Skoda Kylaq: ಐದು ಆಸನಗಳು, ಅತಿಕಡಿಮೆ ಬೆಲೆ.. ಸ್ಕೋಡಾ ಕೈಲಾಕ್ ಕಾರಿಗೆ 5-ಸ್ಟಾರ್ ಸೇಫ್ಟಿ ರೇಟಿಂಗ್!

ಸ್ಕೋಡಾ ಕೈಲಾಕ್ (Skoda Kylaq) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರನ್ನು ಡಿಸೆಂಬರ್ 2ರಂದು ಬಿಡುಗಡೆಗೊಳಿಸಲಾಗಿತ್ತು. ಇದರ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳಿಗೆ ಗ್ರಾಹಕರು ಕೂಡ ಮಾರುಹೋಗಿದ್ದರು. ಅದಕ್ಕೆ ತಕ್ಕಂತೆ ಬುಕ್ಕಿಂಗ್ ಆರಂಭಿಸಿದ ಕೇವಲ 10 ದಿನಗಳಲ್ಲಿ 10,000 ಖರೀದಿದಾರರು ಈ ಕಾರನ್ನು ಆರ್ಡರ್ ಮಾಡಿದ್ದರು. ಸದ್ಯ ದೇಶದ ವಾಹನಗಳಿಗೆ ಸುರಕ್ಷತಾ ಪರೀಕ್ಷೆ ನಡೆಸುವ ಸಂಸ್ಥೆ ಭಾರತ್ ಎನ್‌ಸಿಎಪಿ (Bharat NCAP) ಈ 'ಸ್ಕೋಡಾ ಕೈಲಾಕ್'ನ್ನು ಅತ್ಯಂತ ಸುರಕ್ಷಿತ ಕಾರೆಂದು ನಿರ್ಣಯಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ನೂತನ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ, ಭಾರತ್ ಎನ್‌ಸಿಎಪಿ ನಡೆಸಿದ ಸುರಕ್ಷತಾ ಪರೀಕ್ಷೆಯ ವಯಸ್ಕರ ರಕ್ಷಣೆ ವಿಭಾಗದಲ್ಲಿ (Adult Occupant Protection) 32ಕ್ಕೆ 30.88 ಅಂಕಗಳನ್ನು ಗಳಿಸಿದೆ. ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ ವಿಭಾಗದಲ್ಲಿ (Child Occupant Protection) 49ಕ್ಕೆ 45 ಅಂಕಗಳನ್ನು ಪಡೆದಿದೆ. ಈ ಮೂಲಕ 5-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ತನ್ನದಾಗಿಸಿಕೊಂಡಿದೆ.

Skoda Kylaq Suv Gets 5 Star Safety Rating In Bharat Ncap Test Details

ಭಾರತ್ ಎನ್‌ಸಿಎಪಿ ನಡೆಸಿದ ಎಲ್ಲ ರೀತಿಯ ಪರೀಕ್ಷೆಗಳಲ್ಲಿಯೂ 'ಸ್ಕೋಡಾ ಕೈಲಾಕ್' ಗಟ್ಟಿಮುಟ್ಟಾದ ಕಾರೆಂದು ಸಾಬೀತಾಗಿದೆ. ಈ ಎಸ್‌ಯುವಿ ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ಸಾಕಷ್ಟು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹೊಚ್ಚ ಹೊಸ ಸ್ಕೋಡಾ ಕೈಲಾಕ್ ಎಸ್‌ಯುವಿ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದು ರೂ.7.89 ಲಕ್ಷದಿಂದ ರೂ.14.40 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಕ್ಲಾಸಿಕ್, ಸಿಗ್ನೇಚರ್ ಹಾಗೂ ಪ್ರೆಸ್ಟೀಜ್ ಒಳಗೊಂಡಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ. ಜೊತೆಗೆ ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ & ಟೊರ್ನಾಡೊ ರೆಡ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

Skoda Kylaq Suv Gets 5 Star Safety Rating In Bharat Ncap Test Details

ಈ ಕೈಲಾಕ್ ಕಾರು, ಶಕ್ತಿಯುತವಾದ 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. ಇದು 115 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 178 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಸ್ಕೋಡಾ ಕೈಲಾಕ್ ಎಸ್‌ಯುವಿ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ತೆರಳಬಹುದು. ವಾರಾಂತ್ಯ ಮತ್ತು ರಜಾದಿನಗಳಲ್ಲಿ ಎಲ್ಲಿಯಾದರೂ ಪ್ರವಾಸಕ್ಕೆ ಹೋಗುವಾಗ ಸ್ವಲ್ಪ ಹೆಚ್ಚಿನ ಲಗೇಜ್ ಕೊಂಡೊಯ್ಯಲು ಸಾಧ್ಯವಾಗುವಂತೆ 446 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Skoda Kylaq Suv Gets 5 Star Safety Rating In Bharat Ncap Test Details

ಈ ಕಾರು ಯುವ ಗ್ರಾಹಕರನ್ನು ಸೆಳೆಯುವ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸಿಂಗಲ್-ಪೇನ್ ಸನ್‌ರೂಫ್, ಕೀಲೆಸ್ ಎಂಟ್ರಿ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, January 16, 2025, 10:21 [IST]
English summary
Skoda kylaq suv gets 5 star safety rating in bharat ncap test details
Read more on skoda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+