: Sunday, July 20, 2025, 9:00 [IST]
English summary
Skoda kylaq june 2025 sales details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+