Skoda: ಚಿನ್ನದಂತಹ ಕಾರಿದು.. ಎಲ್ಲವು ಸೋಲ್ಡ್ ಔಟ್, ನೂತನ ಸ್ಕೋಡಾ ಸೆಡಾನ್ ವಿತರಣೆ ಶುರು.. ಖುಷಿಯಲ್ಲಿ ಗ್ರಾಹಕ!
'ಸ್ಕೋಡಾ' ಜನಪ್ರಿಯ ಕಾರು ತಯಾರಕ ಕಂಪನಿಯಾಗಿದೆ. ಭಾರತದಲ್ಲಿ 25ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ಅದರ ಸವಿನೆನಪಿಗಾಗಿ ಅಕ್ಟೋಬರ್‌ನಲ್ಲಿ ಹೊಚ್ಚ ಹೊಸ 'ಆಕ್ಟೇವಿಯಾ ಆರ್‌ಎಸ್' ಸೆಡಾನ್‌ನ್ನು ಬಿಡುಗಡೆಗೊಳಿಸಿತ್ತು. ದೇಶೀಯ ಮಾರುಕಟ್ಟೆಯಲ್ಲಿ ಬರೀ 100 ಯುನಿಟ್ ಕಾರುಗಳನ್ನು ಮಾತ್ರ ಕಂಪನಿಯು ಮಾರಾಟಗೊಳಿಸಲಿದೆ. ಈಗಾಗಲೇ ಎಲ್ಲವನ್ನು ಖರೀದಿದಾರರು ಬುಕ್ಕಿಂಗ್ ಮಾಡಿದ್ದಾರೆ. ಸದ್ಯ, ನೂತನ 'ಆಕ್ಟೇವಿಯಾ'ದ ವಿತರಣೆ ಶುರುವಾಗಿದೆ. ಗ್ರಾಹಕರು ಕೂಡ ಸಂಭ್ರಮದಿಂದಲೇ ಮನೆಗೆ ತೆಗೆದುಕೊಂಡು ಹೋಗಿದ್ದಾರೆ.
ಹೊಚ್ಚ ಹೊಸ ಸ್ಕೋಡಾ ಆಕ್ಟೇವಿಯಾ ಆರ್‌ಎಸ್ (Skoda Octavia RS) ಸೆಡಾನ್, ಸ್ವಲ್ಪ ಮಟ್ಟಿಗೆ ದುಬಾರಿ ಬೆಲೆಯನ್ನು ಹೊಂದಿದೆ. ರೂ.49.99 ಲಕ್ಷ (ಎಕ್ಸ್-ಶೋರೂಂ - ನವದೆಹಲಿ) ದರವನ್ನು ಪಡೆದಿದ್ದು, ಶ್ರೀಮಂತ ವರ್ಗದ ಖರೀದಿದಾರರ ನೆಚ್ಚಿನ ಕಾರಾಗಿಯೂ ಹೊರಹೊಮ್ಮಿದೆ.

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಡುಯಲ್ ಪಾಡ್ ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಬಾಡಿ ಕಲರ್ ಡೋರ್ ಹ್ಯಾಂಡಲ್‌ಗಳು, ಶಾರ್ಕ್ ಫಿನ್ ಆಂಟೆನಾ, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಹಾಗೂ 19 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಮಾಂಬಾ ಗ್ರೀನ್, ಮ್ಯಾಜಿಕ್ ಬ್ಲ್ಯಾಕ್, ಕ್ಯಾಂಡಿ ವೈಟ್, ರೇಸ್ ಬ್ಲೂ ಹಾಗೂ ವೆಲ್ವೆಟ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ 'ಸ್ಕೋಡಾ ಆಕ್ಟೇವಿಯಾ ಆರ್‌ಎಸ್' ಸಾಕಷ್ಟು ದೊಡ್ಡ ಗಾತ್ರದಲ್ಲಿದೆ. 4,709 ಎಂಎಂ ಉದ್ದ, 1,829 ಎಂಎಂ ಅಗಲ ಮತ್ತು 1,457 ಎಂಎಂ ಎತ್ತರವಿದೆ. 128 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,677 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1,528 ಕೆಜಿ ತೂಕವಿದೆ.
ಈ ಕಾರು ವಿಶಾಲವಾಗಿರುವ 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ದೂರದ ಊರುಗಳಿಗೆ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ & ರಜಾ ದಿನಗಳಲ್ಲಿ ಪ್ರವಾಸಕ್ಕೆ ತೆರಳುವ ಸಂದರ್ಭದಲ್ಲಿ ಹೆಚ್ಚಿನ ಲಗೇಜ್ ಕೊಂಡೊಯ್ಯಲು 600 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.
ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 2-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 15.81 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 50 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ. 250 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 6.4 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಹೊಸ 'ಸ್ಕೋಡಾ ಆಕ್ಟೇವಿಯಾ' ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. ಬ್ಲ್ಯಾಕ್ ಕಲರ್ ಥೀಮ್ ಒಳಗೊಂಡಿದ್ದು, ಸ್ಪೋರ್ಟ್ ಸೀಟ್‌ಗಳನ್ನು ಹೊಂದಿದೆ. 13 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 3 ಜೋನ್ ಕ್ಲೇಮೇಟ್ ಕಂಟ್ರೋಲ್, 12 ಸ್ಪೀಕರ್ ಕ್ಯಾಂಟನ್ ಸೌಂಡ್ ಸಿಸ್ಟಮ್, ಮಸಾಜ್ ಫಂಕ್ಷನ್ ಆಯ್ಕೆಯಿರುವ ಫ್ರಂಟ್ ಸೀಟ್‌ಗಳು ಮತ್ತು 15ಡಬ್ಲ್ಯೂ ವೈರ್‌ಲೆಸ್ ಸ್ಮಾರ್ಟ್‌ಫೋನ್ ಚಾರ್ಜರ್‌ನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 10 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಟೊಯೊಟಾ ಕ್ಯಾಮ್ರಿ (Toyota Camry), ಮರ್ಸಿಡಿಸ್ ಬೆಂಜ್ ಸಿ ಕ್ಲಾಸ್ (Mercedes Benz C Class) ಹಾಗೂ ಆಡಿ ಎ6 (Audi A6) ಸೆಡಾನ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








