6.84 ಲಕ್ಷ.. ಭಾರತದಲ್ಲಿ ಮೊಬೈಲ್ ಫೋನ್‌ನಂತೆ ಸೇಲ್ ಆಗ್ತಿದೆ 'ಮಾರುತಿ ಡಿಜೈರ್' ಕಾರು, ಈಗ ವಿದೇಶದಲ್ಲೂ ಬಿಡುಗಡೆ!
ಮಾರುತಿ ಸುಜುಕಿ ಇಂಡಿಯಾ (Maruti Suzuki India) ಪ್ರಖ್ಯಾತ ಕಾರು ತಯಾರಕ ಕಂಪನಿಯಾಗಿದೆ. ಕಳೆದ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಹಲವು ನವೀಕರಣಗಳಿಗೆ ಸಾಕ್ಷಿಯಾಗಿದ್ದ 4ನೇ ತಲೆಮಾರಿನ ಡಿಜೈರ್ (Dzire) ಸೆಡಾನ್‌ನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಿತ್ತು. ಈ ಕಾರಿಗೆ ಭಾರೀ ಬೇಡಿಕೆಯಿದ್ದು, ಇದೇ ಮಾರ್ಚ್‌ನಲ್ಲಿ 15,460 ಯುನಿಟ್ ಡಿಜೈರ್ ಸೆಡಾನ್‌ಗಳನ್ನು ಮಾರಾಟಗೊಳಿಸಲಾಗಿದೆ. ಸದ್ಯ, ಮಾರುತಿ ಸುಜುಕಿ ಕಂಪನಿಯ ಮಾತೃ ಸಂಸ್ಥೆ 'ಸುಜುಕಿ ಮೋಟಾರ್ ಕಾರ್ಪೊರೇಷನ್' ಹೊಸದಾದ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಪವರ್‌ಟ್ರೇನ್ ಆಯ್ಕೆಯೊಂದಿರುವ ಡಿಜೈರ್ ಸೆಡಾನ್‌ನ್ನು ಫಿಲಿಪೈನ್ಸ್‌ನಲ್ಲಿಯೂ ಪರಿಚಯಿಸಿದೆ.
ನೂತನ ಸುಜುಕಿ ಡಿಜೈರ್ (Suzuki Dzire) ಸೆಡಾನ್, ಪಿಹೆಚ್‌ಪಿ 920,000 (ಸುಮಾರು 13.9 ಲಕ್ಷ - ಭಾರತೀಯ ರೂಪಾಯಿ) ಬೆಲೆಯನ್ನು ಹೊಂದಿದೆ. ಇದು 1.2-ಲೀಟರ್ 3-ಸಿಲಿಂಡರ್ ಜಡ್12ಇ ಎಂಜಿನ್‌ನ್ನು ಪಡೆದಿದ್ದು, ಅದಕ್ಕೆ 12ವಿ ಹೈಬ್ರಿಡ್ ಸಿಸ್ಟಮ್‌ನ್ನು ಜೋಡಿಸಲಾಗಿದೆ. ವಿಶೇಷವಾಗಿ 0.072 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ.

ಈ ಡಿಜೈರ್ ಕಾರಿನಲ್ಲಿರುವ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಎಂಜಿನ್, 80 ಬಿಹೆಚ್‍ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಜೊತೆಗೆ ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ಆದರೆ, ಮೈಲೇಜ್ ಕುರಿತಂತೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.
ಫಿಲಿಪೈನ್ಸ್‌ನಲ್ಲಿ ಬಿಡುಗಡೆಯಾಗಿರುವ ಸುಜುಕಿ ಡಿಜೈರ್ ಸೆಡಾನ್, ಭಾರತದಲ್ಲಿ ಖರೀದಿಗೆ ದೊರೆಯುವ ಡಿಜೈರ್ ಕಾರಿನಂತೆಯೇ ಮುಂಭಾಗ (ಫ್ರಂಟ್) ಹಾಗೂ ಹಿಂಭಾಗದ (ರೇರ್) ವಿನ್ಯಾಸವನ್ನು ಹೊಂದಿದೆ. ಬಹುಮುಖ್ಯವಾಗಿ ದೊಡ್ಡದಾದ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಡುಯಲ್ ಟೋನ್ ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಸುಜುಕಿ ಡಿಜೈರ್ ಕಾರಿನಲ್ಲೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಇನ್ಸ್ಟ್ರುಮೆಂಟ್ ಕ್ಲಸ್ಟರ್, 3-ಸ್ಪೋಕ್ ಸ್ಟೀರಿಂಗ್ ವೀಲ್, ರೇರ್ ಎಸಿ ವೆಂಟ್‌ಗಳು, ಕ್ರೂಸ್ ಕಂಟ್ರೋಲ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಆದರೆ, ಸನ್‌ರೂಫ್‌ನ್ನು ಕೈಬಿಡಲಾಗಿದೆ.
ನೂತನ ಸುಜುಕಿ ಡಿಜೈರ್ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. ಅದಕ್ಕಾಗಿ 6- ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ 3-ಪಾಯಿಂಟ್ ಸೀಟ್ ಬೆಲ್ಟ್‌ನಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಪಡೆದಿದೆ.

ಈಗಾಗಲೇ, ಸುಜುಕಿ ಮೋಟಾರ್ ದೊಡ್ಡ ಕಾರುಗಳಂತೆ ಸಣ್ಣ ಕಾರುಗಳಲ್ಲಿಯೂ ಹೈಬ್ರಿಡ್ ಟೆಕ್ನಾಲಜಿಯನ್ನು ಪರಿಚಯಿಸಲು ಮುಂದಾಗಿದೆ. ಅದರ ಭಾಗವಾಗಿ ಹೊಸ ಡಿಜೈರ್ ಸೆಡಾನ್‌ನ್ನು ಫಿಲಿಪೈನ್ಸ್ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿದೆ. ಈ ಟೆಕ್ನಾಲಜಿ ಕಾರುಗಳಲ್ಲಿ ಇಂಧನ ದಕ್ಷತೆಯನ್ನು ಸುಧಾರಿಸುವುದಿಲ್ಲ. ಬದಲಾಗಿ ಅವುಗಳು ದೀರ್ಘಕಾಲ ಬಾಳಿಕೆ ಬರುವಂತೆ ಮಾಡುತ್ತದೆ. ಮುಂಬರುವ ದಿನಗಳಲ್ಲಿ ದೇಶೀಯವಾಗಿಯೂ ಇದೇ ಡಿಜೈರ್ ಸೇರಿದಂತೆ ಬಲೆನೊ, ಸ್ವಿಫ್ಟ್, ಫ್ರಾಂಕ್ಸ್ ಮತ್ತು ವ್ಯಾಗನ್ಆರ್ ಕಾರುಗಳು ಕೂಡ ಹೈಬ್ರಿಡ್ ಟೆಕ್ನಾಲಜಿಯೊಂದಿಗೆ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications